Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 2:15 - ಕನ್ನಡ ಸಮಕಾಲಿಕ ಅನುವಾದ

15 ಇವರು ನೇರವಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇವರು ಸನ್ಮಾರ್ಗವನ್ನು ಬಿಟ್ಟವರು. ಹಾದಿ ತಪ್ಪಿದವರು ಮತ್ತು ಬೇಯೋರಿನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದವರಾಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಭಾವನೆಯನ್ನು ಪ್ರೀತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇವರು ಹಾದಿತಪ್ಪಿದವರು, ಸನ್ಮಾರ್ಗವನ್ನು ತ್ಯಜಿಸಿದವರು; ಬೆಯೋರನ ಮಗ ಬಿಳಾಮನ ದಾರಿಯನ್ನು ಹಿಡಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅಧರ್ಮದಿಂದ ದೊರಕುವ ದ್ರವ್ಯವನ್ನು ಪ್ರೀತಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಈ ಸುಳ್ಳುಬೋಧಕರು ಸರಿಯಾದ ಮಾರ್ಗವನ್ನು ತೊರೆದು, ಕೆಟ್ಟಮಾರ್ಗವನ್ನು ಅನುಸರಿಸಿದ್ದಾರೆ. ಬಿಳಾಮನು ಬೆಯೋರನ ಮಗ. ಅವನು ಅಧರ್ಮದಿಂದ ದೊರೆಯುವ ಲಾಭವನ್ನು ಪ್ರೀತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತಿ ಝುಟೆ ಶಿಕಾಪಾ ಕರ್ತಲಿ ಲೊಕಾ ನಿಟ್ ವಾಟೆನ್ ಜಾತಲೆ ಸೊಡುನ್ ಬುರ್ಶ್ಯಾ ವಾಟೆನ್ ಜಾವ್ಕ್ ಬಗ್ತ್ಯಾತ್. ಬಾಲಾಮ್ ಮನ್ತಲೊ ಬೆಯೊರ್ ಮನ್ತಲ್ಯಾಚೊ ಲೆಕ್ ರ್‍ಹಾತಾ. ತೆನಿ ಅಧರ್ಮಾಕ್ನಾ ಗಾವ್ತಲ್ಯಾ ಫಾಯ್ದಾಕ್ ಪ್ರೆಮ್‍ ಕರಿತ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 2:15
21 ತಿಳಿವುಗಳ ಹೋಲಿಕೆ  

ಆದರೂ ನಿನಗೆ ವಿರೋಧವಾಗಿ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ ವ್ಯಭಿಚಾರ ಮಾಡುವುದರಲ್ಲಿಯೂ ಇಸ್ರಾಯೇಲರು ಮುಗ್ಗರಿಸಿ ಬೀಳುವಂತೆ ಬಿಳಾಮನು ಬಾಲಾಕನಿಗೆ ಕಲಿಸಿದ ಬೋಧನೆಯನ್ನು ಹಿಡಿದುಕೊಂಡಿರುವವರು ನಿನ್ನಲ್ಲಿದ್ದಾರೆ.


ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವುದಕ್ಕಾಗಿ ಬಿಳಾಮನ ದೋಷವನ್ನು ಮಾಡುವುದಕ್ಕೆ ದುರಾಶೆಯಿಂದ ಓಡುವವರಾಗಿದ್ದಾರೆ. ಅವರು ಕೋರಹನಂತೆ ಎದುರು ಮಾತನಾಡಿ ನಾಶವಾಗುವವರಾಗಿದ್ದಾರೆ. ಆದ್ದರಿಂದ ಅವರ ಗತಿ ಏನೆಂದು ಹೇಳಲಿ!


ಇವರೇ ಬಿಳಾಮನ ಮಾತಿನಿಂದ ಪೆಯೋರನ ಕಾರ್ಯದಲ್ಲಿ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಮಾಡುವುದಕ್ಕೆ ಇಸ್ರಾಯೇಲರಿಗೆ ಕಾರಣವಾಗಿದ್ದರು. ಯೆಹೋವ ದೇವರ ಸಭೆಯೊಳಗೆ ಇವರಿಂದಲೇ ವ್ಯಾಧಿಯಾಯಿತು.


ಏಕೆಂದರೆ ಅವರು ಅನ್ನಪಾನಗಳೊಡನೆ ಇಸ್ರಾಯೇಲರನ್ನು ಎದುರುಗೊಳ್ಳಲಿಲ್ಲ. ಅವರು ಇಸ್ರಾಯೇಲರನ್ನು ಶಪಿಸುವುದಕ್ಕಾಗಿ ಬಿಳಾಮನಿಗೆ ಹಣಕೊಟ್ಟು ಕರೆಸಿದ್ದರು. ಆದರೆ ನಮ್ಮ ದೇವರು ಆ ಶಾಪವನ್ನು ಆಶೀರ್ವಾದವಾಗಿ ಮಾಡಿದರು.


ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿದ್ದನ್ನೂ ಬೆಯೋರನ ಮಗ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲುಗೊಂಡು ಗಿಲ್ಗಾಲಿನ ವರೆಗೆ ಆದ ನಿಮ್ಮ ಪ್ರಯಾಣವನ್ನೂ ಈಗ ಜ್ಞಾಪಕಮಾಡಿಕೊಳ್ಳಿರಿ. ಆಗ ಯೆಹೋವ ದೇವರ ನೀತಿಯ ಕೃತ್ಯಗಳನ್ನು ತಿಳಿದುಕೊಳ್ಳುವಿರಿ.


ತಮ್ಮ ದುರ್ನೀತಿಗೆ ಸರಿಯಾದ ದುಷ್ಫಲವನ್ನು ಹೊಂದುವರು. ದುಂದುಗಾರಿಕೆಯನ್ನು ಹಗಲಲ್ಲಿ ಕಳೆಯುವುದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕರಾಗಿದ್ದು ಕಳಂಕಕ್ಕೂ, ನಿಂದೆಗೂ ಕಾರಣರಾಗಿದ್ದಾರೆ.


“ಎಲೈ ಸೈತಾನನ ಮಗನೇ, ನೀತಿಗೆಲ್ಲಾ ವೈರಿಯೇ, ನಿನ್ನಲ್ಲಿ ಎಲ್ಲಾ ತರದ ಮೋಸವೂ ಕುತಂತ್ರವೂ ತುಂಬಿವೆ. ಕರ್ತದೇವರ ಸನ್ಮಾರ್ಗಗಳಿಗೆ ಅಡ್ಡಿಯಾಗುವುದನ್ನು ನೀನೆಂದೂ ನಿಲ್ಲಿಸುವುದಿಲ್ಲವೋ?


ಯೂದನು, ದ್ರೋಹ ಕೃತ್ಯದಿಂದ ಪಡೆದ ಹಣದಿಂದ ಒಂದು ಹೊಲವನ್ನು ಕೊಂಡುಕೊಂಡನು; ಅಲ್ಲಿಯೇ ಅವನು ತಲೆಕೆಳಗಾಗಿ ಬಿದ್ದು, ಹೊಟ್ಟೆ ಬಿರಿದು, ಕರುಳೆಲ್ಲಾ ಹೊರಬಂದು ಸತ್ತನು.


ಬೋಧನೆಯನ್ನು ತ್ಯಜಿಸುವವರು ದುಷ್ಟರನ್ನು ಹೊಗಳುತ್ತಾರೆ; ಆದರೆ ಬೋಧನೆಯನ್ನು ಕೈಗೊಳ್ಳುವವರು ಅವರೊಂದಿಗೆ ಹೋರಾಡುತ್ತಾರೆ.


ಎಫ್ರಾಯೀಮೇ, ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನಿಗೆ ಉತ್ತರಿಸಿದ್ದೇನೆ. ನಾನು ಅವನ ಬಗ್ಗೆ ಕಾಳಜಿ ವಹಿಸುತ್ತೇನೆ. ನಾನು ಹಸಿರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಬರುವುದು.”


ನಾವಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು,” ಎಂದು ಹೇಳಿದರು.


ಅದಕ್ಕೆ ಅವನು, “ನಾನು ಇಸ್ರಾಯೇಲನ್ನು ಕಳವಳಪಡಿಸುವುದಿಲ್ಲ. ಆದರೆ ನೀನೂ, ನಿನ್ನ ತಂದೆಯ ಕುಟುಂಬದವರೂ ಯೆಹೋವ ದೇವರ ಆಜ್ಞೆಯನ್ನು ತೊರೆದುಬಿಟ್ಟು, ಬಾಳನನ್ನು ಹಿಂಬಾಲಿಸುವ ನೀವೇ ಕಳವಳಪಡಿಸುವವರು.


ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ, ಯೆಹೋವ ದೇವರಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ. ಉತ್ತಮವಾದ, ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು.


ಆಗ ಯೆಹೋವ ದೇವರು ಕತ್ತೆಗೆ ಮಾತಾಡುವ ಶಕ್ತಿಯನ್ನು ಕೊಟ್ಟರು. ಅದು ಬಿಳಾಮನಿಗೆ, “ಈಗ ನನ್ನನ್ನು ಮೂರು ಸಾರಿ ಹೊಡೆಯುವ ಹಾಗೆ ನಾನು ನಿನಗೆ ಏನು ಮಾಡಿದೆನು?” ಎಂದು ಕೇಳಿತು.


ಕತ್ತೆಯು ಮಾರ್ಗದಲ್ಲಿ ನಿಂತಿದ್ದ ಯೆಹೋವ ದೇವರ ದೂತನನ್ನೂ, ಅವನ ಕೈಯಲ್ಲಿರುವ ಬಿಚ್ಚುಗತ್ತಿಯನ್ನೂ ನೋಡಿ, ಮಾರ್ಗದಿಂದ ವಾರೆಯಾಗಿ ಹೊಲದೊಳಗೆ ಹೋಯಿತು. ಆಗ ಬಿಳಾಮನು ಕತ್ತೆಯನ್ನು ಮಾರ್ಗದೊಳಗೆ ತಿರುಗಿಸುವುದಕ್ಕೆ ಅದನ್ನು ಹೊಡೆದನು.


ಅದಕ್ಕೆ ಅವನು, “ಸರ್ವಶಕ್ತ ದೇವರಾದ ಯೆಹೋವ ದೇವರೇ, ಇಸ್ರಾಯೇಲರಿಗೋಸ್ಕರ ನಾನು ಬಹು ರೋಷವುಳ್ಳವನಾಗಿದ್ದೇನೆ. ಏಕೆಂದರೆ ಇಸ್ರಾಯೇಲರು ನಿಮ್ಮ ಒಡಂಬಡಿಕೆಯನ್ನು ಬಿಟ್ಟು, ನಿಮ್ಮ ಬಲಿಪೀಠಗಳನ್ನು ಕೆಡವಿ, ನಿಮ್ಮ ಪ್ರವಾದಿಗಳನ್ನು ಖಡ್ಗದಿಂದ ಕೊಂದುಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಲು ಹುಡುಕುತ್ತಿದ್ದಾರೆ,” ಎಂದನು.


ಯೆಹೋವ ದೇವರ ದೂತನು ಅವನಿಗೆ, “ನಿನ್ನ ಕತ್ತೆಯನ್ನು ಈಗ ಮೂರು ಸಾರಿ ಹೊಡೆದದ್ದು ಏಕೆ? ಇಗೋ, ನಿನ್ನ ಮಾರ್ಗವು ನನ್ನ ಮುಂದೆ ವಕ್ರವಾಗಿರುವುದರಿಂದ ನಾನು ನಿನ್ನನ್ನು ತಡೆಯುವುದಕ್ಕೆ ಬಂದಿದ್ದೇನೆ.


ಈ ತೈಲವನ್ನು ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ?” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು