Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 3:18 - ಕನ್ನಡ ಸಮಕಾಲಿಕ ಅನುವಾದ

18 ನೀವು ಕೃಪೆಯಲ್ಲಿ ಬೆಳೆಯಿರಿ ಮತ್ತು ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಅವರಿಗೆ ಈಗಲೂ ಸರ್ವಕಾಲವೂ ಮಹಿಮೆ ಇರಲಿ! ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಮ್ಮ ಪ್ರಭು ಮತ್ತು ಉದ್ಧಾರಕರಾದ ಯೇಸುಕ್ರಿಸ್ತರ ಅನುಗ್ರಹದಲ್ಲೂ ಅವರನ್ನು ಕುರಿತ ಜ್ಞಾನದಲ್ಲೂ ನೀವು ಅಭಿವೃದ್ಧಿಹೊಂದಿರಿ. ಅವರಿಗೆ ಈಗಲೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ! ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನೀವು ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಅಭಿವೃದ್ಧಿಯನ್ನು ಹೊಂದುತ್ತಾ ಇರ್ರಿ. ಆತನಿಗೆ ಈಗಲೂ ಸದಾಕಾಲವೂ ಸ್ತೋತ್ರ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಿಮ್ಮ ಪ್ರಭುವಾದ ಮತ್ತು ರಕ್ಷಕನಾದ ಯೇಸು ಕ್ರಿಸ್ತನ ಕೃಪೆಯಲ್ಲಿಯೂ ತಿಳುವಳಿಕೆಯಲ್ಲಿಯೂ ಬೆಳೆಯುತ್ತಲೇ ಇರಿ. ಆತನಿಗೆ ಈಗಲೂ ಎಂದೆಂದಿಗೂ ಮಹಿಮೆಯಾಗಲಿ! ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಖರೆ ಅಮ್ಚೊ ಧನಿಯಾಚಿ ಅನಿ ಸುಟ್ಕಾ ದಿನಾರ್‍ಯಾ ಜೆಜು ಕ್ರಿಸ್ತಾಚಿ ಕುರ್ಪಾ ಅನಿ ಶಾಂತ್ಪಾನ್ ತುಮ್ಚ್ಯಾ ಮದ್ದಿ ವಾಡುಂದಿ ಅತ್ತಾ ಅನಿ ಕನ್ನಾಬಿ ತೆಕಾ ಮಹಿಮಾ ಹೊಂವ್ದಿ ! ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 3:18
26 ತಿಳಿವುಗಳ ಹೋಲಿಕೆ  

ಕರ್ತ ಯೇಸುವಿಗೆ ಯೋಗ್ಯರಾಗಿ ಜೀವಿಸಿ ಎಲ್ಲಾ ವಿಧದಲ್ಲಿ ಅವರನ್ನೇ ಮೆಚ್ಚಿಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯದಲ್ಲಿ ಫಲಕೊಡುತ್ತಾ ದೇವರ ತಿಳುವಳಿಕೆಯಲ್ಲಿ ವೃದ್ಧಿಯಾಗುತ್ತಿರಬೇಕೆಂತಲೂ


ಆದರೆ ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ, ನಾವು ಎಲ್ಲಾ ವಿಷಯಗಳಲ್ಲಿಯೂ ಕ್ರಿಸ್ತನ ದೇಹದ ಪರಿಪಕ್ವತೆಯೆಡೆಗೆ ಅವರ ಶಿರಸತ್ವದಲ್ಲಿ ಬೆಳೆಯೋಣ.


ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ರಕ್ಷಣೆಯಲ್ಲಿ ಬೆಳೆಯುವ ಹಾಗೆ ಆತ್ಮಿಕವಾದ ಶುದ್ಧಹಾಲನ್ನು ಬಯಸಿರಿ.


ಇದಲ್ಲದೆ, ನನ್ನ ಕರ್ತದೇವರು ಆಗಿರುವ ಕ್ರಿಸ್ತ ಯೇಸುವನ್ನು ಅರಿತುಕೊಳ್ಳುವುದೇ ಅತಿ ಶ್ರೇಷ್ಠವಾದುದ್ದೆಂದು, ನಾನು ಎಲ್ಲವನ್ನೂ ನಷ್ಟವೆಂದು ಎಣಿಸುತ್ತೇನೆ. ಕ್ರಿಸ್ತನನ್ನೇ ಲಾಭವನ್ನಾಗಿಸಿಕೊಳ್ಳಲು ನಾನು ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ.


ನಮ್ಮ ಕರ್ತ ಯೇಸುಕ್ರಿಸ್ತರ ದೇವರೂ ಮಹಿಮೆಯ ತಂದೆಯಾದವರನ್ನು ನೀವು ಪೂರ್ಣವಾಗಿ ತಿಳಿದುಕೊಳ್ಳುವಂತೆ ಜ್ಞಾನದ ಮತ್ತು ಪ್ರಕಟಣೆಯ ಆತ್ಮವನ್ನು ನಿಮಗೆ ಅನುಗ್ರಹಿಸಲಿ ಎಂದು ನಿಮಗಾಗಿ ಯಾವಾಗಲೂ ಪ್ರಾರ್ಥನೆ ಮಾಡುವವನಾಗಿದ್ದೇನೆ.


ಸೃಷ್ಟಿಕರ್ತನ ಸ್ವರೂಪವನ್ನು, ತಿಳುವಳಿಕೆಯಲ್ಲಿ ನವೀಕರಣ ಹೊಂದುತ್ತಿರುವ ಆ ನೂತನ ಸ್ವಭಾವವನ್ನೇ ಧರಿಸಿಕೊಂಡವರಾಗಿದ್ದೀರಲ್ಲಾ.


ದೇವರು ತಮ್ಮ ಸ್ವಂತ ಮಹಿಮೆಗಾಗಿಯೂ ಸದ್ಗುಣಕ್ಕಾಗಿಯೂ ನಮ್ಮನ್ನು ಕರೆದಿದ್ದಾರೆ. ಏಕೆಂದರೆ, ದೇವರ ತಿಳುವಳಿಕೆಯ ಮೂಲಕವಾಗಿ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ದೇವರ ಶಕ್ತಿಯು ನಮಗೆ ಕೊಡಲಾಗಿದೆ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದು ಆಜ್ಞಾಪಿಸಿದ ದೇವರು ತಾವೇ, ತಮ್ಮ ಪ್ರಕಾಶವನ್ನು ನಮ್ಮ ಹೃದಯದ ಮೇಲೆ ಬೆಳಗಿಸಿದ್ದಾರೆ. ಹೀಗೆ ಕ್ರಿಸ್ತ ಯೇಸುವಿನ ಮುಖದಲ್ಲಿ ಪ್ರತಿಬಿಂಬಿಸುತ್ತಿರುವ ದೇವರ ಮಹಿಮೆಯ ತಿಳುವಳಿಕೆಯನ್ನು ನಮ್ಮಲ್ಲಿ ಉದಯಿಸುವಂತಾಗಿದೆ.


ನನ್ನನ್ನು ಪ್ರತಿಯೊಂದು ದುಷ್ಟದಾಳಿಯಿಂದ ಕರ್ತ ಯೇಸು ತಪ್ಪಿಸಿ, ತಮ್ಮ ಪರಲೋಕ ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ತರುವರು. ಯುಗಯುಗಾಂತರಗಳಲ್ಲಿಯೂ ಅವರಿಗೆ ಮಹಿಮೆ. ಆಮೆನ್.


ಏಕೈಕ ಸತ್ಯ ದೇವರಾಗಿರುವ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವ.


ನೀತಿವಂತರು ಖರ್ಜೂರ ಮರದ ಹಾಗೆ ವೃದ್ಧಿಯಾಗುವರು. ಅವರು ಲೆಬನೋನಿನಲ್ಲಿರುವ ದೇವದಾರಿನ ಹಾಗೆ ಬೆಳೆಯುವರು.


ಪ್ರಿಯರೇ, ನಾವು ಯಾವಾಗಲೂ ನಿಮಗಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ. ಹಾಗೆ ಮಾಡುವುದು ಯೋಗ್ಯ. ಏಕೆಂದರೆ ನಿಮ್ಮ ವಿಶ್ವಾಸವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗುತ್ತಾ ಇದೆ ಮತ್ತು ಪರಸ್ಪರ ನಿಮ್ಮೆಲ್ಲರಲ್ಲಿ ಪ್ರೀತಿಯೂ ಹೆಚ್ಚುತ್ತಿದೆ.


ಏಕೆಂದರೆ ಸಮಸ್ತವೂ ದೇವರಿಂದ ಉಂಟಾಗಿ ದೇವರ ಮೂಲಕವಾಗಿಯೂ ದೇವರಿಗಾಗಿಯೂ ಇರುತ್ತವೆ. ಮಹಿಮೆಯು ಸದಾಕಾಲವೂ ದೇವರಿಗೇ ಸಲ್ಲುವುದಾಗಿರಲಿ. ಆಮೆನ್.


ನಮ್ಮನ್ನು ಒಂದು ರಾಜ್ಯವನ್ನಾಗಿಯೂ ತಮ್ಮ ತಂದೆಯಾದ ದೇವರಿಗೆ ಸೇವೆ ಸಲ್ಲಿಸುವ ಯಾಜಕರನ್ನಾಗಿಯೂ ಮಾಡಿರುವ ಕ್ರಿಸ್ತ ಯೇಸುವಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು, ಬಲವು ಇರಲಿ ಆಮೆನ್.


ನಮ್ಮ ರಕ್ಷಕರಾದ ಒಬ್ಬರೇ ದೇವರಿಗೆ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮುಖಾಂತರ ಮಹಿಮೆ, ಮಹತ್ವ, ಬಲವು, ಅಧಿಕಾರಗಳು ಎಂದೂ ಇದ್ದಂತೆ ಈಗಲೂ ಯಾವಾಗಲೂ ಇರಲಿ. ಆಮೆನ್.


ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವು ತಮ್ಮ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಭಾಗ್ಯವನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವರು.


ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾದ ಜ್ಞಾನಹೊಂದಿ ಲೋಕದ ಮಾಲಿನ್ಯಗಳನ್ನು ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.


ಈ ಗುಣಗಳು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ, ನಮ್ಮ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅರಿತುಕೊಳ್ಳುವುದರಲ್ಲಿ ನೀವು ನಿಷ್ಪ್ರಯೋಜಕರೂ ನಿಷ್ಫಲರೂ ಆಗದಂತೆ ಮಾಡುತ್ತವೆ.


ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.


ನಮ್ಮನ್ನು ಶೋಧನೆಗೆ ಸೇರಿಸದೆ, ಕೇಡಿನಿಂದ ತಪ್ಪಿಸಿರಿ. ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ ಸದಾಕಾಲ ನಿಮ್ಮದೇ. ಆಮೆನ್.’


ಆದರೆ ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೆ, ನೀತಿ ಸೂರ್ಯನು ತಮ್ಮ ಕಿರಣಗಳಿಂದ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು. ನೀವು ಹೊರಟು ಕೊಟ್ಟಿಗೆಯಿಂದ ಹೊರಬಂದ ಕರುಗಳ ಹಾಗೆ ಕುಣಿದಾಡುವಿರಿ.


ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. ಅವನು ತಾವರೆಯ ಹಾಗೆ ಬೆಳೆಯುವನು. ತನ್ನ ಬೇರುಗಳನ್ನು ಲೆಬನೋನಿನ ಹಾಗೆ ಆಳಕ್ಕೆ ಹರಡುವನು.


ಎಲ್ಲರೂ ತಂದೆಯನ್ನು ಸನ್ಮಾನಿಸುವಂತೆಯೇ ಪುತ್ರನನ್ನೂ ಸನ್ಮಾನಿಸಬೇಕು. ಪುತ್ರನನ್ನು ಸನ್ಮಾನಿಸದವನು ಆತನನ್ನು ಕಳುಹಿಸಿದ ತಂದೆಯನ್ನೂ ಸನ್ಮಾನಿಸುವುದಿಲ್ಲ.


ದೇವರ ವಿಷಯವಾಗಿಯೂ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ವಿಷಯವಾಗಿಯೂ ಇರುವ ತಿಳುವಳಿಕೆಯ ಮೂಲಕ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು