2 ಪೂರ್ವಕಾಲ ವೃತ್ತಾಂತ 9:1 - ಕನ್ನಡ ಸಮಕಾಲಿಕ ಅನುವಾದ1 ಶೆಬದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿದಾಗ, ಒಗಟುಗಳಿಂದ ಅವನನ್ನು ಪರೀಕ್ಷಿಸಲು ಬಂದಳು. ಅವಳು ಮಹಾ ಗುಂಪಿನ ಸಂಗಡ ಸುಗಂಧದ್ರವ್ಯಗಳನ್ನೂ, ಬಹಳಷ್ಟು ಬಂಗಾರವನ್ನೂ, ಅಮೂಲ್ಯವಾದ ರತ್ನಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ, ತನ್ನ ಹೃದಯದಲ್ಲಿದ್ದ ಎಲ್ಲವನ್ನು ಕುರಿತು ಅವನ ಸಂಗಡ ಮಾತನಾಡಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಶೆಬಾದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕಾಗಿ ಯೆರೂಸಲೇಮಿಗೆ ಬಂದಳು. ಆಕೆಯು ಸುಗಂಧದ್ರವ್ಯ, ಲೆಕ್ಕವಿಲ್ಲದಷ್ಟು ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾ ಪರಿವಾರದೊಡನೆ ಸೊಲೊಮೋನನ ಬಳಿಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತು ಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಅವನೊಡನೆ ಸಂಭಾಷಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಶೆಬಾದ ರಾಣಿ ಸೊಲೊಮೋನನ ಕೀರ್ತಿಯನ್ನು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕೆ ಜೆರುಸಲೇಮಿಗೆ ಬಂದಳು. ಆಕೆ ಸುಗಂಧದ್ರವ್ಯ, ಅಪರಿಮಿತವಾದ ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾಪರಿವಾರದೊಡನೆ ಸೊಲೊಮೋನನ ಬಳಿಗೆ ಬಂದಳು. ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಅವನೊಡನೆ ಸಂಭಾಷಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಶೆಬದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿ ಅವನನ್ನು ಒಗಟುಗಳಿಂದ ಪರೀಕ್ಷಿಸುವದಕ್ಕೆ ಯೆರೂಸಲೇವಿುಗೆ ಬಂದಳು. ಆಕೆಯು ಸುಗಂಧದ್ರವ್ಯ, ಅಪರಿವಿುತವಾದ ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾ ಪರಿವಾರದೊಡನೆ ಸೊಲೊಮೋನನ ಬಳಿಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಅವನೊಡನೆ ಸಂಭಾಷಿಸಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಸೊಲೊಮೋನನ ಪ್ರಖ್ಯಾತಿಯನ್ನು ಶೆಬದ ರಾಣಿಯು ಕೇಳಿ ಅವನನ್ನು ಕಠಿಣವಾದ ಪ್ರಶ್ನೆಗಳಿಂದ ಪರೀಕ್ಷಿಸುವದಕ್ಕಾಗಿ ಜೆರುಸಲೇಮಿಗೆ ಬಂದಳು. ಆಕೆಯು ದೊಡ್ಡ ಪರಿವಾರದೊಂದಿಗೆ ಬಂದಳು. ಜೊತೆಗೆ ಒಂಟೆಗಳ ಮೇಲೆ ಸುಗಂಧದ್ರವ್ಯವನ್ನೂ ಅಪರಿಮಿತವಾದ ಬಂಗಾರವನ್ನೂ ವಜ್ರವೈಢೂರ್ಯಗಳನ್ನೂ ಹೇರಿಕೊಂಡು ಬಂದಳು. ಅಲ್ಲಿ ಆಕೆ ಸೊಲೊಮೋನನ ಸಂಗಡ ಮಾತನಾಡಿ ತನ್ನಲ್ಲಿದ್ದ ಎಷ್ಟೋ ಪ್ರಶ್ನೆಗಳನ್ನು ಕೇಳಿದಳು. ಅಧ್ಯಾಯವನ್ನು ನೋಡಿ |