Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 2:17 - ಕನ್ನಡ ಸಮಕಾಲಿಕ ಅನುವಾದ

17 ಈ ಸುಳ್ಳು ಬೋಧಕರು ನೀರಿಲ್ಲದ ಬಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ಕಾರ್ಗತ್ತಲು ಇಟ್ಟಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇವರು ನೀರಿಲ್ಲದ ಹಾಳು ಬಾವಿಗಳೂ, ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೋಡಗಳೂ ಆಗಿದ್ದಾರೆ. ಇಂಥವರಿಗಾಗಿ ಕಗ್ಗತ್ತಲೆಯನ್ನು ಸಂಗ್ರಹಿಸಿ ಇಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಈ ಕಳ್ಳಬೋಧಕರು ನೀರಿಲ್ಲದ ಬಾವಿಗಳು, ಬಿರುಗಾಳಿಯಿಂದ ಚದರಿಹೊಗುವ ಮಂಜುಮೋಡಗಳು, ಕಾರ್ಗತ್ತಲಿನ ಕಂದಕವೇ ಅವರ ಪಾಲಿಗೆ ಕಟ್ಟಿಟ್ಟ ಬುತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇವರು ನೀರಿಲ್ಲದ ಬಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮಂಜೂ ಆಗಿದ್ದಾರೆ; ಇಂಥವರ ಪಾಲಿಗೆ ಕಾರ್ಗತ್ತಲೆ ಇಟ್ಟಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಈ ಸುಳ್ಳುಬೋಧಕರು ನೀರಿಲ್ಲದ ಒರತೆಗಳಂತಿದ್ದಾರೆ. ಅವರು ಬಿರುಗಾಳಿಯಿಂದ ಬಡಿದುಕೊಂಡು ಹೋಗುವ ಮೋಡಗಳಂತಿದ್ದಾರೆ. ಅವರಿಗಾಗಿ ಒಂದು ಕಗ್ಗತ್ತಲಾದ ಸ್ಥಳವನ್ನು ಕಾದಿರಿಸಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತಿ ಲೊಕಾ ವ್ಹಾಂಕ್ಡ್ಯಾ ಝರ್ಯಾಚ್ಯಾ ಸಾರ್ಕೆ ಹಾತ್, ಅನಿ ವಾರ್‍ಯಾನ್ ಹುಡ್ವುನ್ ಘೆವ್ನ್ ಜಾತಲ್ಲ್ಯಾ ಮೊಡಾಂಚ್ಯಾ ಸಾರ್ಕೆ ಹಾತ್, ದೆವಾನ್ ತೆಚ್ಯಾ ಸಾಟ್ನಿ ದಾಟ್ ಕಾಳ್ಕಾಚೊ ಜಾಗೊ ತಯಾರ್ ಕರುನ್ ಥವಲ್ಲೊ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 2:17
11 ತಿಳಿವುಗಳ ಹೋಲಿಕೆ  

ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ. ಇವರು ಬಾವಿಗಳಿಗೆ ಬರುತ್ತಾರೆ. ಆದರೆ ನೀರು ಸಿಕ್ಕಲ್ಲ. ಬರೀ ಪಾತ್ರೆಗಳುಳ್ಳವರಾಗಿ ತಿರುಗಿಕೊಳ್ಳುತ್ತಾರೆ. ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ, ತಮ್ಮ ತಲೆಗಳನ್ನು ಮುಚ್ಚಿಕೊಳ್ಳುತ್ತಾರೆ.


ಆಗ, ನಾವು ಚಿಕ್ಕಮಕ್ಕಳಂತೆ ಇರುವುದಿಲ್ಲ: ಮನುಷ್ಯರ ವಿವಿಧ ಬೋಧನೆಗಳಿಂದ ಗಾಳಿಯಿಂದ ತೂರಾಡಿಕೊಳ್ಳುವಂತಾಗುವುದಿಲ್ಲ. ಮನುಷ್ಯರ ಕುಯುಕ್ತಿಗೆ, ತಂತ್ರಕ್ಕೆ, ಒಳಸಂಚಿಗೆ ಒಳಗಾಗುವುದಿಲ್ಲ. ಅವರ ಪ್ರತಿಯೊಂದು ಬೋಧನೆಯ ಗಾಳಿಯಿಂದಲೂ ತೂರಾಡಿಕೊಂಡು ಅತ್ತಿತ್ತ ಅಲೆದಾಡುವ ಚಿಕ್ಕಮಕ್ಕಳಂತೆ ಇರಬಾರದು.


ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ಅವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿಟ್ಟಿದ್ದಾರೆ.


ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕೆ ಬಂಧಿಸಿ, ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದರು.


ನಿಷ್ಪ್ರಯೋಜಕನಾದ ಆ ಸೇವಕನನ್ನು ನೀವು ಹೊರಗೆ ಕತ್ತಲೆಯಲ್ಲಿ ಹಾಕಿರಿ. ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು,’ ಎಂದನು.


“ಆಗ ಅರಸನು ಸೇವಕರಿಗೆ, ‘ಅವನ ಕೈಕಾಲುಗಳನ್ನು ಕಟ್ಟಿ ತೆಗೆದುಕೊಂಡು ಹೊರಗೆ ಕತ್ತಲೆಯಲ್ಲಿ ಹಾಕಿರಿ. ಅಲ್ಲಿ ಹಲ್ಲು ಕಡಿಯುತ್ತಾ ಗೋಳಾಡುತ್ತಿರಲಿ,’ ಎಂದು ಹೇಳಿದನು.


ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ದಬ್ಬಲಾಗುವರು, ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಎಂದು ನಿಮಗೆ ಹೇಳುತ್ತೇನೆ,” ಎಂದರು.


ಎಫ್ರಾಯೀಮೇ, ನಿನಗೆ ನಾನು ಏನು ಮಾಡಲಿ? ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಪ್ರೀತಿಯು ಹೊತ್ತಾರೆಯ ಮೇಘದ ಹಾಗೆಯೂ, ಮುಂಜಾನೆಯ ಮಂಜಿನ ಹಾಗೆಯೂ ಹೋಗಿಬಿಡುತ್ತದೆ.


ನೀವು ಮುಟ್ಟಬಹುದಾದ ಮತ್ತು ಬೆಂಕಿಹತ್ತಿದಂಥ ಬೆಟ್ಟಕ್ಕೂ ಮಬ್ಬಿಗೂ ಕತ್ತಲೆಗೂ ಬಿರುಗಾಳಿಗೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು