2 ಪೂರ್ವಕಾಲ ವೃತ್ತಾಂತ 9:4 - ಕನ್ನಡ ಸಮಕಾಲಿಕ ಅನುವಾದ4 ಅವನ ಮೇಜಿನ ಭೋಜನವನ್ನೂ, ಅವನ ಅಧಿಪತಿಗಳು ಕುಳಿತಿರುವ ರೀತಿಯನ್ನೂ, ಅವನ ಸೇವಕರು ನಿಂತಿರುವುದನ್ನೂ, ಅವರ ವಸ್ತ್ರಗಳನ್ನೂ, ಅವನ ಪಾನದಾಯಕರನ್ನೂ ಅವರ ವಸ್ತ್ರಗಳನ್ನೂ, ಅವನು ಯೆಹೋವ ದೇವರ ಆಲಯದಲ್ಲಿ ಅರ್ಪಿಸಿದ ದಹನಬಲಿಗಳನ್ನೂ ಕಂಡಾಗ ಅವಳು ವಿಸ್ಮಯಗೊಂಡಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಭೋಜನ ಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ ಮತ್ತು ಅವರ ಉಡುಪುಗಳು, ಅವನ ಪಾನಸೇವಕರು, ಅವರ ಉಡುಪುಗಳು ಇವುಗಳನ್ನೂ, ಅರಸನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗ ಹೋಮಗಳನ್ನೂ ನೋಡಿದಾಗ ವಿಸ್ಮಿತಳಾಗಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿದ್ದ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ ಮತ್ತು ಅವರ ಉಡುಪುಗಳು, ಅವನ ಪಾನಸೇವಕರು, ಅವರ ಉಡುಪುಗಳು ಇವುಗಳನ್ನೆಲ್ಲಾ ನೋಡಿದಳು. ಅಂತೆಯೇ ಅವನು ಸರ್ವೇಶ್ವರನ ಆಲಯದಲ್ಲಿ ಸಮರ್ಪಿಸುತ್ತಿದ್ದ ದಹನ ಬಲಿಗಳನ್ನೂ ಗಮನಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವನ ಭೋಜನ ಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ ಮತ್ತು ಅವರ ಉಡುಪುಗಳು, ಅವನ ಪಾನಸೇವಕರು, ಅವರ ಉಡುಪುಗಳು ಇವುಗಳನ್ನೂ ಅವನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗಹೋಮಗಳನ್ನೂ ನೋಡಿದಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಸೊಲೊಮೋನನ ಮೇಜಿನ ಮೇಲೆ ಇಟ್ಟಿರುವ ಆಹಾರವನ್ನು ನೋಡಿದಳು. ಅವನ ಸೇವಕರು ಮಾಡುವ ಸೇವೆಯ ರೀತಿಯನ್ನು ಪರಿಶೀಲಿಸಿದಳು. ಅವರು ಧರಿಸುವ ಉಡುಪು, ಸಮವಸ್ತ್ರಗಳು, ದೇವಾಲಯಕ್ಕೆ ಹೋಗುವಾಗ ಮಾಡುವ ಮೆರವಣಿಗೆಗಳನ್ನು ಮತ್ತು ಯಜ್ಞಗಳನ್ನು ನೋಡಿದಳು. ಪ್ರತಿಯೊಂದು ವಿಷಯವನ್ನು ಆಕೆ ಗಮನಿಸಿದಾಗ ಅಚ್ಚರಿಗೊಂಡಳು. ಅಧ್ಯಾಯವನ್ನು ನೋಡಿ |
ಅರಸನು ಪ್ರವೇಶಿಸುವ ಸ್ಥಳದಲ್ಲಿ ತನ್ನ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಪ್ರಧಾನರೂ, ತುತೂರಿ ಊದುವವರೂ, ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದುತ್ತಿದ್ದರು. ಹಾಗೆಯೇ ಹಾಡುಗಾರರು ಗೀತವಾದ್ಯಗಳನ್ನು ಹಿಡಿದು ಸ್ತುತಿಸುವವರೂ ಬೋಧಿಸುವವರೂ ಇದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ,” ಎಂದು ಕೂಗಿದಳು.