Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 2:5 - ಕನ್ನಡ ಸಮಕಾಲಿಕ ಅನುವಾದ

5 ದೇವರು ಪುರಾತನ ಜಗತ್ತನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಲೋಕದ ಮೇಲೆ ಜಲಪ್ರಳಯವನ್ನು ಬರಮಾಡಿದರು. ಆದರೆ ನೀತಿಯನ್ನು ಸಾರುತ್ತಿದ್ದ ನೋಹನನ್ನು ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ರಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆತನು ಭಕ್ತಿಹೀನರಾದ ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ ಜಲಪ್ರಳಯವನ್ನು ಬರಮಾಡಿದನು. ಆದರೆ ಸುನೀತಿಯನ್ನು ಸಾರುತ್ತಿದ್ದ ನೋಹನನ್ನೂ ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಉಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಪುರಾತನ ಕಾಲದ ಜನರನ್ನೂ ಸಹ ದೇವರು ದಂಡಿಸದೆ ಬಿಡಲಿಲ್ಲ. ನೀತಿಮಾರ್ಗವನ್ನು ಸಾರಿದ ನೋವನನ್ನು ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಕಾಪಾಡಿ, ದುರ್ಜನರಿಂದ ಕೂಡಿದ್ದ ಜಗತ್ತಿನ ಮೇಲೆ ಜಲಪ್ರಳಯವನ್ನು ಬರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆತನು ಭಕ್ತಿಹೀನರಾದ ಪುರಾತನರ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ ಜಲಪ್ರಲಯವನ್ನು ಬರಮಾಡಿದನು; ಆದರೆ ಸುನೀತಿಯನ್ನು ಸಾರುವವನಾಗಿದ್ದ ನೋಹನನ್ನೂ ಅವನೊಂದಿಗೆ ಬೇರೆ ಏಳು ಮಂದಿಯನ್ನೂ ಉಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಬಹಳ ಹಿಂದೆ ಬದುಕಿದ್ದ ಕೆಟ್ಟ ಜನರನ್ನು ದೇವರು ದಂಡಿಸಿದನು. ಈ ಲೋಕದಲ್ಲಿ ತನಗೆ ವಿರುದ್ಧವಾದ ಜನರು ತುಂಬಿಕೊಂಡಿದ್ದಾಗ ಆತನು ಜಲಪ್ರಳಯವನ್ನು ಬರಮಾಡಿ ದನು. ಆದರೆ ನೋಹನನ್ನೂ ಅವನೊಂದಿಗಿದ್ದ ಏಳು ಮಂದಿಯನ್ನೂ ರಕ್ಷಿಸಿದನು. ಯೋಗ್ಯರಾಗಿ ಜೀವಿಸಬೇಕೆಂದು ಆ ಜನರಿಗೆ ತಿಳಿಸಿದವನೇ ನೋಹ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ದೆವಾನ್ ನಿತಿವಂತ್ ನೊಯೆಕ್ ಅನಿ ಸಾತ್ ಲೊಕಾಕ್ನಿ ಹುರ್ವುನ್ ಘೆಟ್ಲ್ಯಾನ್, ಅನಿ ದೆವಸ್ಪಾನ್ ನಸಲ್ಲ್ಯಾ ಲೊಕಾಕ್ನಿ ಸಗ್ಳ್ಯಾ ಜಗಾತ್ ಪಾನಿ ಭರಿಸಾರ್ಕೆ ಕರುನ್ ನಾಶ್ ಕರ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 2:5
12 ತಿಳಿವುಗಳ ಹೋಲಿಕೆ  

ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಕೆ ಪಡೆದು ಭಕ್ತಿಯಲ್ಲಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧಮಾಡಿದನು. ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಗೆ ಅನುಸಾರವಾಗಿ ನಂಬಿಕೆಯಿಂದ ಬರುವ ನೀತಿಗೆ ಬಾಧ್ಯನಾದನು.


ಈ ಜಲದಿಂದ ಆ ಸಮಯದಲ್ಲಿ ಜಗತ್ತು ಪ್ರಳಯದಲ್ಲಿ ನಾಶವಾಯಿತು.


ಇದು ನೋಹನ ಮತ್ತು ಅವನ ವಂಶದವರ ಚರಿತ್ರೆ: ನೋಹನು ನೀತಿವಂತನೂ ತನ್ನ ಕಾಲದವರಲ್ಲಿ ನಿರ್ದೋಷಿಯೂ ಆಗಿದ್ದನು. ಅವನು ದೇವರೊಂದಿಗೆ ವಿಶ್ವಾಸದಿಂದ ನಡೆಯುತ್ತಿದ್ದನು.


ನಾನು ಆಕಾಶದ ಕೆಳಗಿರುವ ಜೀವಶ್ವಾಸವುಳ್ಳ ಸಕಲ ಪ್ರಾಣಿಗಳನ್ನು ನಾಶಮಾಡುವುದಕ್ಕೆ ಜಲಪ್ರಳಯವನ್ನು ಭೂಮಿಯ ಮೇಲೆ ಬರಮಾಡುತ್ತೇನೆ. ಆಗ ಭೂಮಿಯಲ್ಲಿರುವುದೆಲ್ಲವೂ ನಾಶವಾಗುವುದು.


ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ನಿಮ್ಮ ಪೂರ್ವಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು. ನಾನು ನಿನ್ನ ಮಹಿಮೆಯನ್ನು ಜೀವವುಳ್ಳವರ ಲೋಕದಲ್ಲಿ ನೆಲೆಗೊಳಿಸದೆ ನಿರ್ಜನವಾಗುವಂತೆ ನಿನ್ನನ್ನು ಪಾತಾಳಕ್ಕಿಳಿದವರೊಂದಿಗೆ ವಾಸಿಸುವಂತೆ ಸೇರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು