Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 2:6 - ಕನ್ನಡ ಸಮಕಾಲಿಕ ಅನುವಾದ

6 ದೇವರು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನು ಸೊದೋಮ್ ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರಿಗೆ ಬರುವ ದುರ್ಗತಿಯನ್ನು ಸೂಚಿಸುವುದಕ್ಕಾಗಿ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸೊದೋಮ್ ಮತ್ತು ಗೊಮೋರ ಪಟ್ಟಣಗಳನ್ನು ಕೂಡ ದೇವರು ಬಿಡಲಿಲ್ಲ. ದುರ್ಜನರಿಗೆ ಬರಲಿರುವ ದುರ್ಗತಿ ಏನೆಂದು ಸೂಚಿಸುವುದಕ್ಕಾಗಿ ಆ ಪಟ್ಟಣಗಳನ್ನು ಸುಟ್ಟು ಭಸ್ಮಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನು ಸೊದೋಮ್‍ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಮುಂದೆ ಭಕ್ತಿಹೀನರಾಗಿ ಬದುಕುವವರ ಗತಿ ಇಂಥದೆಂದು ಸೂಚಿಸುವದಕ್ಕಾಗಿ ಅವುಗಳಿಗೆ ನಾಶನವನ್ನು ವಿಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರು ಸೊದೋಮ್, ಗೊಮೋರ ಎಂಬ ಕೆಟ್ಟ ಪಟ್ಟಣಗಳನ್ನು ದಂಡಿಸಿದನು. ಆತನು ಆ ಪಟ್ಟಣಗಳಲ್ಲಿ ಏನೂ ಉಳಿಯದಂತೆ, ಸುಟ್ಟು ಬೂದಿಮಾಡಿದನು. ತನಗೆ ವಿರುದ್ಧವಾಗಿರುವ ಜನರಿಗೆ ಏನಾಗುತ್ತದೆ ಎಂಬುದಕ್ಕೆ ಆತನು ಆ ಪಟ್ಟಣಗಳನ್ನು ನಿದರ್ಶನಗಳನ್ನಾಗಿ ಇಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಸೊದೊಮ್ ಅನಿ ಗೊಮೊರ್ ಹ್ಯಾ ಶಾರಾಕ್ನಿ ತೆನಿ ಶಿಕ್ಷಾ ದಿಲ್ಲ್ಯಾನ್ ಅನಿ ಜಾಳ್ವುನ್ ರಕ್ಕಾ ಕರುನ್ ಟಾಕ್ಲ್ಯಾನ್ ದೆವ್ ಅನಿ ದೆವಸ್ಪಾನ್ ನಸ್ತಾನಾ ಚಲ್ತಲ್ಯಾಕ್ನಿ ಹೆ ಎಕ್ ಉದಾರನ್ ಕರುನ್ ಥವ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 2:6
20 ತಿಳಿವುಗಳ ಹೋಲಿಕೆ  

ಸೊದೋಮ ಗೊಮೋರದವರೂ ಹಾಗೆಯೇ ಅವುಗಳ ಸುತ್ತಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಅನೈತಿಕತೆಗೆ ಒಪ್ಪಿಸಿಕೊಟ್ಟರು. ಅವರು ಸ್ವಭಾವಕ್ಕೆ ವಿರುದ್ಧ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲಾಗಿದ್ದಾರೆ.


ಯೆಹೋವ ದೇವರು ತಮ್ಮ ದೈವಿಕ ಕೋಪದಲ್ಲಿ ಕೆಡವಿ ಹಾಕಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಂತೆ ಆ ದೇಶವೆಲ್ಲಾ ಗಂಧಕವೂ, ಉಪ್ಪೂ ಉರಿಯುತ್ತಾ, ವ್ಯವಸಾಯವಾದರೂ ಹುಲ್ಲಾದರೂ ಬೆಳೆಯದೆ ಇರುವುದು.


ಭೂಮಿಯು ತನ್ನ ಬಾಯಿಯನ್ನು ತೆರೆದು, ಅವರನ್ನು ಕೋರಹನೊಂದಿಗೆ ನುಂಗಿಬಿಟ್ಟಿತು. ಹಾಗೆಯೇ ಆ ಗುಂಪಿನವರಲ್ಲಿ ಬೆಂಕಿಯು ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು. ಹೀಗೆ ಇಸ್ರಾಯೇಲರಿಗೆ ಎಚ್ಚರಿಕೆ ಉಂಟಾಗುವಂತೆ ಮಾಡಿತು. ಅವರು ದೃಷ್ಟಾಂತವಾದರು.


ಆ ಮನುಷ್ಯರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನಗಳಾಗಿವೆ, ಯುಗಾಂತ್ಯಕ್ಕೆ ಬಂದಿರುವ ನಮಗೆ ಎಚ್ಚರಿಕೆಯ ಮಾತುಗಳಾಗಿವೆ.


ಆದ್ದರಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ನನ್ನ ಜೀವದಾಣೆ,” “ನಿಶ್ಚಯವಾಗಿ ಮೋವಾಬು ಸೊದೋಮಿನ ಅಮ್ಮೋನ್ಯರು ಗೊಮೋರದ ಹಾಗೆ ಆಗುವುದು. ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಳಿಗಳುಳ್ಳಂಥ ನಿತ್ಯವಾಗಿ ಹಾಳಾದ ಸ್ಥಳವಾಗುವರು. ನನ್ನ ಜನರಲ್ಲಿ ಉಳಿದವರು ಅವರನ್ನು ಸುಲಿದುಕೊಳ್ಳುವರು. ನನ್ನ ಜನರಲ್ಲಿ ಮಿಕ್ಕಾದವರು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವರು.”


ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ ಅವುಗಳ ಸುತ್ತಣ ಪಟ್ಟಣಗಳಲ್ಲಿಯೂ ಹೇಗೋ ಹಾಗೆಯೇ, ಎದೋಮಿನಲ್ಲಿಯೂ ಯಾರೂ ವಾಸಮಾಡುವುದಿಲ್ಲ; ಅದರಲ್ಲಿ ಯಾವ ನರಪ್ರಾಣಿಯೂ ತಂಗುವುದಿಲ್ಲ” ಎಂದು ಯೆಹೋವ ದೇವರು ಅನ್ನುತ್ತಾರೆ.


ರಾಜ್ಯಗಳ ಘನತೆಯೂ, ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬಿಲೋನನ್ನು ದೇವರು ಸೊದೋಮ್ ಗೊಮೋರಗಳನ್ನು ಕೆಡವಿಬಿಟ್ಟಂತೆ ಕೆಡವಿಬಿಡುವನು.


“ಸೊದೋಮನ್ನೂ, ಗೊಮೋರವನ್ನೂ ಕೆಡವಿದ ಹಾಗೆ, ನಾನು ನಿಮ್ಮಲ್ಲಿ ಕೆಲವರನ್ನು ಕೆಡವಿ ಹಾಕಿದ್ದೇನೆ. ಬೆಂಕಿ ಉರಿಯೊಳಗಿಂದ ತೆಗೆದ ಕೊಳ್ಳಿಯ ಹಾಗೆ ಇದ್ದೀರಿ. ಆದರೂ ನೀವೂ ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


“ಎಫ್ರಾಯೀಮೇ, ನಿನ್ನನ್ನು ಹೇಗೆ ಬಿಟ್ಟುಬಿಡಲಿ? ಇಸ್ರಾಯೇಲೇ, ನಿನ್ನನ್ನು ಹೇಗೆ ಕೈಬಿಡಲಿ? ಅದ್ಮದ ಹಾಗೆ ನಿನ್ನನ್ನು ದುರ್ಗತಿಗೆ ಹೇಗೆ ಒಪ್ಪಿಸಲಿ? ಚೆಬೋಯಿಮನಂತೆ ನಿನ್ನನ್ನು ಹೇಗೆ ನಾಶಮಾಡಲಿ? ನನ್ನ ಹೃದಯವು ನನ್ನಲ್ಲಿ ಮಾರ್ಪಟ್ಟಿದೆ. ನನ್ನಲ್ಲಿ ಕರುಣೆ ಉಕ್ಕಿ ಬಂದಿದೆ.


ಅವನು ಸೊದೋಮ್ ಗೊಮೋರಗಳ ಕಡೆಗೂ ಮೈದಾನದ ಎಲ್ಲಾ ಪ್ರದೇಶಗಳ ಕಡೆಗೂ ನೋಡಿದನು. ಆ ಪ್ರದೇಶದಿಂದ ಹೊಗೆಯು ಕುಲುಮೆಯ ಹೊಗೆಯಂತೆ ಏರುತ್ತಿತ್ತು.


ಎಲ್ಲರಿಗೆ ನ್ಯಾಯತೀರಿಸುವುದಕ್ಕೆ ಬರುವರು. ಮಾತ್ರವಲ್ಲದೆ ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತಮಗೆ ವಿರೋಧವಾಗಿ ಆಡಿದ ಎಲ್ಲಾ ದೂಷಣೆಗಳ ವಿಷಯವಾಗಿ ಅವರನ್ನು ಖಂಡಿಸಲು ಬರುವರು,” ಎಂಬುದಾಗಿ ಪ್ರವಾದಿಸಿದನು.


ತಮ್ಮ ಪ್ರಾಣಕ್ಕೆ ವಿರೋಧವಾಗಿ ಪಾಪಮಾಡಿದ ಮನುಷ್ಯರ ಧೂಪದ ಪಾತ್ರೆಗಳನ್ನು ಬಲಿಪೀಠವನ್ನು ಮುಚ್ಚತಕ್ಕ ಅಗಲವಾದ ತಗಡುಗಳನ್ನಾಗಿ ಮಾಡಬೇಕು. ಏಕೆಂದರೆ ಅವುಗಳನ್ನು ಯೆಹೋವ ದೇವರ ಸಮ್ಮುಖದಲ್ಲಿ ಅರ್ಪಿಸಿದ ಕಾರಣ ಅವು ಪರಿಶುದ್ಧವಾದವುಗಳು. ಇಸ್ರಾಯೇಲರಿಗೆ ಅವು ಗುರುತುಗಳಾಗಿರಬೇಕು,” ಎಂದರು.


ಸೇನಾಧೀಶ್ವರ ಯೆಹೋವ ದೇವರು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ನಾವು ಸೊದೋಮಿನಂತೆ ಆಗುತ್ತಿದ್ದೆವು, ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.


ನ್ಯಾಯತೀರ್ಪಿನ ದಿನದಲ್ಲಿ ಸೊದೋಮ್ ಮತ್ತು ಗೊಮೋರ ಪಟ್ಟಣಗಳ ಗತಿಯು ಆ ಪಟ್ಟಣಕ್ಕಿಂತ ಹೆಚ್ಚು ತಾಳುವಂಥದ್ದಾಗಿರುವುದು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.


ಕಪೆರ್ನೌಮೇ, ನೀನು ಪರಲೋಕಕ್ಕೆ ಹೋಗುವೆ ಎಂದು ನೆನೆಸುತ್ತೀಯೋ? ಇಲ್ಲ, ನೀನು ಪಾತಾಳಕ್ಕೆ ಇಳಿಯುವೆ. ಏಕೆಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ, ಅದು ಇಂದಿನವರೆಗೂ ಉಳಿಯುತ್ತಿತ್ತು.


ಯೆಶಾಯನು ಈ ಹಿಂದೆ, “ಸೇನಾಧೀಶ್ವರರಾದ ದೇವರು ನಮಗೆ ಸಂತತಿಯನ್ನು ಉಳಿಸದೆ ಹೋಗಿದ್ದರೆ, ನಾವು ಸೊದೋಮಿನಂತೆ ಆಗುತ್ತಿದ್ದೆವು, ಗೊಮೋರದ ಹಾಗೆ ಇರುತ್ತಿದ್ದೆವು.” ಎಂದು ಹೇಳಿದ್ದಾನೆ.


ಆದ್ದರಿಂದ ಈ ವಿಶ್ರಾಂತಿಯನ್ನು ಪಡೆಯಲು ನಾವು ಪ್ರಯತ್ನಿಸೋಣ. ನಮ್ಮಲ್ಲಿ ಯಾರೂ ಆ ಜನರ ಅವಿಧೇಯತೆಯನ್ನು ಅನುಸರಿಸಿ, ನಾಶರಾಗದೇ ಇರೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು