Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 1:9 - ಕನ್ನಡ ಸಮಕಾಲಿಕ ಅನುವಾದ

9 ಆದರೆ ಈ ಗುಣಗಳಿಲ್ಲದವನು ಕುರುಡನಾಗಿದ್ದಾನೆ. ಅವನು ದೂರದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಿನ ಪಾಪಗಳಿಂದ ಶುದ್ಧನಾದದ್ದನ್ನು ಮರೆತು ಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇವುಗಳಿಲ್ಲದವನು ಕುರುಡನಾಗಿದ್ದಾನೆ. ಅವನು ದೂರ ದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳು ಪರಿಹಾರವಾಗಿ ತಾನು ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈ ಗುಣಗಳಿಲ್ಲದವನು ಸಂಕುಚಿತ ಮನೋಭಾವನೆಯುಳ್ಳವನು ಹಾಗೂ ಅಂಧನು. ಹಿಂದಿನ ಪಾಪಗಳಿಂದ ತಾನು ಶುದ್ಧಗೊಂಡವನು ಎಂಬುದನ್ನು ಮರೆತುಬಿಟ್ಟವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇವುಗಳಿಲ್ಲದವನು ಕುರುಡನಾಗಿದ್ದಾನೆ; ಅವನು ದೂರದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳು ಪರಿಹಾರವಾಗಿ ತಾನು ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ಇವು ಯಾವನಲ್ಲಿ ಇರುವುದಿಲ್ಲವೋ ಅವನು ಸ್ಪಷ್ಟವಾಗಿ ನೋಡಲಾರನು. ಅವನು ಕುರುಡನಾಗಿದ್ದಾನೆ; ತಾನು ಶುದ್ಧನಾದದ್ದನ್ನು ಮರೆತವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಕಶ್ಯಾಕ್ ಮಟ್ಲ್ಯಾರ್, ಹಿ ಸಗ್ಳಿ ಗುನಾ ನಸಲ್ಲೊ ಅಂದ್ಳೊ ಅನಿ ಕುಡ್ಡೊ ಸಾರ್ಕೊ ಹಾಯ್, ತೆನಿ ತೆಂಚ್ಯಾ ಪಾಟ್ಲ್ಯಾ ಪಾಪಾನಿತ್ನಾ ತೆಂಕಾ ಪವಿತ್ರ್ ಕರುನ್ ಹೊಲಾ ಮನ್ತಲೆ ಇಸರ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 1:9
19 ತಿಳಿವುಗಳ ಹೋಲಿಕೆ  

ದೇವರು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ಬಾಳಿದರೆ, ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಆಗ ದೇವರ ಮಗನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.


ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ?


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ಕ್ರಿಸ್ತ ಯೇಸು ತಮ್ಮ ಸಭೆಯನ್ನು ವಾಕ್ಯದ ನೀರಿನ ಸ್ನಾನದಿಂದ ಪವಿತ್ರಗೊಳಿಸಿ, ಶುದ್ಧಮಾಡಿ,


ಅದೇ ರೀತಿಯಲ್ಲಿ, ನೀವೂ ಸಹ ಪಾಪದ ಪಾಲಿಗೆ ಸತ್ತವರೆಂದೂ ಕ್ರಿಸ್ತ ಯೇಸುವಿನಲ್ಲಿ ದೇವರಿಗಾಗಿ ಜೀವಿಸುವವರೆಂದೂ ಎಣಿಸಿಕೊಳ್ಳಿರಿ.


ಈ ನೀರು ದೀಕ್ಷಾಸ್ನಾನವನ್ನು ಸೂಚಿಸುವಂತದ್ದಾಗಿದೆ. ಈ ದೀಕ್ಷಾಸ್ನಾನ ಕ್ರಿಸ್ತ ಯೇಸುವಿನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ಮೈಕೊಳೆಯನ್ನು ಹೋಗಲಾಡಿಸುವಂಥದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿಯು ಬೇಕೆಂದು ದೇವರನ್ನು ಬೇಡಿಕೊಳ್ಳುವಂಥದ್ದಾಗಿದೆ.


ಪ್ರಿಯರೇ, ನೀವು ಸ್ವಾತಂತ್ರ್ಯಕ್ಕಾಗಿ ಕರೆಹೊಂದಿದವರು. ಆದರೆ ಆ ಸ್ವಾತಂತ್ರ್ಯವನ್ನು ಶಾರೀರಿಕ ಅನುಕೂಲಕ್ಕಾಗಿ ಉಪಯೋಗಿಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ದೀನರಾಗಿ ಸೇವೆಮಾಡಿರಿ.


ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಸುನ್ನತಿ ಆಗದಿದ್ದರೂ ಯಾವ ವ್ಯತ್ಯಾಸವಿರುವುದಿಲ್ಲ. ಆದರೆ ಪ್ರೀತಿಯಿಂದ ಕಾರ್ಯ ನಡೆಸುವ ನಂಬಿಕೆಯು ಮಾತ್ರ ಪ್ರಯೋಜನವಾಗಿರುತ್ತದೆ.


ಯೇಸು ಇವುಗಳನ್ನು ಕೇಳಿ ಅವನಿಗೆ, “ಆದರೂ ನಿನಗೆ ಒಂದು ಕೊರತೆ ಇದೆ. ನೀನು ಹೋಗಿ ನಿನಗೆ ಇರುವುದೆಲ್ಲವನ್ನು ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.


ಯೇಸು ಅವನನ್ನು ದೃಷ್ಟಿಸಿ ನೋಡುತ್ತಾ ಅವನನ್ನು ಪ್ರೀತಿಸಿ ಅವನಿಗೆ, “ನಿನಗೆ ಒಂದು ಕಡಿಮೆ ಇದೆ. ನೀನು ಹೋಗಿ ನಿನಗೆ ಇರುವುದೆಲ್ಲವನ್ನು ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.


ಏಕೆಂದರೆ ನೀನು ನಿನ್ನ ವಿಷಯದಲ್ಲಿ, ‘ನಾನು ಐಶ್ವರ್ಯವಂತನು, ನಾನು ಸಂಪಾದಕನಾಗಿದ್ದೇನೆ ಮತ್ತು ಕೊರತೆ ನನಗಿಲ್ಲ,’ ಎಂದು ಹೇಳಿಕೊಳ್ಳುತ್ತಿ. ಆದರೆ ನೀನು ಕೇವಲ ದುರವಸ್ಥೆಯುಳ್ಳವನು, ದೌರ್ಭಾಗ್ಯನು, ದರಿದ್ರನು, ಕುರುಡನು, ಬೆತ್ತಲೆಯಾದವನು ಎಂಬುದನ್ನು ತಿಳಿಯದೆ ಇದ್ದೀ.


ಅದನ್ನು ತೊಳೆದಾದ ಮೇಲೆ ಯಾಜಕನು ಆ ಬೂಜನ್ನು ಪರೀಕ್ಷಿಸಬೇಕು. ಆ ಬೂಜು ಬಣ್ಣವನ್ನು ಬದಲಾಯಿಸದಿದ್ದರೆ ಮತ್ತು ಹರಡದಿದ್ದರೆ ಅದು ಅಶುದ್ಧವಾಗಿರುವುದು. ಅದನ್ನು ನೀನು ಬೆಂಕಿಯಿಂದ ಸುಡಬೇಕು. ಅದು ಒಳಗಿನಿಂದಾಗಲಿ ಇಲ್ಲವೆ ಹೊರಗಿನಿಂದಾಗಲಿ ವ್ಯಾಪಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು