Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 2:4 - ಕನ್ನಡ ಸಮಕಾಲಿಕ ಅನುವಾದ

4 ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕೆ ಬಂಧಿಸಿ, ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪಾಪಮಾಡಿದ ದೇವದೂತರನ್ನೂ ದೇವರು ದಂಡಿಸದೆ ಬಿಡಲಿಲ್ಲ. ಅವರನ್ನು ನರಕಕ್ಕೆ ದಬ್ಬಿದರು. ಅಂತಿಮ ತೀರ್ಪಿನ ದಿನವನ್ನು ಎದುರುನೋಡುತ್ತಾ ಕಾದಿರುವಂತೆ, ಕಾರಿರುಳ ಕೂಪದಲ್ಲಿ ಕೂಡಿಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೇಗಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರಬೇಕೆಂದು ಕತ್ತಲೇ ಗುಂಡಿಗಳಿಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವದೂತರು ಪಾಪಗಳನ್ನು ಮಾಡಿದಾಗ, ದೇವರು ಅವರನ್ನು ದಂಡಿಸದೆ ಬಿಡಲಿಲ್ಲ. ಆತನು ಅವರನ್ನು ನರಕಕ್ಕೆ ದಬ್ಬಿದನು. ಕತ್ತಲೆಯ ಗುಂಡಿಗಳಿಗೆ ಹಾಕಿದನು. ಅವರಿಗೆ ನ್ಯಾಯತೀರ್ಪಾಗುವವರೆಗೂ ಅವರು ಅಲ್ಲಿಯೇ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ದೆವ್ ದುತಾಕ್ನಿ ಪಾಪ್ ಕರಲ್ಯಾ ಸಾಟ್ನಿ ನರ್ಕಾತ್ ಥವ್ಲ್ಯಾನ್ ಅನಿ ತೆಂಚಿ ಝಡ್ತಿ ಹೊಯ್ ಪತರ್ ಸರ್ಪಳಿಯಾನಿ ಭಾಂದುನ್ ತೆಂಕಾ ಕಾಳ್ಕಾತ್ ಥವ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 2:4
25 ತಿಳಿವುಗಳ ಹೋಲಿಕೆ  

ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ಅವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿಟ್ಟಿದ್ದಾರೆ.


“ನಾನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ದೇವರು ತಮ್ಮ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೋಸ್ಕರ ಕ್ರಿಸ್ತ ಯೇಸುವನ್ನು ಕೊಟ್ಟ ಮೇಲೆ ನಮಗೆ ಉದಾರವಾಗಿ ಅವರೊಂದಿಗೆ ಎಲ್ಲವನ್ನು ಸಹ ಕೊಡದೆ ಇರುವರೇ?


ಮುಂಜಾನೆಯ ನಕ್ಷತ್ರವೇ, ಉದಯ ಪುತ್ರನೇ, ಆಕಾಶದಿಂದ ನೀನು ಹೇಗೆ ಬಿದ್ದೆ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಬಿದ್ದೆ?


ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲಾಯಿತು. ಅಲ್ಲಿ ಮೃಗವೂ ಸುಳ್ಳು ಪ್ರವಾದಿ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.


ನನ್ನ ಕಣ್ಣುಗಳು ನಿನ್ನನ್ನು ಕನಿಕರಿಸುವುದೂ ಇಲ್ಲ. ನಾನು ನಿನ್ನನ್ನು ಬಿಡುವುದೂ ಇಲ್ಲ. ಆದರೆ ನಿನ್ನ ದುರ್ಮಾರ್ಗಗಳ ಪ್ರಕಾರ, ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ. ನಿನ್ನ ಅಸಹ್ಯ ಕಾರ್ಯಗಳು ನಿನ್ನ ಮಧ್ಯೆ ಇರುವುವು. ಆಗ ನಾನೇ ಯೆಹೋವ ದೇವರು ಎಂದು ನಿಮಗೆ ತಿಳಿಯುವುದು.’


ಯೇಸು ಅವರಿಗೆ, “ಸೈತಾನನು ಮಿಂಚಿನ ಹಾಗೆ ಆಕಾಶದಿಂದ ಬೀಳುವುದನ್ನು ನಾನು ಕಂಡೆನು.


ಆದಕಾರಣ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನಿಶ್ಚಯವಾಗಿ ನೀವು ನನ್ನ ಪರಿಶುದ್ಧ ಸ್ಥಳವನ್ನು ನಿಮ್ಮ ಎಲ್ಲಾ ಹೇಸಿಗೆಗಳಿಂದಲೂ, ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ, ನಾನೂ ಸಹ ನಿಮ್ಮನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವುದೂ ಇಲ್ಲ, ಕ್ಷಮಿಸುವುದೂ ಇಲ್ಲ.


ತಮ್ಮ ಸೇವಕರಲ್ಲಿ ದೇವರು ನಂಬದೆ, ತಮ್ಮ ದೂತರಲ್ಲಿಯೇ ತಪ್ಪು ಕಂಡಿರಲು,


ಪಾಪದಲ್ಲಿ ಮುಂದುವರೆಯುವವರು ಸೈತಾನನಿಗೆ ಸೇರಿದವರು. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ದೇವಪುತ್ರ ಯೇಸು ಸೈತಾನನ ಕೆಲಸಗಳನ್ನು ಲಯ ಮಾಡುವುದಕ್ಕೋಸ್ಕರವೇ ಪ್ರತ್ಯಕ್ಷರಾದರು.


ಆದರೂ ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಸ್ವರ್ಗೀಯ ಜೀವಿಗಳ ವಿರೋಧವಾಗಿ ಕರ್ತದೇವರ ಮುಂದೆ ಇವರು ನ್ಯಾಯತೀರ್ಪನ್ನು ತರುವುದಿಲ್ಲ.


ದೇವರು ಪುರಾತನ ಜಗತ್ತನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಲೋಕದ ಮೇಲೆ ಜಲಪ್ರಳಯವನ್ನು ಬರಮಾಡಿದರು. ಆದರೆ ನೀತಿಯನ್ನು ಸಾರುತ್ತಿದ್ದ ನೋಹನನ್ನು ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ರಕ್ಷಿಸಿದರು.


ಅವು ತಮ್ಮನ್ನು ಪಾತಾಳಕ್ಕೆ ಹೋಗುವಂತೆ ಅಪ್ಪಣೆ ಕೊಡಬಾರದೆಂದು ಯೇಸುವನ್ನು ಬೇಡಿಕೊಂಡವು.


ನೀವು ನಿಮ್ಮ ತಂದೆಯಾದ ಪಿಶಾಚನಿಗೆ ಸೇರಿದವರಾಗಿದ್ದೀರಿ. ನಿಮ್ಮ ತಂದೆಯ ಆಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ಸುಳ್ಳಾಡುವಾಗ ತನ್ನ ಸ್ವಭಾವಾನುಸಾರವಾಗಿ ಆಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿನ ತಂದೆಯೂ ಆಗಿದ್ದಾನೆ.


ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತ ದೇವಪುತ್ರನೇ, ನನ್ನ ಗೊಡವೆ ನಿಮಗೆ ಏಕೆ? ದೇವರಾಣೆ, ನನ್ನನ್ನು ಪೀಡಿಸಬೇಡಿರಿ!” ಎಂದು ಅರಚಿದನು.


ಆಗ ಅವರು, “ದೇವಪುತ್ರನೇ, ನಮ್ಮ ಗೊಡವೆ ನಿಮಗೆ ಏಕೆ? ಸಮಯಕ್ಕೆ ಮುಂಚೆಯೇ ನಮ್ಮನ್ನು ಪೀಡಿಸಲು ಇಲ್ಲಿಗೆ ಬಂದೆಯಾ?” ಎಂದು ಕೂಗಿ ಹೇಳಿದರು.


ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲಕ್ಕೆ ಇಡಲಾಗಿದೆ.


ಕರ್ತದೇವರು ಭಕ್ತರನ್ನು ಸಂಕಟದೊಳಗಿಂದ ತಪ್ಪಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವರಾಗಿದ್ದಾರೆ.


ನಾನು ಕಟಾಕ್ಷಿಸುವುದೂ ಇಲ್ಲ, ನಿನ್ನನ್ನು ಕನಿಕರಿಸುವುದೂ ಇಲ್ಲ. ನಿನ್ನ ನಡತೆಗಳಿಗೂ, ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕ ಹಾಗೆ ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ನಾನೇ ಹೊಡೆಯುತ್ತಿರುವ ಯೆಹೋವ ದೇವರೆಂದು ನಿಮಗೆ ತಿಳಿಯುವುದು.


ಹೀಗೆ ಆಪತ್ತಿನ ದಿನ ದುಷ್ಟರು ತಪ್ಪಿಸಿಕೊಳ್ಳುತ್ತಾರೆ; ದೇವರ ದಂಡನೆಯ ದಿನದಲ್ಲಿ ಅವರು ಬಿಡುಗಡೆಯಾಗುತ್ತಾರೆ.


ಅಂಥವನನ್ನು ಯೆಹೋವ ದೇವರು ಉಳಿಸುವುದಿಲ್ಲ, ಆಗಲೇ ಯೆಹೋವ ದೇವರ ಕೋಪವೂ, ರೋಷವೂ ಆ ಮನುಷ್ಯನನ್ನು ಸುಡುವುದು. ಈ ಗ್ರಂಥದಲ್ಲಿ ಬರೆದಿರುವ ಶಾಪವೆಲ್ಲಾ ಅವನ ಮೇಲೆ ಬರುವುದು. ಯೆಹೋವ ದೇವರು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವರು.


ಏಕೆಂದರೆ ದೇವರು ಹುಟ್ಟು ಕೊಂಬೆಗಳನ್ನು ಉಳಿಸದಿದ್ದ ಮೇಲೆ ನಿನ್ನನ್ನೂ ಉಳಿಸುವುದಿಲ್ಲ.


ತಮ್ಮ ಬೇಸರಕ್ಕೆ ದಾರಿಯನ್ನು ಮಾಡಿ, ಅವರನ್ನು ಪೂರ್ಣವಾಗಿ ದಂಡಿಸಿದರು. ಅವರ ಜೀವವನ್ನು ವ್ಯಾಧಿಗೆ ಒಪ್ಪಿಸಿಬಿಟ್ಟು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು