Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 1:21 - ಕನ್ನಡ ಸಮಕಾಲಿಕ ಅನುವಾದ

21 ಯಾವ ಪ್ರವಾದನೆಯೂ ಎಂದೂ ಮನುಷ್ಯನ ಚಿತ್ತದಿಂದ ಬರಲಿಲ್ಲ, ಆದರೆ ಪ್ರವಾದಿಗಳು ಪವಿತ್ರಾತ್ಮ ಪ್ರೇರಿತರಾಗಿ ದೇವರಿಂದ ಪಡೆದುಕೊಂಡಿದ್ದನ್ನೇ ಮಾತನಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಏಕೆಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ. ಆದರೆ ಮನುಷ್ಯರು ಪವಿತ್ರಾತ್ಮಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತನಾಡಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಏಕೆಂದರೆ, ಅದರ ಯಾವ ಪ್ರವಾದನೆಯೂ ಎಂದೂ ಮಾನವ ಸಂಕಲ್ಪದಿಂದ ಬಂದುದಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯಾಕಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ; ಮನುಷ್ಯರು ಪವಿತ್ರಾತ್ಮ ಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯಾವ ಪ್ರವಾದನೆಯೇ ಆಗಲಿ ಮನುಷ್ಯನ ಚಿತ್ತದಿಂದ ಬಂದಿಲ್ಲ. ಆದರೆ ಜನರು ಪವಿತ್ರಾತ್ಮನಿಂದ ನಡೆಸಲ್ಪಟ್ಟು ದೇವರಿಂದ ಹೊಂದಿದ್ದನ್ನೇ ಮಾತನಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಕಶ್ಯಾಕ್ ಮಟ್ಲ್ಯಾರ್, ಪ್ರವಾದ್ಯಾಂಚೆ ಬಾತ್ಮಿ ಮಾನ್ಸಾಚ್ಯಾ ಮನಾನಿತ್ನಾ ಯೆಲ್ಲಿ ನ್ಹಯ್ ತಿ ಪವಿತ್ರ್ ಆತ್ಮ್ಯಾ ಚ್ಯಾ ಪ್ರೆರನ್ ವೈನಾ ದೆವಾಕ್ನಾ ಘೊಮ್ಮಾನ್ಸಾ ನಾತರ್ ಬಾಯ್ಕೊಮನ್ಸಾಂಚ್ಯಾ ತೊಂಡಾತ್ನಿ ಭಾಯ್ರ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 1:21
29 ತಿಳಿವುಗಳ ಹೋಲಿಕೆ  

ಅವರಲ್ಲಿದ್ದ ಕ್ರಿಸ್ತ ಯೇಸುವಿನ ಆತ್ಮ, ಕ್ರಿಸ್ತ ಯೇಸುವಿಗೆ ಸಂಭವಿಸಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಗಳನ್ನೂ ಪ್ರವಾದಿಸಿದಾಗ, ಅದರ ಸಮಯ ಸಂದರ್ಭಗಳನ್ನು ಕಂಡುಹಿಡಿಯಲು ಪರಿಶೋಧನೆ ಮಾಡಿದರು.


“ಯೆಹೋವ ದೇವರ ಆತ್ಮರು ನನ್ನ ಮೂಲಕ ಮಾತನಾಡಿದರು; ಅವರ ನುಡಿ ನನ್ನ ಬಾಯಲ್ಲಿ ಇತ್ತು.


“ಸಹೋದರ ಸಹೋದರಿಯರೇ, ಬಹಳ ದಿನಗಳ ಹಿಂದೆ ದಾವೀದನ ಮುಖಾಂತರ ಪವಿತ್ರಾತ್ಮರು ಮುಂತಿಳಿಸಿದ ದೇವರ ವಾಕ್ಯ ಯೂದನ ವಿಷಯವಾಗಿ ನೆರವೇರಬೇಕಾಗಿತ್ತು. ಯೂದನು ಯೇಸುವನ್ನು ಬಂಧಿಸಿದವರಿಗೆ ಮಾರ್ಗದರ್ಶಕನಾಗಿದ್ದನು.


ಪವಿತ್ರಾತ್ಮ ದೇವರು ಸಹ ನಿಮಗೆ ಸಾಕ್ಷಿ ಕೊಡುವವರಾಗಿ,


ಆದರೆ ತಮ್ಮ ಕ್ರಿಸ್ತ ಯೇಸು ಹಿಂಸೆಗೊಳಗಾಗಬೇಕೆಂದು, ಎಲ್ಲಾ ಪ್ರವಾದಿಗಳ ಬಾಯಿಯ ಮುಖಾಂತರ ದೇವರು ಮುಂತಿಳಿಸಿದ್ದನ್ನು ಈ ರೀತಿ ನೆರವೇರಿಸಿದರು.


ದಾವೀದನು ತಾನೇ ಪವಿತ್ರಾತ್ಮ ಪ್ರೇರಣೆಯಿಂದ ಹೇಳಿದ್ದೇನೆಂದರೆ: “ ‘ಕರ್ತದೇವರು ನನ್ನ ಕರ್ತದೇವರಿಗೆ ಹೇಳಿದ್ದಾರೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದದಡಿಯಲ್ಲಿ ಹಾಕುವವರೆಗೆ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು.” ’


ಆಗ ನಾನು ಅವನನ್ನು ಆರಾಧಿಸಬೇಕೆಂದು ಅವನ ಪಾದಗಳಿಗೆ ಬೀಳಲು ಅವನು, “ಹಾಗೆ ಮಾಡಬೇಡ, ನಾನು ನಿನಗೂ ಯೇಸುವಿನ ಸಾಕ್ಷಿಯುಳ್ಳ ನಿನ್ನ ಸಹೋದರರಿಗೂ ಜೊತೆಯ ದಾಸನಾಗಿದ್ದೇನೆ. ದೇವರನ್ನೇ ಆರಾಧಿಸು. ಏಕೆಂದರೆ ಯೇಸುವಿನ ಸಾಕ್ಷಿಯೇ ಪ್ರವಾದನೆಯ ಆತ್ಮವಾಗಿದೆ!” ಎಂದನು.


ಆದ್ದರಿಂದ ಪವಿತ್ರಾತ್ಮ ದೇವರು ಹೇಳುವ ಪ್ರಕಾರ, “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ,


ಆಗ ಮೋಶೆಯು, “ಈ ಕಾರ್ಯಗಳನ್ನೆಲ್ಲಾ ಮಾಡುವುದಕ್ಕೆ ಯೆಹೋವ ದೇವರು ನನ್ನನ್ನು ಕಳುಹಿಸಿದ್ದಾರೆ, ಅವುಗಳು ನನ್ನ ಸ್ವಂತ ಆಲೋಚನೆಗಳಂತೆ ಮಾಡಲಿಲ್ಲ ಎಂದು ನೀವು ಇದರಿಂದ ತಿಳಿದುಕೊಳ್ಳುವಿರಿ.


ಆದರೆ ಬೇರೆಯವರು ನಂಬಲಿಲ್ಲ. ಅವರು ತಮ್ಮತಮ್ಮಲ್ಲಿಯೇ ಭಿನ್ನಾಭಿಪ್ರಾಯ ಉಳ್ಳವರಾಗಿರಲು ಪೌಲನು ಅವರಿಗೆ, “ಪವಿತ್ರಾತ್ಮ ದೇವರು ನಿಮ್ಮ ಪಿತೃಗಳಿಗೆ ಪ್ರವಾದಿ ಯೆಶಾಯನ ಮುಖಾಂತರ ಈ ಮಾತುಗಳನ್ನು ಸರಿಯಾಗಿಯೇ ಹೇಳಿದ್ದಾರೆ:


ಆಗ ಅವಳು ಎಲೀಯನಿಗೆ, “ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವುದಕ್ಕೂ, ನನ್ನ ಮಗನು ಸಾಯುವುದಕ್ಕೂ ನನ್ನ ಬಳಿಗೆ ಬಂದಿಯೋ?” ಎಂದಳು.


ಹೊರಗಿನ ಗುಡಾರವು ಇನ್ನೂ ಇರುವ ತನಕ ಅತಿ ಪವಿತ್ರ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಲಿಲ್ಲವೆಂಬುದನ್ನು ಪವಿತ್ರಾತ್ಮ ದೇವರು ವ್ಯಕ್ತಪಡಿಸುತ್ತಾರೆ


ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ, ಯೆಹೂದದಿಂದ ಬೇತೇಲಿಗೆ ಯೆಹೋವ ದೇವರ ಮಾತಿನಂತೆ ಒಬ್ಬ ದೇವರ ಮನುಷ್ಯ ಬಂದನು.


ಯೆಹೂದದ ಗೋತ್ರದವರು ಗಿಲ್ಗಾಲಿನಲ್ಲಿ ಯೆಹೋಶುವನ ಬಳಿಗೆ ಬಂದರು. ಆಗ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಅವನಿಗೆ, “ಕಾದೇಶ್ ಬರ್ನೇಯದಲ್ಲಿ ಯೆಹೋವ ದೇವರು ನನ್ನನ್ನೂ, ನಿನ್ನನ್ನೂ ಕುರಿತು ದೇವರ ಮನುಷ್ಯನಾದ ಮೋಶೆಗೆ ಹೇಳಿದ ಮಾತನ್ನು ನೀನು ಬಲ್ಲೆ.


ಆಗ ದರ್ಶಿಗಳು ನಾಚಿಕೆಪಡುವರು, ಶಕುನಗಾರರು ಅವಮಾನಗೊಳ್ಳುವರು. ದೇವರಿಂದ ಉತ್ತರವಿಲ್ಲದ ಕಾರಣ, ಎಲ್ಲರೂ ತಮ್ಮ ತುಟಿಗಳನ್ನು ಮುಚ್ಚಿಕೊಳ್ಳುವರು.”


ಅವನು ತನ್ನ ತಂದೆಯಾದ ದಾವೀದನ ಕ್ರಮದ ಪ್ರಕಾರ, ಅವರ ಸೇವೆಗೆ ಯಾಜಕ ವರ್ಗಗಳವರನ್ನೂ ಪ್ರತಿ ದಿವಸಕ್ಕೆ ಬೇಕಾದ ಕಾರ್ಯದ ಪ್ರಕಾರ, ಯಾಜಕರ ಮುಂದೆ ಸ್ತುತಿಸುವುದಕ್ಕೂ, ಸೇವೆ ಮಾಡುವುದಕ್ಕೂ ತಮ್ಮ ವಿಚಾರಗಳಲ್ಲಿ ಲೇವಿಯರನ್ನೂ, ಸೇವೆಯ ಬಾಗಿಲಲ್ಲಿ ತಮ್ಮ ವರ್ಗಗಳ ಸರದಿಯ ಪ್ರಕಾರವಾಗಿ ದ್ವಾರಪಾಲಕರನ್ನೂ ನೇಮಿಸಿದನು. ಏಕೆಂದರೆ ದೇವರ ಮನುಷ್ಯನಾದ ದಾವೀದನು ಹಾಗೆಯೇ ನೇಮಿಸಿದ್ದನು.


ದೇವರ ಮನುಷ್ಯನ ಸೇವಕನು ಉದಯದಲ್ಲಿ ಎದ್ದು ಹೊರಗೆ ಹೊರಟಾಗ, ಕುದುರೆಗಳೂ ರಥಗಳೂ ಉಳ್ಳ ಸೈನ್ಯ ಪಟ್ಟಣವನ್ನು ಸುತ್ತಿಕೊಂಡಿರುವುದನ್ನು ಕಂಡು ಎಲೀಷನಿಗೆ, “ಅಯ್ಯೋ! ನನ್ನ ಯಜಮಾನನೇ, ನಾವು ಏನು ಮಾಡುವುದು?” ಎಂದನು.


ಹೀಗೆಯೇ ದೇವರ ಮನುಷ್ಯನು ತನ್ನನ್ನು ಎಚ್ಚರಿಸಿ, ತನಗೆ ಹೇಳಿದ ಸ್ಥಳಕ್ಕೆ ಇಸ್ರಾಯೇಲಿನ ಅರಸನು ಹೇಳಿ ಕಳುಹಿಸಿ, ತನ್ನ ಸೈನ್ಯವನ್ನು ಕರೆಯಿಸಿಕೊಂಡನು. ಹೀಗೆ ಅವನು ಹಲವು ಸಾರಿ ತಪ್ಪಿಸಿಕೊಂಡನು.


ಸ್ತ್ರೀಯು ಎಲೀಯನಿಗೆ, “ನೀನು ದೇವರ ಮನುಷ್ಯನೆಂದೂ, ನಿನ್ನ ಬಾಯಲ್ಲಿರುವ ಯೆಹೋವ ದೇವರ ವಾಕ್ಯವು ಸತ್ಯವೆಂದೂ ಇದರಿಂದ ಈಗ ತಿಳಿದಿದ್ದೇನೆ,” ಎಂದಳು.


ದೇವರ ಮನುಷ್ಯನಾದ ಮೋಶೆಯಾದರೋ, ಅವನ ಪುತ್ರರು ಲೇವಿಯ ಗೋತ್ರದಲ್ಲಿ ಲೆಕ್ಕಿತರಾಗಿದ್ದರು.


ತನ್ನ ಗಂಡನನ್ನು ಕರೆದು, “ನಾನು ದೇವರ ಮನುಷ್ಯನ ಬಳಿಗೆ ಬೇಗನೆ ಹೋಗಿ ತಿರುಗಿ ಬರುವ ಹಾಗೆ, ನೀನು ದಯಮಾಡಿ ಸೇವಕನನ್ನೂ ಒಂದು ಕತ್ತೆಯನ್ನೂ ಕಳುಹಿಸು,” ಎಂದಳು.


ಆದ್ದರಿಂದ ಅವಳು ತನ್ನ ಗಂಡನಿಗೆ, “ಇಗೋ, ನಮ್ಮ ಬಳಿಯಲ್ಲಿ ಯಾವಾಗಲೂ ಹಾದುಹೋಗುವ ಇವನು ದೇವರ ಪರಿಶುದ್ಧ ಮನುಷ್ಯನಾಗಿರುತ್ತಾನೆಂದು ನನಗೆ ಗೊತ್ತಾಯಿತು.


ದೇವರ ಮನುಷ್ಯನಾದ ಮೋಶೆಯು ಮರಣ ಹೊಂದುವದಕ್ಕಿಂತ ಮುಂಚೆ ಇಸ್ರಾಯೇಲರಿಗೆ ಕೊಟ್ಟ ಆಶೀರ್ವಾದ:


ಅವಳು ಬಂದು ದೇವರ ಮನುಷ್ಯನಿಗೆ ತಿಳಿಸಿದಳು. ಅವನು, “ನೀನು ಹೋಗಿ ಆ ಎಣ್ಣೆಯನ್ನು ಮಾರಿ ನಿನ್ನ ಸಾಲವನ್ನು ತೀರಿಸಿ, ಮಿಕ್ಕದ್ದರಿಂದ ನೀನೂ, ನಿನ್ನ ಮಕ್ಕಳು ಜೀವನ ಮಾಡಿರಿ,” ಎಂದನು.


ಸುಳ್ಳು ಪ್ರವಾದಿಸುವ ಪ್ರವಾದಿಗಳ ಹೃದಯದಲ್ಲಿ ಇದು ಎಷ್ಟರವರೆಗೆ ಇರುವುದು? ಹೌದು, ಅವರು ತಮ್ಮ ಮನಸ್ಸಿನ ಭ್ರಮೆಗಳನ್ನು ಪ್ರವಾದಿಸುವವರೇ.


ಯೆಹೋವ ದೇವರ ವಾಕ್ಯವು ಬಾಬಿಲೋನಿಯರ ದೇಶದ ಕೆಬಾರ್ ನದಿಯ ಬಳಿಯಲ್ಲಿ, ಬೂಜಿಯ ಮಗ ಹಾಗೂ ಯಾಜಕ ಆಗಿರುವ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಬಂದಿತು ಮತ್ತು ಅಲ್ಲಿ ಯೆಹೋವ ದೇವರ ಕೈ ಅವನ ಮೇಲಿತ್ತು.


ಯೆಹೂದದ ಅರಸರಾದ ಯೋತಾಮನ ಆಹಾಜನ, ಹಿಜ್ಕೀಯನ, ದಿವಸಗಳಲ್ಲಿ ಮೊರೇಷೆತಿನವನಾದ ಮೀಕನಿಗೆ ಬಂದ ಯೆಹೋವ ದೇವರ ವಾಕ್ಯವು. ಅವನು ಸಮಾರ್ಯ ಮತ್ತು ಯೆರೂಸಲೇಮಿನ ವಿಷಯವಾಗಿ ಕಂಡ ದರ್ಶನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು