Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 9:26 - ಕನ್ನಡ ಸಮಕಾಲಿಕ ಅನುವಾದ

26 ಅವನು ಯೂಫ್ರೇಟೀಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ದೇಶವನ್ನು ಹಿಡಿದು ಈಜಿಪ್ಟಿನ ಮೇರೆಯವರೆಗೆ ಇರುವ ಸಮಸ್ತ ಅರಸರ ಮೇಲೆ ಆಳುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನು ಯೂಫ್ರೆಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜರನ್ನು ಆಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅವನು ಯೂಫ್ರೆಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಈಜಿಪ್ಟರ ದೇಶಗಳವರೆಗೂ ಇರುವ ಎಲ್ಲ ರಾಜರನ್ನು ಆಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವನು ಯೂಫ್ರೇಟೀಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜರನ್ನು ಆಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯೂಫ್ರೇಟೀಸ್ ನದಿಯಿಂದ ಹಿಡಿದು ಫಿಲಿಷ್ಟಿಯರ ರಾಜ್ಯ ಮತ್ತು ಈಜಿಪ್ಟಿನ ಮೇರೆಯ ತನಕವಿದ್ದ ಎಲ್ಲಾ ಅರಸರುಗಳಿಗೆ ಸೊಲೊಮೋನನೇ ರಾಜನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 9:26
9 ತಿಳಿವುಗಳ ಹೋಲಿಕೆ  

ಇದಲ್ಲದೆ ಸೊಲೊಮೋನನು ಯೂಫ್ರೇಟೀಸ್ ಮೊದಲುಗೊಂಡು ಫಿಲಿಷ್ಟಿಯರ ದೇಶ ಮತ್ತು ಈಜಿಪ್ಟಿನ ಮೇರೆಯವರೆಗೂ ಇರುವ ಸಮಸ್ತ ರಾಜ್ಯಗಳನ್ನು ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳೆಲ್ಲಾ ಕಪ್ಪಗಳನ್ನು ಕೊಡುವವರಾಗಿ ಅವನಿಗೆ ಅಧೀನರಾಗಿದ್ದರು.


ಅದೇ ದಿನದಲ್ಲಿ ಯೆಹೋವ ದೇವರು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಈಜಿಪ್ಟ್ ದೇಶದ ನದಿಯಿಂದ ಮಹಾನದಿ ಯೂಫ್ರೇಟೀಸ್ ನದಿಯವರೆಗೆ ವಾಸಿಸುವ


ಯೂಫ್ರೇಟೀಸ್ ನದಿಯ ಈಚೆಯಲ್ಲಿ ತಿಪ್ಸಹು ಮೊದಲುಗೊಂಡು ಗಾಜದವರೆಗೂ, ನದಿಯ ಈಚೆಯಲ್ಲಿರುವ ಸಮಸ್ತ ಅರಸರ ಮೇಲೆ ಅವನು ಅಧಿಕಾರಿಯಾಗಿದ್ದನು. ಇದಲ್ಲದೆ ಅವನಿಗೆ ಸುತ್ತಲಿರುವ ಸಮಸ್ತ ದಿಕ್ಕಿನಲ್ಲಿ ಅವನಿಗೆ ಸಮಾಧಾನವಿತ್ತು.


“ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದವರೆಗೆ ಮರುಭೂಮಿಯಿಂದ ನದಿಯವರೆಗೂ ನಿಮ್ಮ ಮೇರೆಗಳನ್ನು ನೇಮಿಸುವೆನು. ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವಿರಿ.


ಆತನ ತೊಡೆಯ ಮೇಲಣ ವಸ್ತ್ರದಲ್ಲಿ: ರಾಜಾಧಿರಾಜನೂ ಕರ್ತರ ಕರ್ತನೂ. ಎಂಬ ಹೆಸರು ಬರೆದಿದೆ.


ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು, ಮಹತ್ವವು, ರಾಜ್ಯವು ಇವುಗಳನ್ನು ಕೊಡಲಾಯಿತು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂಥ ರಾಜ್ಯವಾಗಿದೆ.


ಸೊಲೊಮೋನನು ತನ್ನ ತಂದೆಗೆ ಬದಲಾಗಿ ಅರಸನಾಗಲು ಅಭಿಷೇಕ ಪಡೆದಿದ್ದಾನೆಂದು ಟೈರಿನ ಅರಸನಾದ ಹೀರಾಮನು ಕೇಳಿದಾಗ, ಅವನು ತನ್ನ ರಾಜದೂತರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು. ಏಕೆಂದರೆ ಹೀರಾಮನು ಯಾವಾಗಲೂ ದಾವೀದನಿಗೆ ಆಪ್ತಮಿತ್ರನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು