Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 9:11 - ಕನ್ನಡ ಸಮಕಾಲಿಕ ಅನುವಾದ

11 ಅರಸನು ಆ ಸುಗಂಧದ ಮರಗಳಿಂದ ಯೆಹೋವ ದೇವರ ಆಲಯಕ್ಕೋಸ್ಕರವೂ, ಅರಮನೆಗೋಸ್ಕರವೂ ಸೋಪಾನಗಳನ್ನು ಮಾಡಿಸಿದನು. ಇದಲ್ಲದೆ ಅವುಗಳಿಂದ ಹಾಡುವವರಿಗೋಸ್ಕರ ಕಿನ್ನರಿಗಳನ್ನೂ ವೀಣೆಗಳನ್ನೂ ಮಾಡಿಸಿದನು. ಯೆಹೂದ ದೇಶದಲ್ಲಿ ಹಿಂದೆಂದೂ ಇಂಥವುಗಳನ್ನು ಕಂಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅರಸನು ಸುಗಂಧದ ಮರದಿಂದ ಯೆಹೋವನ ದೇವಾಲಯವನ್ನು ಹಾಗೂ ಅರಮನೆಗಳಿಗೆ ಸೋಪಾನಗಳನ್ನೂ, ಸಂಗೀತಗಾರರಿಗಾಗಿ ಕಿನ್ನರಿಗಳನ್ನೂ, ಸ್ವರಮಂಡಲಗಳನ್ನೂ ಮಾಡಿಸಿದನು. ಇಂಥ ಗಂಧದ ಮರವು ಹಿಂದೆಂದೂ ಯೆಹೂದ ದೇಶದಲ್ಲಿ ಕಂಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅರಸನು ಸುಗಂಧದ ಮರದಿಂದ ದೇವಾಲಯ ಹಾಗೂ ಅರಮನೆಗಳಿಗೆ ಸೋಪಾನಗಳನ್ನೂ ಗಾಯಕರಿಗಾಗಿ ಕಿನ್ನರಿಗಳನ್ನೂ ಸ್ವರಮಂಡಲಗಳನ್ನೂ ಮಾಡಿಸಿದನು. ಇಂಥ ಸುಗಂಧದ ಮರವನ್ನು ಹಿಂದೆಂದೂ ಜುದೇಯ ನಾಡಿನಲ್ಲಿ ಕಂಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅರಸನು ಸುಗಂಧದ ಮರದಿಂದ ದೇವಾಲಯ, ಅರಮನೆ ಇವುಗಳಿಗೆ ಸೋಪಾನಗಳನ್ನೂ ಗಾಯಕರಿಗೋಸ್ಕರ ಕಿನ್ನರಿಗಳನ್ನೂ ಸ್ವರಮಂಡಲಗಳನ್ನೂ ಮಾಡಿಸಿದನು. ಇಂಥ [ಸುಗಂಧದ ಮರವು] ಮುಂಚೆ ಯೆಹೂದ ದೇಶದಲ್ಲಿ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಸುಗಂಧದ ಮರಗಳಿಂದ ಸೊಲೊಮೋನನು ದೇವಾಲಯದ ಮತ್ತು ಅರಮನೆಯ ಮೆಟ್ಟಲುಗಳನ್ನು ಮಾಡಿಸಿದನು; ಅಲ್ಲದೆ ಗಾಯಕರಿಗಾಗಿ ಹಾರ್ಪ್ ಮತ್ತು ಲೈರ್ ವಾದ್ಯಗಳನ್ನೂ ಅದರಿಂದ ತಯಾರಿಸಿದನು. ಯೆಹೂದ ಪ್ರಾಂತ್ಯದಲ್ಲಿ ಯಾರೂ ಅಂತಹ ಸುಂದರವಾದ ಸುಗಂಧವಸ್ತುಗಳನ್ನು ನೋಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 9:11
9 ತಿಳಿವುಗಳ ಹೋಲಿಕೆ  

ಅರಸನು ಆ ಸುಗಂಧದ ಮರಗಳಿಂದ ಯೆಹೋವ ದೇವರ ಆಲಯಕ್ಕೋಸ್ಕರವೂ ಅರಮನೆಗೋಸ್ಕರವೂ ಸ್ತಂಭಗಳನ್ನು ಮಾಡಿಸಿದನು. ಇದಲ್ಲದೆ ಅವುಗಳಿಂದ ಹಾಡುವವರಿಗೋಸ್ಕರ ಕಿನ್ನರಿಗಳನ್ನೂ, ವೀಣೆಗಳನ್ನೂ ಮಾಡಿಸಿದನು. ಅಂದಿನಿಂದ ಈ ದಿನದವರೆಗೂ ಅಂಥಾ ಸುಗಂಧದ ಮರಗಳು ಬಂದದ್ದೂ ಇಲ್ಲ, ಕಂಡದ್ದೂ ಇಲ್ಲ.


ಸುರುಳಿಯನ್ನು ತೆಗೆದುಕೊಂಡಾಗ, ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿ ಆಗಿರುವವರ ಮುಂದೆ ಅಡ್ಡಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.


ಇದಲ್ಲದೆ ದಾವೀದನೂ, ಸೈನ್ಯಾಧಿಪತಿಗಳೂ ಆಸಾಫ್, ಹೇಮಾನ್, ಯೆದುತೂನ್; ಇವರ ಪುತ್ರರಲ್ಲಿ ಕಿನ್ನರಿಗಳಿಂದಲೂ, ವೀಣೆಗಳಿಂದಲೂ, ತಾಳಗಳಿಂದಲೂ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರವಾಗಿತ್ತು.


ಇದಲ್ಲದೆ ನಾಲ್ಕು ಸಾವಿರ ಮಂದಿ ದ್ವಾರಪಾಲಕರಾಗಿದ್ದರು. ನಾಲ್ಕು ಸಾವಿರ ಮಂದಿ ಸ್ತುತಿಸುವುದಕ್ಕೆ ತಾನು ಸಿದ್ಧಮಾಡಿದ ವಾದ್ಯಗಳಿಂದ ಯೆಹೋವ ದೇವರನ್ನು ಸ್ತುತಿಸಿದರು.”


“ನೀನು ಇಲ್ಲಿಗೆ ದೇವದಾರು ಮರಗಳನ್ನೂ, ತುರಾಯಿ ಮರಗಳನ್ನೂ, ಸುಗಂಧದ ಮರಗಳನ್ನೂ ಲೆಬನೋನಿನಿಂದ ನನ್ನ ಬಳಿಗೆ ಕಳುಹಿಸು. ಲೆಬನೋನಿನಲ್ಲಿ ಮರಗಳನ್ನು ಕಡಿಯಲು ನಿನ್ನ ಸೇವಕರು ನಿಪುಣರಾಗಿದ್ದಾರೆ. ನನ್ನ ಸೇವಕರು ಅವರ ಸಂಗಡ ಇರುವರು.


ಹೀರಾಮನ ಸೇವಕರೂ, ಸೊಲೊಮೋನನ ಸೇವಕರೂ ಓಫೀರಿನಿಂದ ಬಂಗಾರವನ್ನೂ, ಸುಗಂಧದ ಮರಗಳನ್ನೂ, ಅಮೂಲ್ಯವಾದ ರತ್ನಗಳನ್ನೂ ತಂದರು.


ಅರಸನಾದ ಸೊಲೊಮೋನನು, ಶೆಬದ ರಾಣಿಯು ಅರಸನಿಗೆ ತಂದ ಕಾಣಿಕೆಗಳ ಪ್ರತಿಯಾಗಿ ಕೊಟ್ಟದ್ದಲ್ಲದೆ, ಅವಳು ಬಯಸಿ ಕೇಳಿದ್ದನ್ನೆಲ್ಲಾ ಅವಳಿಗೆ ಕೊಟ್ಟನು. ಅನಂತರ ಅವಳು ತನ್ನ ಸೇವಕರೊಡನೆ ತಿರುಗಿ ತಮ್ಮ ದೇಶಕ್ಕೆ ಹೋದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು