2 ಪೇತ್ರನು 2:12 - ಕನ್ನಡ ಸಮಕಾಲಿಕ ಅನುವಾದ12 ಆದರೆ ಬೇಟೆಗಾಗಿ ಹುಟ್ಟಿರುವ ವಿವೇಕಹೀನ ಮೃಗಗಳಂತಿರುವ ಈ ದುರ್ಬೋಧಕರು ತಮಗೆ ತಿಳಿಯದವುಗಳ ವಿಷಯವಾಗಿ ದೂಷಣೆ ಮಾಡುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ಮೃಗಗಳಂತೆ ಸಂಪೂರ್ಣ ನಾಶವಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಸ್ವಾಭಾವಿಕವಾಗಿ ಸೆರೆಹಿಡಿಯಲ್ಪಟ್ಟು ನಾಶವಾಗುವುದಕ್ಕೆ ಹುಟ್ಟಿರುವ ವಿವೇಕಶೂನ್ಯ ಪ್ರಾಣಿಗಳಂತಿರುವ ಈ ದುರ್ಬೋಧಕರು ತಮಗೆ ತಿಳಿಯದವುಗಳ ವಿಷಯವಾಗಿ ದೂಷಿಸುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ತಾವೇ ಸಂಪೂರ್ಣ ನಾಶವಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸಹಜ ಪ್ರವೃತ್ತಿಯಿಂದ ಬೇಟೆಗಾಗಿಯೂ ಕೊಲೆಗಾಗಿಯೂ ಹುಟ್ಟಿರುವ ವಿವೇಕಶೂನ್ಯ ಪ್ರಾಣಿಗಳಂತೆ ಬಾಳುವ ಈ ದುರ್ಬೋಧಕರಾದರೋ ತಮಗೆ ತಿಳಿಯದವುಗಳನ್ನು ದೂಷಣೆಮಾಡುತ್ತಾರೆ. ಆ ಪ್ರಾಣಿಗಳು ನಾಶವಾಗುವಂತೆಯೇ ಇವರೂ ನಾಶವಾಗುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆದರೆ ಸ್ವಾಭಾವಿಕವಾಗಿ ಬೇಟೆಗೂ ಕೊಲೆಗೂ ಹುಟ್ಟಿರುವ ವಿವೇಕಶೂನ್ಯ ಪಶುಗಳಂತಿರುವ ಈ ದುರ್ಮಾರ್ಗಿಗಳು ತಮಗೆ ತಿಳಿಯದವುಗಳ ವಿಷಯವಾಗಿ ದೂಷಣೆ ಹೇಳುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ತಾವೇ ಕೆಟ್ಟುಹೋಗಿ ತಮ್ಮ ದುಷ್ಪ್ರವರ್ತನೆಗೆ ಸರಿಯಾದ ದುಷ್ಫಲವನ್ನು ಹೊಂದುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆದರೆ ಈ ಸುಳ್ಳುಬೋಧಕರು ತಮಗೆ ಅರ್ಥವಾಗದ ಸಂಗತಿಗಳ ವಿರುದ್ಧ ಕೆಟ್ಟದ್ದನ್ನು ಮಾತಾಡುತ್ತಾರೆ. ಅವರು ವಿವೇಚಿಸದೆ ಕಾರ್ಯ ಮಾಡುವ ಪ್ರಾಣಿಗಳಂತಿದ್ದಾರೆ. ಹಿಡಿಯಲ್ಪಟ್ಟು ಕೊಲ್ಲಲ್ಪಡುವುದಕ್ಕಾಗಿಯೇ ಹುಟ್ಟಿರುವ ಕ್ರೂರಪ್ರಾಣಿಗಳಂತೆ ಅವರು ನಾಶವಾಗುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ತೆನಿ ಧರುನ್ ಜಿವ್ ಕಾಡುಕ್ ಸಾಟಿಚ್ ಜಲಮ್ ಘೆಟಲ್ಯಾ ಖ್ರುರ್ ಜನಾವರಾಂಚ್ಯಾ ಸಾರ್ಕೆ; ತೆಂಕಾ ಕಳಿನಸಲ್ಯಾ ವಿಶಯಾಚ್ಯಾ ವಿರೊಧ್ ಹೊವ್ನ್ ಬುರ್ಶೆಚ್ ಬೊಲ್ತ್ಯಾತ್ ತೆಂಕಾ ಜಾಳ್ವುನ್ ಹೊತಾ. ಅಧ್ಯಾಯವನ್ನು ನೋಡಿ |