Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 9:25 - ಕನ್ನಡ ಸಮಕಾಲಿಕ ಅನುವಾದ

25 ಸೊಲೊಮೋನನಿಗೆ ನಾಲ್ಕು ಸಾವಿರ ಕುದುರೆ ಲಾಯಗಳು ಮತ್ತು ರಥಗಳು ಇದ್ದವು. ಇದಲ್ಲದೆ ಹನ್ನೆರಡು ಸಾವಿರ ರಾಹುತರಿದ್ದರು. ಅವರನ್ನು ರಥಗಳ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಸೊಲೊಮೋನನು ಅಶ್ವಸಹಿತವಾದ ರಥಗಳು ನಾಲ್ಕು ಸಾವಿರ ಹಾಗೂ ರಾಹುತರು ಹನ್ನೆರಡು ಸಾವಿರ. ಇವುಗಳನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೂ ರಥಗಳಿಗಾಗಿ ನೇಮಿಸಿದ್ದ ಪಟ್ಟಣಗಳಲ್ಲೂ ಇರಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಸೊಲೊಮೋನನ ಅಶ್ವಸಹಿತವಾದ ರಥಗಳು ನಾಲ್ಕು ಸಾವಿರ ಹಾಗೂ ರಾಹುತರು ಹನ್ನೆರಡು ಸಾವಿರ. ಇವುಗಳನ್ನು ಜೆರುಸಲೇಮಿನಲ್ಲಿ ತನ್ನ ಬಳಿಯಲ್ಲೂ ರಥಗಳಿಗಾಗಿ ನೇಮಿಸಿದ್ದ ಪಟ್ಟಣಗಳಲ್ಲೂ ಇರಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಸೊಲೊಮೋನನ ಅಶ್ವಸಹಿತವಾದ ರಥಗಳು ನಾಲ್ಕು ಸಾವಿರ, ರಾಹುತರು ಹನ್ನೆರಡು ಸಾವಿರ. ಇವುಗಳನ್ನು ಯೆರೂಸಲೇವಿುನಲ್ಲಿ ತನ್ನ ಬಳಿಯಲ್ಲಿಯೂ ರಥಗಳಿಗೋಸ್ಕರ ನೇವಿುಸಿದ ಪಟ್ಟಣಗಳಲ್ಲಿಯೂ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಸೊಲೊಮೋನನ ರಥಗಳಿಗೂ ರಥಾಶ್ವಗಳಿಗೂ ನಾಲ್ಕು ಸಾವಿರ ಲಾಯಗಳಿದ್ದವು. ಅವನ ಬಳಿಯಲ್ಲಿ ಹನ್ನೆರಡು ಸಾವಿರ ರಾಹುತರು ಇದ್ದರು. ಅವರನ್ನು ಪ್ರತ್ಯೇಕವಾದ ಪಟ್ಟಣಗಳಲ್ಲಿಯೂ ಜೆರುಸಲೇಮಿನಲ್ಲಿಯೂ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 9:25
4 ತಿಳಿವುಗಳ ಹೋಲಿಕೆ  

ಸೊಲೊಮೋನನಿಗೆ ತನ್ನ ರಥಗಳಿಗೋಸ್ಕರ ನಲವತ್ತು ಸಾವಿರ ಕುದುರೆಗಳಿಗೆ ಸ್ಥಳವಿತ್ತು, ಹನ್ನೆರಡು ಸಾವಿರ ರಾಹುತರೂ ಇದ್ದರು.


ಇದಲ್ಲದೆ ಸೊಲೊಮೋನನು ರಥಗಳನ್ನೂ, ರಾಹುತರನ್ನೂ ಕೂಡಿಸಿದನು. ಸಾವಿರದ ನಾನೂರು ರಥಗಳು, ಹನ್ನೆರಡು ಸಾವಿರ ಕುದುರೆಯ ರಾಹುತರು ಇದ್ದರು. ಇವುಗಳಲ್ಲಿ ಕೆಲವನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೇ ಇರಿಸಿದನು, ಉಳಿದವುಗಳನ್ನು ರಥಗಳ ಪಟ್ಟಣಗಳಲ್ಲಿಯೂ ಇರಿಸಿದನು.


ಇದಲ್ಲದೆ ಸೊಲೊಮೋನನು ರಥಗಳನ್ನೂ, ರಾಹುತರನ್ನೂ ಕೂಡಿಸಿದನು. ಸಾವಿರದ ನಾನೂರು ರಥಗಳು, ಹನ್ನೆರಡು ಸಾವಿರ ಕುದುರೆಯ ರಾಹುತರು ಇದ್ದರು. ಇವುಗಳಲ್ಲಿ ಕೆಲವನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೇ ಇರಿಸಿದನು, ಉಳಿದವುಗಳನ್ನು ರಥಗಳ ಪಟ್ಟಣಗಳಲ್ಲಿಯೂ ಇರಿಸಿದನು.


ಅರಸನು ತನಗಾಗಿ ಕುದುರೆಗಳನ್ನು ಹೆಚ್ಚಿಸಿಕೊಳ್ಳಬಾರದು. ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನರನ್ನು ಈಜಿಪ್ಟ್ ದೇಶಕ್ಕೆ ಕಳುಹಿಸಬಾರದು. “ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗಬಾರದು,” ಎಂದು ಯೆಹೋವ ದೇವರು ನಿಮಗೆ ಹೇಳಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು