Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 2:19 - ಕನ್ನಡ ಸಮಕಾಲಿಕ ಅನುವಾದ

19 ಇಂಥವರು ಸ್ವಾತಂತ್ರ್ಯಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ. ಆದರೆ ತಾವೇ ಕೆಟ್ಟತನದ ದಾಸತ್ವದೊಳಗಿದ್ದಾರೆ. ಒಬ್ಬನು ಯಾವುದಕ್ಕೆ ಸೋತು ಹೋಗಿರುವನೋ, ಅವನು ಅದರ ದಾಸತ್ವದೊಳಗಿರುವನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನಮಾಡುತ್ತಾರೆ. ಆದರೆ ತಾವೇ ಕೆಟ್ಟತನಕ್ಕೆ ದಾಸರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋಲುವನೋ ಅವನು ಅದರ ದಾಸನಾಗಿದ್ದಾನಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ತಾವೇ ದುರಭ್ಯಾಸಗಳಿಗೆ ಗುಲಾಮರಾಗಿದ್ದರೂ ತಾವು ವಶಪಡಿಸಿಕೊಂಡವರಿಗೆ ಸ್ವಾತಂತ್ರ್ಯವನ್ನು ತರುವ ಮಾತುಕೊಡುತ್ತಾರೆ. ಒಬ್ಬನು ಯಾವುದಕ್ಕೆ ಸೋಲುತ್ತಾನೋ ಅದಕ್ಕೆ ಅವನು ಗುಲಾಮನಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವದೊಳಗಿದ್ದಾರೆ. ಒಬ್ಬನು ಯಾವದಕ್ಕೆ ಸೋತು ಹೋಗಿರುವನೋ ಅದರ ದಾಸತ್ವದೊಳಗಿರುವನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಈ ಸುಳ್ಳುಬೋಧಕರು ಆ ಜನರಿಗೆ ಸ್ವಾತಂತ್ರ್ಯವನ್ನು ಕೊಡುವುದಾಗಿ ವಾಗ್ದಾನ ಮಾಡುತ್ತಾರೆ. ಆದರೆ ಈ ಸುಳ್ಳುಬೋಧಕರೇ ಸ್ವತಂತ್ರರಾಗದೆ ನಾಶವಾಗುವಂಥ ಸಂಗತಿಗಳಿಗೆ ಗುಲಾಮರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋತುಹೋಗಿದ್ದಾನೋ ಅದಕ್ಕೆ ಗುಲಾಮನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತ್ಯಾ ಲೊಕಾಕ್ನಿ ಸ್ವಾತಂತ್ರ್ ದಿತಾಂವ್ ಮನುನ್ ತೆಂಕಾ ಗೊಸ್ಟ್ ದಿತ್ಯಾತ್. ಖರೆ ತೆನಿಚ್ ಸ್ವಾತಂತ್ರ್ ಹೊಯ್ ನಸ್ತಾನಾ ಹಾಳ್ ಹೊತಲ್ಯಾ ಸಂಗತಿಯಾಕ್ನಿ ಗುಲಾಮ್ ಹೊವ್ನ್ ಹಾತ್, ಕಶ್ಯಾಕ್ ಮಟ್ಲ್ಯಾರ್, ಎಕ್ ಮಾನುಸ್ ಅಪ್ನಿ ಹಾರಲ್ಲ್ಯಾ ವಿಶಯಾಚೊ ಗುಲಾಮ್ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 2:19
14 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು ಉತ್ತರವಾಗಿ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪ ಮಾಡುವವರು ಪಾಪಕ್ಕೆ ಗುಲಾಮರಾಗಿದ್ದಾರೆ.


ಪ್ರಿಯರೇ, ನೀವು ಸ್ವಾತಂತ್ರ್ಯಕ್ಕಾಗಿ ಕರೆಹೊಂದಿದವರು. ಆದರೆ ಆ ಸ್ವಾತಂತ್ರ್ಯವನ್ನು ಶಾರೀರಿಕ ಅನುಕೂಲಕ್ಕಾಗಿ ಉಪಯೋಗಿಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ದೀನರಾಗಿ ಸೇವೆಮಾಡಿರಿ.


ಸ್ವತಂತ್ರರಾಗಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ. ದೇವರ ಸೇವಕರಂತೆಯೇ ಬಾಳಿರಿ.


ಕ್ರಿಸ್ತ ಯೇಸು ನಮ್ಮನ್ನು ಸ್ವತಂತ್ರಕ್ಕಾಗಿಯೇ ಬಿಡುಗಡೆ ಮಾಡಿದ್ದಾರೆ. ಆದ್ದರಿಂದ ಸ್ಥಿರವಾಗಿ ನಿಲ್ಲಿರಿ. ನೀವು ನಿಯಮದ ದಾಸತ್ವದ ನೊಗದಲ್ಲಿ ಪುನಃ ಸಿಕ್ಕಿಕೊಳ್ಳಬೇಡಿರಿ.


ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸ ಹೋದವರೂ ವಿವಿಧ ಆಶೆಗಳಿಗೂ ಭೋಗಗಳಿಗೂ ದಾಸರಾಗಿದ್ದೆವು. ಕೆಟ್ಟತನ ಹಾಗೂ ಮತ್ಸರಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ದ್ವೇಷಿಸುವವರೂ ಆಗಿದ್ದೆವು.


ಈ ರೀತಿಯಾಗಿ, ಸೈತಾನನ ಚಿತ್ತವನ್ನು ನೆರವೇರಿಸಲು ಗುಲಾಮರಾಗಿರುವವರು, ಅವನ ಬಲೆಯಿಂದ ಬಿಡುಗಡೆಹೊಂದಿ ಸ್ವಸ್ಥಮನಸ್ಸುಳ್ಳವರಾಗಿ ತಪ್ಪಿಸಿಕೊಳ್ಳುವರು.


ಪ್ರವಾದಿಗಳ ನಿಮಿತ್ತ: ನನ್ನ ಹೃದಯವು ನನ್ನಲ್ಲಿ ಮುರಿದಿದೆ. ನನ್ನ ಎಲುಬುಗಳೆಲ್ಲಾ ಕದಲುತ್ತವೆ. ಯೆಹೋವ ದೇವರ ನಿಮಿತ್ತವೂ, ಆತನ ಪರಿಶುದ್ಧ ವಾಕ್ಯಗಳ ನಿಮಿತ್ತವೂ, ಮತ್ತನಾದ ಮನುಷ್ಯನ ಹಾಗೆಯೂ, ದ್ರಾಕ್ಷಾರಸಕ್ಕೆ ಒಳಗಾದ ಪುರುಷನ ಹಾಗೆಯೂ ಇದ್ದೇನೆ.


ಕುಡುಕರಿಂದ ಕೂಡಿದ ಎಫ್ರಾಯೀಮಿನ ಕಿರೀಟದಂತಿರುವ ನಗರಕ್ಕೆ ಕಷ್ಟ! ಒಮ್ಮೆ ಕುಡಿತಕ್ಕೆ ಸೋತು ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಈಗ ಬಾಡಿಹೋಗುತ್ತಿರುವ ಆ ಹೂವಿಗೆ ಕಷ್ಟ!


ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾದ ಜ್ಞಾನಹೊಂದಿ ಲೋಕದ ಮಾಲಿನ್ಯಗಳನ್ನು ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.


ದುರಾತ್ಮ ಪೀಡಿತ ಮನುಷ್ಯನು ಅವರ ಮೇಲೆ ಹಾರಿಬಿದ್ದು, ಅವರೆಲ್ಲರಿಗಿಂತಲೂ ಹೆಚ್ಚು ಬಲಗೊಂಡು ಅವರನ್ನು ಬಡಿದು ಗಾಯಗೊಳಿಸಲು, ಅವರು ನಗ್ನರಾಗಿಯೇ ಮನೆಬಿಟ್ಟು ಹೊರಗೆ ಓಡಿಹೋದರು.


ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಅತ್ಯಂತ ಮಹತ್ವವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ದೇವರು ನಮಗೆ ದಯಪಾಲಿಸಿದ್ದಾರೆ.


ಯಾಜಕನು ಅದನ್ನು ಪರೀಕ್ಷಿಸಿದಾಗ, ಕಜ್ಜಿಯ ಚರ್ಮವೇ ಹರಡಿರುವುದಾದರೆ ಆಗ ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. ಏಕೆಂದರೆ ಅದು ಚರ್ಮರೋಗವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು