Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 9:27 - ಕನ್ನಡ ಸಮಕಾಲಿಕ ಅನುವಾದ

27 ಅರಸನ ಕಾಲದಲ್ಲಿ ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲುಗಳಂತೆಯೂ, ದೇವದಾರು ಮರಗಳನ್ನು ತಗ್ಗಿನಲ್ಲಿರುವ ಅತ್ತಿಮರಗಳಂತೆಯೂ ಪರಿಗಣಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅರಸನ ಕಾಲದಲ್ಲಿ ಯೆರೂಸಲೇಮಿನಲ್ಲಿ ಬೆಳ್ಳಿಯು ಕಲ್ಲಿನ ಹಾಗೆಯೂ, ದೇವದಾರು ಮರಗಳು ಇಳಿಜಾರು ಪ್ರದೇಶದಲ್ಲಿ ಬೆಳೆಯುವ ಅತ್ತಿ ಮರಗಳಂತೆ ಹೇರಳವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅರಸನ ಕಾಲದಲ್ಲಿ ಜೆರುಸಲೇಮಿನಲ್ಲಿ ಬೆಳ್ಳಿ, ಕಲ್ಲಿನಂತೆಯೂ ದೇವದಾರು ಮರಗಳು, ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳಂತೆಯೂ ವಿಫುಲವಾಗಿ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅರಸನ ಮುಖಾಂತರವಾಗಿ ಯೆರೂಸಲೇವಿುನಲ್ಲಿ ಬೆಳ್ಳಿಯು ಕಲ್ಲಿನ ಹಾಗೂ ದೇವದಾರು ಮರಗಳು ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳ ಹಾಗೂ ಹೇರಳವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಸೊಲೊಮೋನನಿಂದಾಗಿ ಜೆರುಸಲೇಮಿನಲ್ಲಿ ಬೆಳ್ಳಿಯು ಹೆಚ್ಚಾಗಿ, ಕಲ್ಲುಗಳಷ್ಟು ಸಾಮಾನ್ಯವಾಗಿತ್ತು. ಮಾತ್ರವಲ್ಲದೆ ದೇವದಾರು ಮರಗಳು ಬೆಟ್ಟಪ್ರದೇಶದಲ್ಲಿ ಬೆಳೆಯುವ ಸಿಕಮೋರ್ ಮರಗಳಂತೆ ಧಾರಾಳವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 9:27
9 ತಿಳಿವುಗಳ ಹೋಲಿಕೆ  

ಆಗ ಯೇಸುವನ್ನು ಕಾಣುವಂತೆ ಅವನು ಮುಂದಾಗಿ ಓಡಿಹೋಗಿ, ಒಂದು ಅತ್ತಿಮರವನ್ನು ಹತ್ತಿದನು. ಏಕೆಂದರೆ ಯೇಸು ಆ ಮಾರ್ಗವಾಗಿಯೇ ಬರುತ್ತಿದ್ದರು.


ಆಗ ಆಮೋಸನು ಅಮಚ್ಯನಿಗೆ ಉತ್ತರವಾಗಿ, “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ಆದರೆ ನಾನು ಕುರುಬನೂ ಅತ್ತಿಹಣ್ಣುಗಳನ್ನು ಕೂಡಿಸುವವನೂ ಆಗಿದ್ದೆನು,” ಎಂದನು.


“ಇಟ್ಟಿಗೆಗಳು ಬಿದ್ದು ಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು. ಅತ್ತಿಮರಗಳನ್ನು ಕಡಿದಿದ್ದರೂ ಅಲ್ಲಿಯೇ ನಾವು ದೇವದಾರು ವೃಕ್ಷಗಳನ್ನು ನೆಡುವೆವು,”


ಅವರ ದ್ರಾಕ್ಷಿಬಳ್ಳಿಗಳು ಕಲ್ಮಳೆಯಿಂದಲೂ ಅವರ ಅತ್ತಿಮರಗಳು ಮಂಜಿನಿಂದಲೂ ನಾಶವಾದವು.


ಇದಲ್ಲದೆ ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳಾಗಿದ್ದವು. ಲೆಬನೋನಿನ ಅಡವಿಯ ಅರಮನೆಯ ಎಲ್ಲಾ ಸಾಮಗ್ರಿಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ದಿವಸಗಳಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ, ಆದುದರಿಂದ ಅವನಲ್ಲಿ ಬೆಳ್ಳಿಯ ವಸ್ತು ಒಂದಾದರೂ ಕಾಣಿಸಲಿಲ್ಲ.


ತಗ್ಗಿನಲ್ಲಿರುವ ಓಲಿವ್ ಮರಗಳ ಮೇಲೆಯೂ, ಅತ್ತಿಮರಗಳ ಮೇಲೆಯೂ ಗೆದೇರ್ಯನಾದ ಬಾಳ್ ಹಾನಾನನು ಇದ್ದನು. ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷನು ಜವಾಬ್ದಾರಿಯಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು