Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 9:12 - ಕನ್ನಡ ಸಮಕಾಲಿಕ ಅನುವಾದ

12 ಅರಸನಾದ ಸೊಲೊಮೋನನು, ಶೆಬದ ರಾಣಿಯು ಅರಸನಿಗೆ ತಂದ ಕಾಣಿಕೆಗಳ ಪ್ರತಿಯಾಗಿ ಕೊಟ್ಟದ್ದಲ್ಲದೆ, ಅವಳು ಬಯಸಿ ಕೇಳಿದ್ದನ್ನೆಲ್ಲಾ ಅವಳಿಗೆ ಕೊಟ್ಟನು. ಅನಂತರ ಅವಳು ತನ್ನ ಸೇವಕರೊಡನೆ ತಿರುಗಿ ತಮ್ಮ ದೇಶಕ್ಕೆ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅರಸನಾದ ಸೊಲೊಮೋನನು ಶೆಬಾದ ರಾಣಿಯಿಂದ ತನಗೆ ದೊರಕಿದ ಬಹುಮಾನಕ್ಕೆ ಪ್ರತಿಯಾಗಿ, ಆಕೆಗೆ ತಾನು ಕೊಟ್ಟು ವಸ್ತುಗಳನ್ನಲ್ಲದೆ, ಆಕೆಯು ಕೇಳಿದವುಗಳನ್ನೆಲ್ಲಾ ಕೊಟ್ಟುಬಿಟ್ಟನು. ಅನಂತರ ಆಕೆಯು ತನ್ನ ಪರಿವಾರದವರೊಡನೆ ಸ್ವದೇಶಕ್ಕೆ ಹೊರಟುಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅರಸ ಸೊಲೊಮೋನನು ಶೆಬಾದ ರಾಣಿಯಿಂದ ತನಗೆ ದೊರಕಿದ ಬಹುಮಾನಕ್ಕೆ ಪ್ರತಿಯಾಗಿ ಆಕೆಗೆ ತಾನು ಕೊಟ್ಟ ವಸ್ತುಗಳನ್ನಲ್ಲದೆ ಆಕೆ ಕೇಳಿದವುಗಳನ್ನೆಲ್ಲಾ ಕೊಟ್ಟುಬಿಟ್ಟನು. ಅನಂತರ ಆಕೆ ತನ್ನ ಪರಿವಾರದವರೊಡನೆ ಸ್ವದೇಶಕ್ಕೆ ಹೊರಟುಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅರಸನಾದ ಸೊಲೊಮೋನನು ಶೆಬದ ರಾಣಿಯಿಂದ ತನಗೆ ದೊರಕಿದ ಬಹುಮಾನಕ್ಕೆ ಪ್ರತಿಯಾಗಿ ಆಕೆಗೆ ತಾನು ಕೊಟ್ಟ ವಸ್ತುಗಳನ್ನಲ್ಲದೆ ಆಕೆಯು ಕೇಳಿದವುಗಳನ್ನೆಲ್ಲಾ ಕೊಟ್ಟುಬಿಟ್ಟನು. ಅನಂತರ ಆಕೆಯು ತನ್ನ ಪರಿವಾರದವರೊಡನೆ ಸ್ವದೇಶಕ್ಕೆ ಹೊರಟುಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಶೆಬದ ರಾಣಿಯು ಕೇಳಿದ್ದನ್ನೆಲ್ಲಾ ಸೊಲೊಮೋನನು ಕೊಟ್ಟನು. ಆಕೆಯು ಅವನಿಗೆ ತಂದದ್ದಕ್ಕಿಂತ ಹೆಚ್ಚಾಗಿ ಆಕೆಗೆ ಕೊಟ್ಟನು. ಅನಂತರ ಶೆಬದ ರಾಣಿಯೂ ಆಕೆಯ ಪರಿವಾರವೂ ತಮ್ಮ ದೇಶಕ್ಕೆ ತೆರಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 9:12
5 ತಿಳಿವುಗಳ ಹೋಲಿಕೆ  

ಅರಸನಾದ ಸೊಲೊಮೋನನು ಶೆಬದ ರಾಣಿಗೆ ಔದಾರ್ಯವಾಗಿ ಕೊಟ್ಟ ಕಾಣಿಕೆಗಳ ಹೊರತಾಗಿ, ಅವಳು ಬಯಸಿ ಕೇಳಿದ್ದನ್ನೆಲ್ಲಾ ಅವಳಿಗೆ ಕೊಟ್ಟನು. ಅನಂತರ ಅವಳು ತನ್ನ ಸೇವಕರೊಡನೆ ತಿರುಗಿ ತಮ್ಮ ದೇಶಕ್ಕೆ ಹೋದಳು.


ನಮ್ಮಲ್ಲಿ ಕಾರ್ಯಸಾಧಿಸುವ ತಮ್ಮ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾಗಿಯೇ ಎಲ್ಲವನ್ನೂ ಮಾಡಲು ಶಕ್ತರಾದ ದೇವರಿಗೆ


ದೇವರು ನಿಮ್ಮ ಹೃದಯದ ಬಯಕೆಯನ್ನು ನಿಮಗೆ ದಯಪಾಲಿಸಲಿ; ನಿಮ್ಮ ಎಲ್ಲಾ ಯೋಜನೆಗಳಲ್ಲಿಯೂ ಯಶಸ್ಸನ್ನು ನೀಡಲಿ.


ಅರಸನು ಆ ಸುಗಂಧದ ಮರಗಳಿಂದ ಯೆಹೋವ ದೇವರ ಆಲಯಕ್ಕೋಸ್ಕರವೂ, ಅರಮನೆಗೋಸ್ಕರವೂ ಸೋಪಾನಗಳನ್ನು ಮಾಡಿಸಿದನು. ಇದಲ್ಲದೆ ಅವುಗಳಿಂದ ಹಾಡುವವರಿಗೋಸ್ಕರ ಕಿನ್ನರಿಗಳನ್ನೂ ವೀಣೆಗಳನ್ನೂ ಮಾಡಿಸಿದನು. ಯೆಹೂದ ದೇಶದಲ್ಲಿ ಹಿಂದೆಂದೂ ಇಂಥವುಗಳನ್ನು ಕಂಡಿರಲಿಲ್ಲ.


ಸೊಲೊಮೋನನಿಗೆ ಪ್ರತಿ ವರುಷ ಸುಮಾರು ಇಪ್ಪತ್ತಮೂರು ಸಾವಿರ ಕಿಲ್ರೊಗ್ರಾಂ ಬಂಗಾರವು ದೊರಕುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು