Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 2:20 - ಕನ್ನಡ ಸಮಕಾಲಿಕ ಅನುವಾದ

20 ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾದ ಜ್ಞಾನಹೊಂದಿ ಲೋಕದ ಮಾಲಿನ್ಯಗಳನ್ನು ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನನ್ನು ಕುರಿತಾದ ಪರಿಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಮ್ಮ ಪ್ರಭು ಹಾಗೂ ಉದ್ಧಾರಕರಾದ ಯೇಸುಕ್ರಿಸ್ತರನ್ನು ಕುರಿತ ಜ್ಞಾನದ ಮೂಲಕ ಕೆಲವರು ಲೋಕದ ಕಲ್ಮಶದಿಂದ ಪಾರಾಗಿ ನಿರ್ಮಲರಾಗುತ್ತಾರೆ. ಇಂಥವರು ಮರಳಿ ಅದರಲ್ಲೇ ಸಿಲುಕಿಕೊಂಡು ಅದಕ್ಕೆ ಗುಲಾಮರಾದರೆ ಅವರ ಅಂತಿಮ ಗತಿ ಮೊದಲ ಗತಿಗಿಂತಲೂ ಅಧೋಗತಿಯಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಈ ಲೋಕದಲ್ಲಿನ ಕೆಟ್ಟಕಾರ್ಯಗಳಿಂದ ಆ ಜನರನ್ನು ಪಾರುಮಾಡಲಾಯಿತು. ನಮ್ಮ ಪ್ರಭುವಾದ ಮತ್ತು ರಕ್ಷಕನಾದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದರ ಮೂಲಕ ಅವರಿಗೆ ಬಿಡುಗಡೆಯಾಯಿತು. ಆದರೆ ಆ ಜನರು ತಮ್ಮ ಹಿಂದಿನ ಸಂಗತಿಗಳ ಕಡೆಗೆ ಹಿಂದಿರುಗಿಹೋದರೆ ಮತ್ತು ಅವುಗಳು ಅವರನ್ನು ತಮ್ಮ ಹತೋಟಿಯಲ್ಲಿಟ್ಟುಕೊಂಡಿದ್ದರೆ ಅವರು ಮೊದಲಿಗಿಂತಲೂ ಹೆಚ್ಚು ಕೆಟ್ಟುಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಅಮ್ಚ್ಯಾ ಧನಿಯಾ ಜೆಜುಕ್ರಿಸ್ತಾಕ್ ಒಳ್ಕುನ್ ಘೆಟಲ್ಲ್ಯಾ ವೈನಾ ತೆಂಕಾ ಸುಟ್ಕಾ ಹೊಲೆ, ಅನಿ ಹ್ಯಾ ಜಗಾತ್ಲ್ಯಾ ಬುರ್ಶ್ಯಾ ಕಾಮಾತ್ನಾ ತ್ಯಾ ಲೊಕಾಕ್ನಿ ಸುಟ್ಕಾ ಕರುನ್ ಹೊಲೆ, ಅಸೆ ರಾತಾನಾ ಪಾಟಿ ಪರ್ತುನ್ ಗೆಲ್ಯಾರ್ ಅನಿ ತ್ಯಾ ಸಂಗತಿಯಾನಿ ತೆಂಕಾ ಹತೊಟಿತ್ ಥವ್ನ್ ಘೆಟಲ್ಲೆ ಹೊಯ್ ಹೊಲ್ಯಾರ್ ತೆನಿ ಅದ್ಲ್ಯಾಕಿಂತಾಬಿ ಲೈ ಹಾಳ್ ಹೊವ್ನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 2:20
20 ತಿಳಿವುಗಳ ಹೋಲಿಕೆ  

ವಿನಾಶನವೇ ಅವರ ಅಂತ್ಯವು. ಹೊಟ್ಟೆಯೇ ಅವರ ದೇವರು. ನಾಚಿಕೆ ಕಾರ್ಯಗಳಲ್ಲಿಯೇ ಅವರ ಪ್ರಭಾವ. ಅವರು ಲೌಕಿಕವಾದವುಗಳ ಮೇಲೆ ಮನಸ್ಸಿಡುತ್ತಾರೆ.


ಅವರಿಗೆ ಜ್ಞಾನವಿದ್ದಿದ್ದರೆ ಈ ವಿಷಯಗಳನ್ನೆಲ್ಲಾ ಗ್ರಹಿಸುತ್ತಿದ್ದರು, ತಮ್ಮ ಕಡೆಕಾಲದಲ್ಲಿ ದುರವಸ್ಥೆ ಪ್ರಾಪ್ತವಾಗುವದೆಂದು ತಿಳಿದುಕೊಳ್ಳುತ್ತಿದ್ದರು.


ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಅತ್ಯಂತ ಮಹತ್ವವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ದೇವರು ನಮಗೆ ದಯಪಾಲಿಸಿದ್ದಾರೆ.


ತಪ್ಪಾದ ಮಾರ್ಗದಲ್ಲಿ ಬಾಳುವವರಿಂದ ತಪ್ಪಿಸಿಕೊಂಡವರನ್ನು ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಅವರನ್ನು ಮರುಳುಗೊಳಿಸುತ್ತಾರೆ.


ದೇವರ ವಿಷಯವಾಗಿಯೂ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ವಿಷಯವಾಗಿಯೂ ಇರುವ ತಿಳುವಳಿಕೆಯ ಮೂಲಕ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ಅನಂತರ ಬಿಳಾಮನು ಅಮಾಲೇಕ್ಯರನ್ನು ನೋಡಿ ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಜನಾಂಗಗಳಲ್ಲಿ ಮೊದಲನೆಯವನೇ ಅಮಾಲೇಕ್ಯನು, ಆದರೆ ಅವನು ಕೊನೆಗೆ ನಾಶವಾಗುವನು.”


ನಾನು ನೀತಿವಂತನಿಗೆ, ನೀನು ನಿಶ್ಚಯವಾಗಿ ಬದುಕುವೆ ಎಂದು ಹೇಳುವಾಗ, ಅವನು ಒಂದು ವೇಳೆ ಅವನ ಸ್ವಂತ ನೀತಿಯನ್ನು ನಂಬಿ ಅನ್ಯಾಯವನ್ನು ಮಾಡಿದರೆ ಅವನು ಮಾಡಿರುವ ಎಲ್ಲಾ ಸುಕೃತ್ಯಗಳು ಅವನ ಲೆಕ್ಕಕ್ಕೆ ಸೇರುವುದಿಲ್ಲ. ಅವನು ಮಾಡಿರುವ ಅಕ್ರಮಗಳಿಂದಲೇ ಅವನು ಸಾಯುವನು.


ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡ ನಾಯಕನನ್ನು ಮೆಚ್ಚಿಸಬೇಕೆಂದು ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳಲಾರನು.


ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಅವರ ಸಂಕಟದಲ್ಲಿ ಪರಾಮರಿಸಿ, ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವುದೇ ತಂದೆ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ದೋಷವೂ ಆಗಿರುವ ಭಕ್ತಿ.


ದೇವರು ತಮ್ಮ ಸ್ವಂತ ಮಹಿಮೆಗಾಗಿಯೂ ಸದ್ಗುಣಕ್ಕಾಗಿಯೂ ನಮ್ಮನ್ನು ಕರೆದಿದ್ದಾರೆ. ಏಕೆಂದರೆ, ದೇವರ ತಿಳುವಳಿಕೆಯ ಮೂಲಕವಾಗಿ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ದೇವರ ಶಕ್ತಿಯು ನಮಗೆ ಕೊಡಲಾಗಿದೆ.


ಈ ಗುಣಗಳು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ, ನಮ್ಮ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅರಿತುಕೊಳ್ಳುವುದರಲ್ಲಿ ನೀವು ನಿಷ್ಪ್ರಯೋಜಕರೂ ನಿಷ್ಫಲರೂ ಆಗದಂತೆ ಮಾಡುತ್ತವೆ.


ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವು ತಮ್ಮ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಭಾಗ್ಯವನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವರು.


ನೀವು ಕೃಪೆಯಲ್ಲಿ ಬೆಳೆಯಿರಿ ಮತ್ತು ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಅವರಿಗೆ ಈಗಲೂ ಸರ್ವಕಾಲವೂ ಮಹಿಮೆ ಇರಲಿ! ಆಮೆನ್.


ಯಾಜಕನು ಅದನ್ನು ಪರೀಕ್ಷಿಸಿದಾಗ, ಅದು ಚರ್ಮದಿಂದ ಕೆಳಗೆ ಕಂಡರೆ ಮತ್ತು ಅಲ್ಲಿಯ ಕೂದಲು ಬೆಳ್ಳಗಾಗಿದ್ದರೆ, ಯಾಜಕನು ಅವನನ್ನು ಅಶುದ್ಧನೆಂದು ನುಡಿಯಬೇಕು. ಅದು ಹುಣ್ಣಿನಿಂದ ಒಡೆದುಹೋದ ಚರ್ಮರೋಗವಾಗಿರುವುದು.


ಅದನ್ನು ತೊಳೆದಾದ ಮೇಲೆ ಯಾಜಕನು ಆ ಬೂಜನ್ನು ಪರೀಕ್ಷಿಸಬೇಕು. ಆ ಬೂಜು ಬಣ್ಣವನ್ನು ಬದಲಾಯಿಸದಿದ್ದರೆ ಮತ್ತು ಹರಡದಿದ್ದರೆ ಅದು ಅಶುದ್ಧವಾಗಿರುವುದು. ಅದನ್ನು ನೀನು ಬೆಂಕಿಯಿಂದ ಸುಡಬೇಕು. ಅದು ಒಳಗಿನಿಂದಾಗಲಿ ಇಲ್ಲವೆ ಹೊರಗಿನಿಂದಾಗಲಿ ವ್ಯಾಪಿಸಿದೆ.


“ಅವನು ಆ ಮನೆಯ ಕಲ್ಲುಗಳನ್ನು ತೆಗೆಸಿ ಅದನ್ನು ಕೆತ್ತಿ ಗಿಲಾವು ಮಾಡಿಸಿದ ಮೇಲೆ ಆ ಬೂಜು ತಿರುಗಿ ಕಾಣಬಂದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು