2 ಪೇತ್ರನು 2:18 - ಕನ್ನಡ ಸಮಕಾಲಿಕ ಅನುವಾದ18 ತಪ್ಪಾದ ಮಾರ್ಗದಲ್ಲಿ ಬಾಳುವವರಿಂದ ತಪ್ಪಿಸಿಕೊಂಡವರನ್ನು ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಅವರನ್ನು ಮರುಳುಗೊಳಿಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ದುರ್ಮಾರ್ಗಿಗಳ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರನ್ನು ಇವರು ಜಂಬದ ಸೊಕ್ಕುಮಾತುಗಳಿಂದ, ಮೂರ್ಖ ಹೇಳಿಕೆಗಳಿಂದ, ಭೋಗ-ವಿಲಾಸಗಳ ಬಲೆಯಿಂದ ವಶಪಡಿಸಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ತಪ್ಪಾದ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಬಂಡುಬಂಡಾದ ದುರಾಶೆಗಳನ್ನು ಹುಟ್ಟಿಸಿ ಅವರನ್ನು ಮರುಳುಗೊಳಿಸುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅವರು ಅರ್ಥವಿಲ್ಲದ ಮಾತು ಗಳಿಂದ ಬಡಾಯಿಕೊಚ್ಚಿಕೊಳ್ಳುತ್ತಾರೆ; ಜನರನ್ನು ಪಾಪಗಳ ಬಲೆಗೆ ನಡೆಸುತ್ತಿದ್ದಾರೆ. ತಪ್ಪುಮಾರ್ಗದಲ್ಲಿ ನಡೆಯುವ ಜನರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡು ಬಂದ ಜನರನ್ನು ದಾರಿತಪ್ಪಿಸುತ್ತಾರೆ. ತಮ್ಮ ಪಾಪಸ್ವಭಾವಕ್ಕನುಸಾರವಾಗಿ ಮಾಡಲು ಇಚ್ಛಿಸುವ ಕೆಟ್ಟಕಾರ್ಯಗಳನ್ನು ಬಳಸಿಕೊಂಡು ಈ ಸುಳ್ಳುಬೋಧಕರು ಅವರನ್ನು ದಾರಿ ತಪ್ಪಿಸುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ತೆನಿ ಪವಿತ್ರ್ ನಸಲ್ಲಿ ಗೊಸ್ಟಿಯಾ ಬೊಲುನ್ ಬುರ್ಶ್ಯಾಪಾನಾ ವೈನಾ ತ್ಯಾ ಲೊಕಾಕ್ನಿ ಗೊಂದಳಾಚ್ಯಾ ವಾಟೆತ್ ಚಲ್ವುತಲ್ಯಾ ಲೊಕಾಂಚ್ಯಾಕ್ನಾ ಚುಕ್ವುನ್ ಘೆವ್ಕ್ ಯೆಲ್ಲ್ಯಾಕ್ನಿ ವಾಟ್ ಚುಕ್ವುತಾತ್, ಅಪ್ಲ್ಯಾ ಪಾಪಾಚ್ಯಾ ಸ್ವಭಾವಾ ಸಾರ್ಕೆ ಕರುಕ್ ಇಚ್ಛ್ಯಾ ಕರ್ತಲಿ ಬುರ್ಶಿಕಾಮಾ ವಾಪ್ರುನ್ ಘೆವ್ಕ್ ಹಿ ಝುಟಿ ಶಿಕಾಪಾಕಾರಿ ತೆಂಕಾ ವಾಟ್ ಚುಕ್ವುತಾತ್. ಅಧ್ಯಾಯವನ್ನು ನೋಡಿ |