Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 1:13 - ಕನ್ನಡ ಸಮಕಾಲಿಕ ಅನುವಾದ

13 ನಾನು ನನ್ನ ದೇಹವೆಂಬ ಗುಡಾರದಲ್ಲಿ ಬಾಳುವ ತನಕ ನಿಮ್ಮ ನೆನಪಿಗೆ ತರುವುದು ಯುಕ್ತವೆಂದೆಣಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ನನ್ನ ದೇಹವೆಂಬ ಗುಡಾರದಲ್ಲಿರುವ ತನಕ ನಿಮ್ಮನ್ನು ನೆನಪುಮಾಡಿಸಿ ಪ್ರೇರೇಪಿಸುವುದು ಯುಕ್ತವೆಂದೆಣಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಾನು ಈ ದೇಹವೆಂಬ ಗುಡಾರದಲ್ಲಿ ಜೀವಿಸಿರುವ ತನಕ ನಿಮ್ಮನ್ನು ಜ್ಞಾಪಕಪಡಿಸಿ, ಪ್ರೋತ್ಸಾಹಿಸುವುದು ಉಚಿತವೆಂದು ಎಣಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನು ನನ್ನ ದೇಹವೆಂಬ ಗುಡಾರದಲ್ಲಿರುವ ತನಕ ನಿಮ್ಮನ್ನು ಜ್ಞಾಪಕಪಡಿಸಿ ಪ್ರೇರಿಸುವದು ಯುಕ್ತವೆಂದೆಣಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾನು ಈ ಲೋಕದಲ್ಲಿ ಇನ್ನೂ ಜೀವದಿಂದಿರುವಾಗಲೇ ಇವುಗಳನ್ನು ನಿಮ್ಮ ನೆನಪಿಗೆ ತರುವುದು ಯೋಗ್ಯವಾದದ್ದೆಂಬುದು ನನ್ನ ಆಲೋಚನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಹ್ಯಾ ಜಗಾತ್ ಝಿತ್ತೊ ರ್‍ಹಾಯ್ ಪತರ್ ತುಮ್ಚ್ಯಾ ಮನಾಕ್ನಿ ಹೆ ಸಗ್ಳೆ ಹಾನ್ತಲೆ ಬರೆ ಮನ್ತಲಿ ಮಾಜಿ ಯವ್ಜನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 1:13
11 ತಿಳಿವುಗಳ ಹೋಲಿಕೆ  

ಪ್ರಿಯರೇ, ನಿಮಗೀಗ ಬರೆಯುವುದು ಎರಡನೆಯ ಪತ್ರ. ಈ ಎರಡು ಪತ್ರಗಳಲ್ಲಿಯೂ ನಿಮ್ಮ ನೆನಪಿಗೆ ತಂದು ನಿಮ್ಮ ನಿರ್ಮಲವಾದ ಮನಸ್ಸನ್ನು ಉತ್ತೇಜಿಸಿದ್ದೇನೆ.


ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರು ನನಗೆ ಸ್ಪಷ್ಟ ಪಡಿಸಿದ ಪ್ರಕಾರ, ಈ ನನ್ನ ದೇಹವೆಂಬ ಗುಡಾರವನ್ನು ತೆಗೆದುಹಾಕುವ ಕಾಲ ಬೇಗನೆ ಬರುತ್ತದೆಂದು ನಾನು ಬಲ್ಲೆನು.


ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂಬಂತೆ ಅವರನ್ನು ಜ್ಞಾಪಕಮಾಡಿಕೊಳ್ಳಿರಿ. ಕಷ್ಟ ಅನುಭವಿಸುವವರ ಸಂಗಡ ನೀವು ಸಹ ಕಷ್ಟ ಅನುಭವಿಸುವವರೆಂಬಂತೆ ನೆನೆಸಿರಿ.


ಆದಕಾರಣ ನಾನು ನಿನ್ನ ತಲೆಯ ಮೇಲೆ ಹಸ್ತಗಳನ್ನು ಇಟ್ಟಿದ್ದರ ಮೂಲಕ ನಿನಗೆ ದೊರಕಿದ ದೇವರ ವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕ ಮಾಡುತ್ತೇನೆ.


ನಮ್ಮ ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿಯೇ ಇರುವುದು ಉತ್ತಮವೆಂದು ಆಶಿಸಿ, ಅದರಲ್ಲಿ ಭರವಸೆ ಉಳ್ಳವರಾಗಿರುತ್ತೇವೆ.


ಆದ್ದರಿಂದ ನೀವು ಈ ಸಂಗತಿಗಳನ್ನು ತಿಳಿದವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮ್ಮ ನೆನಪಿಗೆ ತರಲು ನಾನು ಬಯಸುತ್ತೇನೆ.


ಯೆಹೋವ ದೇವರು ಶೆಯಲ್ತಿಯೇಲನ ಮಗ ಮತ್ತು ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನ ಆತ್ಮವನ್ನೂ, ಯೆಹೋಚಾದಾಕನ ಮಗ ಮತ್ತು ಮಹಾಯಾಜಕ ಯೆಹೋಶುವನ ಆತ್ಮವನ್ನೂ, ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಪ್ರೇರೇಪಿಸಿದರು. ಅವರು ಬಂದು ಅರಸನಾದ ದಾರ್ಯಾವೆಷನ ಆಳಿಕೆಯ ಎರಡನೇ ವರ್ಷದ, ಆರನೆಯ ತಿಂಗಳಿನ, ಇಪ್ಪತ್ನಾಲ್ಕನೆಯ ದಿವಸದಲ್ಲಿ ತಮ್ಮ ದೇವರಾದ ಸೇನಾಧೀಶ್ವರ ಯೆಹೋವ ದೇವರ ಆಲಯದ ಕೆಲಸ ಪ್ರಾರಂಭಿಸಿದರು. ಅರಸನಾದ ದಾರ್ಯಾವೆಷನ ಎರಡನೇ ವರ್ಷದಲ್ಲಿ,


ನನ್ನ ಆಶ್ರಯವು ಕುರುಬನ ಗುಡಾರದಂತೆ ಕಿತ್ತು ನನ್ನ ಕಡೆಯಿಂದ ಒಯ್ಯಲಾಗಿದೆ. ದೇವರು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೆಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ; ಹಗಲುರಾತ್ರಿ ದೇವರೇ, ನೀವು ನನ್ನನ್ನು ಅಂತ್ಯಗೊಳಿಸುತ್ತೀರಿ.


ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸುವುದು ನನಗೆ ಸೂಕ್ತವಾಗಿದೆ. ಏಕೆಂದರೆ ನಾನು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ. ನಾನು ಬೇಡಿಗಳಿಂದ ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಸಮರ್ಥಿಸಿ ದೃಢಪಡಿಸುವಾಗಲೂ ನೀವೆಲ್ಲರು ನನ್ನೊಂದಿಗಿರುವ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.


ಕ್ರಿಸ್ತನನ್ನೂ ಅವರ ಪುನರುತ್ಥಾನದ ಶಕ್ತಿಯನ್ನೂ ನಾನು ಅರಿತುಕೊಂಡು, ಕ್ರಿಸ್ತನ ಶ್ರಮೆಯಲ್ಲಿ ಪಾಲುಗೊಳ್ಳುವ ಅನ್ಯೋನ್ಯತೆಯನ್ನೂ ಅವರ ಮರಣದಲ್ಲಿ ಅವರ ಹಾಗೆ ಆಗುವುದನ್ನೂ ತಿಳಿಯುವುದೇ ನನ್ನ ಅಪೇಕ್ಷೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು