2 ಪೇತ್ರನು 3:16 - ಕನ್ನಡ ಸಮಕಾಲಿಕ ಅನುವಾದ16 ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ವಿಷಯಗಳು ತಿಳಿಯುವುದಕ್ಕೆ ಕಷ್ಟವಾಗಿವೆ. ಪವಿತ್ರ ವೇದದ ಮಿಕ್ಕಾದ ಭಾಗಗಳಿಗೆ ಸಹ ತಪ್ಪಾದ ಅರ್ಥಮಾಡಿಕೊಂಡ ಹಾಗೆಯೇ ವಿದ್ಯಾಹೀನರೂ ಚಪಲಚಿತ್ತರೂ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತಮಗೆ ನಾಶವನ್ನುಂಟುಮಾಡಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ಸಂಗತಿಗಳು ನಿಮಗೆ ಅರ್ಥಮಾಡಿಕೊಳ್ಳುವುದಕ್ಕೆ ಕಠಿಣವಾಗಿವೆ. ಅಜ್ಞಾನಿಗಳೂ, ಚಂಚಲಚಿತ್ತರೂ ಆದವರು ಉಳಿದ ಗ್ರಂಥಗಳ ಹಾಗೆ ಇದನ್ನೂ ತಪ್ಪಾಗಿ ಅರ್ಥ ಕೊಟ್ಟು ತಮಗೆ ನಾಶವನ್ನುಂಟು ಮಾಡಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆತನು ತನ್ನ ಪತ್ರಗಳಲ್ಲಿ ಈ ವಿಷಯವನ್ನು ಕುರಿತು ಪ್ರಸ್ತಾಪಿಸುವಾಗಲೆಲ್ಲಾ ಹೀಗೆಯೇ ಬೋಧಿಸಿದ್ದಾನೆ. ಅರ್ಥಮಾಡಿಕೊಳ್ಳಲು ಕಠಿಣವಾದ ಕೆಲವು ವಿಷಯಗಳು ಆತನ ಪತ್ರಗಳಲ್ಲಿ ಇವೆ. ಬುದ್ಧಿಹೀನರು ಹಾಗು ಚಂಚಲಚಿತ್ತರು ಪವಿತ್ರಗ್ರಂಥದ ಇತರ ಭಾಗಗಳಿಗೆ ಅಪಾರ್ಥಕಟ್ಟುವಂತೆ ಇವುಗಳಿಗೂ ಕಟ್ಟುತ್ತಾರೆ. ಹೀಗೆ, ತಮ್ಮ ವಿನಾಶವನ್ನು ತಾವೇ ತಂದುಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಬರೆಯುವಾಗ ಹೀಗೆ ಬೋಧಿಸಿದ್ದಾನೆ. ಆ ಪತ್ರಿಕೆಗಳಲ್ಲಿರುವ ಕೆಲವು ಮಾತುಗಳು ತಿಳಿಯುವದಕ್ಕೆ ಕಷ್ಟವಾಗಿವೆ. ವಿದ್ಯಾಹೀನರೂ ಚಪಲಚಿತ್ತರೂ ಹೇಗೆ ನಮಗಿರುವ ವಿುಕ್ಕಾದ ಗ್ರಂಥಗಳಿಗೆ ತಪ್ಪಾದ ಅರ್ಥಮಾಡಿಕೊಂಡಿದ್ದಾರೋ ಹಾಗೆಯೇ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತಮಗೆ ನಾಶವನ್ನುಂಟುಮಾಡಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಪೌಲನು ತನ್ನ ಎಲ್ಲ ಪತ್ರಗಳಲ್ಲಿಯೂ ಇವುಗಳನ್ನು ಕುರಿತು ಇದೇ ರೀತಿ ಬರೆಯುತ್ತಾನೆ. ಕೆಲವು ಸಂದರ್ಭಗಳಲ್ಲಿ ಪೌಲನ ಪತ್ರಗಳಲ್ಲಿರುವವುಗಳನ್ನು ಅರ್ಥಮಾಡಿಕೊಳ್ಳುವುದು ಕಷ್ಟವಾಗುತ್ತದೆ. ಕೆಲವರು ಅವುಗಳನ್ನು ಬೇಕೆಂದೇ ತಪ್ಪಾಗಿ ಅರ್ಥೈಸುತ್ತಾರೆ. ಅವರು ಮೂಢರಾಗಿದ್ದಾರೆ ಮತ್ತು ನಂಬಿಕೆಯಲ್ಲಿ ಬಲಹೀನರಾಗಿದ್ದಾರೆ. ಅವರು ಪವಿತ್ರ ಗ್ರಂಥದ ಇತರ ಭಾಗಗಳನ್ನೂ ತಪ್ಪಾಗಿ ವಿವರಿಸುತ್ತಾರೆ. ಹೀಗೆ ಅವರು ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಅಪ್ನಾಚ್ಯಾ ಸಗ್ಳ್ಯಾ ಚಿಟಿಯಾತ್ನಿ ಹ್ಯಾ ಸಂಗ್ತಿಯಾಚ್ಯಾ ವಿಶಯಾತ್ ಬೊಲ್ತಾನಾ ತೆನಿ ಹೆಚ್ ಶಿಕ್ವಲ್ಲೆ ಹಾಯ್, ಸಮ್ಜುನ್ ಘೆವ್ಕ್ ಕಸ್ಟ್ ಹೊತಲ್ಯಾ ಉಲ್ಯ್ಲಾ ಸಂಗ್ತಿಯಾ ಹೆಚ್ಯಾ ಚಿಟಿಯಾತ್ನಿ ಹಾತ್. ಬುದ್ದ್ ನಸಲ್ಲಿ ಅನಿ ಚಂಚಲ್ ಮಾನಾಚಿ ಲೊಕಾ ಹೆಚೊ ಅರ್ಥ್ ದುಸ್ರೊಚ್ ಕಾಡ್ತಾತ್ ಅನಿ ಅಪ್ನಾಚ್ಯಾ ನಾಶಾಕ್ ಕಾರನ್ ಹೊತಾತ್. ಅಧ್ಯಾಯವನ್ನು ನೋಡಿ |