Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 9:23 - ಕನ್ನಡ ಸಮಕಾಲಿಕ ಅನುವಾದ

23 ದೇವರು ಸೊಲೊಮೋನನ ಹೃದಯದಲ್ಲಿ ಕೊಟ್ಟಿದ್ದ ಜ್ಞಾನವನ್ನು ಕೇಳುವುದಕ್ಕಾಗಿ ಭೂಲೋಕದಲ್ಲಿರುವ ಸಮಸ್ತ ಅರಸರು ಅವನ ದರ್ಶನವನ್ನು ಬಯಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಭೂರಾಜರೆಲ್ಲರೂ, ದೇವರು ಅವನಿಗೆ ಅನುಗ್ರಹಿಸಿದ ಜ್ಞಾನವಾಕ್ಯಗಳನ್ನು ಕೇಳುವುದಕ್ಕಾಗಿ ಸೊಲೊಮೋನ ದರ್ಶನಕ್ಕೆ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ದೇವರು ಅವನಿಗೆ ಅನುಗ್ರಹಿಸಿದ ಜ್ಞಾನವಾಕ್ಯಗಳನ್ನು ಕೇಳುವುದಕ್ಕಾಗಿ ಭೂರಾಜರೆಲ್ಲರು ಅವನ ದರ್ಶನಕ್ಕೆ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಭೂರಾಜರೆಲ್ಲರೂ ದೇವರು ಅವನಿಗೆ ಅನುಗ್ರಹಿಸಿದ ಜ್ಞಾನ ವಾಕ್ಯಗಳನ್ನು ಕೇಳುವದಕ್ಕೋಸ್ಕರ ಅವನ ದರ್ಶನಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ದೇವರು ಅವನಿಗೆ ದಯಪಾಲಿಸಿದ ಜ್ಞಾನವನ್ನು ನೋಡಿ ಅವನಿಂದ ಜ್ಞಾನವಾಕ್ಯಗಳನ್ನು ಕೇಳಲು ಲೋಕದ ರಾಜರುಗಳು ಅವನ ಬಳಿಗೆ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 9:23
19 ತಿಳಿವುಗಳ ಹೋಲಿಕೆ  

ಆದರೆ ಸ್ವರ್ಗೀಯ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಅಧೀನವಾದದ್ದು, ಕರುಣೆಯಿಂದ ತುಂಬಿದ್ದು ಒಳ್ಳೆಯ ಫಲವನ್ನು ಕೊಡುವಂಥದ್ದು ಆಗಿದೆ. ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.


ನಿಮ್ಮಲ್ಲಿ ಯಾರಿಗಾದರೂ ಜ್ಞಾನ ಕಡಿಮೆಯಾಗಿದ್ದರೆ, ಅವರು ದೇವರನ್ನು ಕೇಳಿಕೊಳ್ಳಲಿ, ಅದು ಅವರಿಗೆ ದೊರಕುವುದು. ದೇವರು ತಪ್ಪು ಕಂಡುಹಿಡಿಯದೆ ಎಲ್ಲರಿಗೂ ಉದಾರಮನಸ್ಸಿನಿಂದ ಕೊಡುವರು.


ಏಕೆಂದರೆ ಯೆಹೋವ ದೇವರೇ ಜ್ಞಾನವನ್ನು ಕೊಡುತ್ತಾರೆ; ಅವರ ಬಾಯಿಂದಲೇ ಅರಿವೂ ತಿಳುವಳಿಕೆಯೂ ಹೊರಟುಬರುತ್ತವೆ.


ಸೊಲೊಮೋನನ ಜ್ಞಾನವನ್ನು ಕುರಿತು ಕೇಳಿದ ಭೂಮಿಯ ಮೇಲಿರುವ ಸಮಸ್ತ ಅರಸರ ಬಳಿಯಿಂದ ಎಲ್ಲಾ ಜನಗಳು ಅವನ ಜ್ಞಾನವನ್ನು ಕೇಳಲು ಬಂದರು.


ನಮ್ಮ ಕರ್ತ ಯೇಸುಕ್ರಿಸ್ತರ ದೇವರೂ ಮಹಿಮೆಯ ತಂದೆಯಾದವರನ್ನು ನೀವು ಪೂರ್ಣವಾಗಿ ತಿಳಿದುಕೊಳ್ಳುವಂತೆ ಜ್ಞಾನದ ಮತ್ತು ಪ್ರಕಟಣೆಯ ಆತ್ಮವನ್ನು ನಿಮಗೆ ಅನುಗ್ರಹಿಸಲಿ ಎಂದು ನಿಮಗಾಗಿ ಯಾವಾಗಲೂ ಪ್ರಾರ್ಥನೆ ಮಾಡುವವನಾಗಿದ್ದೇನೆ.


ಹೇಗೆಂದರೆ, ಪವಿತ್ರಾತ್ಮ ದೇವರ ಮೂಲಕ ಒಬ್ಬನಿಗೆ ಜ್ಞಾನ ವಾಕ್ಯವು, ಒಬ್ಬನಿಗೆ ಆ ಆತ್ಮರ ಅನುಸಾರವಾಗಿ ವಿದ್ಯಾವಾಕ್ಯವು,


ನೀವು ದೇವರಿಂದಲೇ ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿಯೂ ಶುದ್ಧೀಕರಣವೂ ವಿಮೋಚನೆಯೂ ಆಗಿದ್ದಾರೆ.


ಏಕೆಂದರೆ ನಿಮ್ಮ ವಿರೋಧಿಗಳು ಸಹ ಪ್ರತಿವಾದಿಸಲಾಗದ ಇಲ್ಲವೆ ವಿರೋಧಿಸಲಾಗದ ಮಾತನ್ನೂ ಜ್ಞಾನವನ್ನೂ ನಾನು ನಿಮಗೆ ಕೊಡುವೆನು.


ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ. ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ, ವಿವೇಕವೂ, ಬುದ್ಧಿಯೂ, ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ, ಜ್ಯೋತಿಷ್ಯರಿಗೂ, ಪಂಡಿತರಿಗೂ, ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು.


ಈ ನಾಲ್ಕು ಯೌವನಸ್ಥರಿಗೆ ದೇವರು ಎಲ್ಲಾ ವಿದ್ಯೆಯಲ್ಲಿಯೂ, ಜ್ಞಾನದಲ್ಲಿಯೂ, ತಿಳುವಳಿಕೆಯನ್ನೂ, ವಿವೇಕವನ್ನೂ ಕೊಟ್ಟರು. ದಾನಿಯೇಲನು ಸಕಲ ದರ್ಶನಗಳಲ್ಲಿಯೂ, ಕನಸುಗಳಲ್ಲಿಯೂ ತಿಳುವಳಿಕೆಯುಳ್ಳವನಾಗಿದ್ದನು.


ಆ ದಿನದಲ್ಲಿ ಇಷಯನ ವಂಶದಿಂದ ಜನರಿಗೆ ಒಂದು ಬೇರು ಗುರುತಿನ ಧ್ವಜವಾಗಿ ನಿಲ್ಲುವುದು. ಅವರ ವಿಶ್ರಾಂತಿ ಸ್ಥಳವು ಮಹಿಮೆಯುಳ್ಳದ್ದಾಗಿರುವುದು.


ಅವನ ಮೇಲೆ ಯೆಹೋವ ದೇವರ ಆತ್ಮ, ಜ್ಞಾನ ಮತ್ತು ವಿವೇಕದಾಯಕ ಆತ್ಮ, ಸಮಾಲೋಚನೆ ಮತ್ತು ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳುವಳಿಕೆ ಮತ್ತು ಯೆಹೋವ ದೇವರ ಭಯದ ಆತ್ಮ,


ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇಲರು ಕೇಳಿ, ಅರಸನಿಗೆ ಭಯಪಟ್ಟರು. ಏಕೆಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ಕಂಡರು.


ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ, ಜ್ಞಾನದಲ್ಲಿಯೂ ಭೂಲೋಕದ ಸಮಸ್ತ ಅರಸರಿಗಿಂತ ಮಿಗಿಲಾಗಿದ್ದನು.


ಅವರೆಲ್ಲರೂ ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ, ಬಂಗಾರದ ಪಾತ್ರೆಗಳನ್ನೂ, ವಸ್ತ್ರಗಳನ್ನೂ, ಆಯುಧಗಳನ್ನೂ, ಸುಗಂಧಗಳನ್ನೂ, ಕುದುರೆಗಳನ್ನೂ, ಹೇಸರಗತ್ತೆಗಳನ್ನೂ ವರುಷ ವರುಷವೂ ನೇಮಕವಾದ ಪ್ರಕಾರ ತರುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು