Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಯೋಹಾನನು 1:12 - ಕನ್ನಡ ಸಮಕಾಲಿಕ ಅನುವಾದ

12 ನಿಮಗೆ ಬರೆಯುವುದಕ್ಕೆ ನನಗೆ ಅನೇಕ ವಿಷಯಗಳಿದ್ದರೂ ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆಯುವುದಕ್ಕೆ ನನಗೆ ಮನಸ್ಸಿಲ್ಲ. ಆದರೆ ನಾನು ನಿಮ್ಮ ಬಳಿಗೆ ಬಂದು ನಿಮ್ಮ ಸಂಗಡ ಮುಖಾಮುಖಿಯಾಗಿ ಮಾತನಾಡುವೆನೆಂದು ನಿರೀಕ್ಷಿಸುತ್ತೇನೆ. ಆಗ ನಮ್ಮ ಸಂತೋಷವು ಪರಿಪೂರ್ಣವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿಮಗೆ ಬರೆಯುವುದಕ್ಕೆ ನನಗೆ ಅನೇಕ ವಿಷಯಗಳಿದ್ದರೂ, ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆದು ತಿಳಿಸುವುದಕ್ಕೆ ನನಗೆ ಇಷ್ಟವಿಲ್ಲ. ಆದರೆ, ನಾನು ನಿಮ್ಮ ಬಳಿಗೆ ಬಂದು, ನಿಮ್ಮ ಸಂಗಡ ಮುಖಾಮುಖಿಯಾಗಿ ಮಾತನಾಡುವೆನೆಂದು ನಿರೀಕ್ಷಿಸುತ್ತೇನೆ. ಆಗ, ನಿಮ್ಮ ಸಂತೋಷವು ಪರಿಪೂರ್ಣವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಾನು ನಿಮಗೆ ತಿಳಿಸಬೇಕಾದ ವಿಷಯಗಳು ಬಹಳಷ್ಟಿವೆ. ಆದರೆ ಅವುಗಳನ್ನು ಕಾಗದಪತ್ರಗಳ ಮೂಲಕ ತಿಳಿಸಲು ನನಗೆ ಇಷ್ಟವಿಲ್ಲ. ನಾನೇ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ಮಾತನಾಡುವ ನಿರೀಕ್ಷೆ ಇದೆ. ಹೀಗೆ ಮುಖಾಮುಖಿಯಾಗಿ ಮಾತನಾಡುವುದರಿಂದ ಪೂರ್ಣಸಂತೋಷವೂ ಆಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿಮಗೆ ಬರೆಯುವದಕ್ಕೆ ನನಗೆ ಅನೇಕ ಸಂಗತಿಗಳಿದ್ದರೂ ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆದು ತಿಳಿಸುವದಕ್ಕೆ ನನಗೆ ಮನಸ್ಸಿಲ್ಲ. ನಾನು ನಿಮ್ಮ ಬಳಿಗೆ ಬಂದು ನಿಮ್ಮ ಸಂಗಡ ಮುಖಾಮುಖಿಯಾಗಿ ಮಾತಾಡುವೆನೆಂದು ನಿರೀಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾನು ನಿಮಗೆ ಹೇಳಬೇಕಾದುದು ಬಹಳಷ್ಟಿದೆ. ಆದರೆ ನಾನು ಕಾಗದವನ್ನೂ ಇಂಕನ್ನೂ ಬಳಸಲಿಚ್ಛಿಸುವುದಿಲ್ಲ. ಅದರ ಬದಲು, ನಾನೇ ನಿಮ್ಮ ಬಳಿಗೆ ಬರಬೇಕೆಂದಿದ್ದೇನೆ. ಆಗ ನಾವು ಒಟ್ಟಾಗಿ ಮಾತನಾಡಬಹುದು. ಇದು ನಮಗೆ ಬಹಳ ಸಂತಸವನ್ನು ಉಂಟುಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತುಮ್ಕಾ ಅನಿಬಿ ಲೈ ವಿಶಯಾ ಸಾಂಗ್ತಲೊ ಮನ್ ಹೊತ್ತೊ, ಖರೆ, ಹೆ ಶಾಯಿನ್ ಕಾಗ್ದಾ ವರ್ತಿ ಲಿವ್ನ್ ಸಾಂಗ್ತಲೆ ನಕ್ಕೊ ಮನುನ್ ಮಿಯಾ ಚಿಂತ್ಲಾ, ಮಿಯಾ ಖುದ್ದ್ ತುಮ್ಚ್ಯಾಕ್ಡೆ ಯೆವ್ನ್ ತುಮ್ಕಾ ಭೆಟುನ್ ತುಮ್ಚ್ಯಾಕ್ಡೆ ಬೊಲ್ತಾ ಮನ್ತಲ್ಯಾ ಬರೊಸ್ಯಾನ್ ಮಿಯಾ ಹಾವ್, ಹೆಚ್ಯಾ ವೈನಾ ಅಮ್ಚಿ ಕುಶಿ ಪುರಾ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಯೋಹಾನನು 1:12
15 ತಿಳಿವುಗಳ ಹೋಲಿಕೆ  

“ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಇವೆ. ಆದರೆ ನೀವು ಈಗ ಅವುಗಳನ್ನು ತಾಳಿಕೊಳ್ಳಲಾರಿರಿ.


ನನ್ನ ಆನಂದವು ನಿಮ್ಮಲ್ಲಿ ಇರುವಂತೆಯೂ ಆ ನಿಮ್ಮ ಆನಂದವು ಪರಿಪೂರ್ಣವಾಗುವಂತೆಯೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.


ನಾನು ಗೂಢವಾಗಿ ಅಲ್ಲ ಸ್ಪಷ್ಟವಾಗಿ, ಮುಖಾಮುಖಿಯಾಗಿ ಅಂದರೆ, ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ. ಅವನು ಯೆಹೋವ ದೇವರ ರೂಪವನ್ನು ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?”


ನಮ್ಮ ಸಂತೋಷವು ಪರಿಪೂರ್ಣವಾಗಬೇಕೆಂದು ನಾವು ಇವುಗಳನ್ನು ಬರೆಯುತ್ತಿದ್ದೇವೆ.


ನೀವು ಪ್ರಾರ್ಥನೆ ಮಾಡುವಂತೆ, ನಾನು ನಿಮ್ಮನ್ನು ಬಹು ವಿಶೇಷವಾಗಿ ಬೇಡಿಕೊಳ್ಳುತ್ತೇನೆ. ಇದರ ಮೂಲಕ ನಾನು ಅತಿ ಶೀಘ್ರವಾಗಿ ನಿಮ್ಮ ಬಳಿಗೆ ಪುನಃ ಬರುವೆನು.


ನಾನು ಸ್ಪೇನ್ ದೇಶಕ್ಕೆ ಹೋಗುವಾಗ ನಿಮ್ಮನ್ನು ಸಂದರ್ಶಿಸುವ ನಿರೀಕ್ಷೆಯಲ್ಲಿದ್ದೇನೆ. ಸ್ವಲ್ಪಕಾಲ ನಿಮ್ಮ ಅನ್ಯೋನ್ಯತೆಯ ಆನಂದವನ್ನು ಪಡೆದ ಬಳಿಕ ಅಲ್ಲಿಗೆ ಹೋಗುವ ನನ್ನ ಪ್ರಯಾಣದಲ್ಲಿ ನಿಮ್ಮ ಸಹಕಾರವನ್ನು ಬಯಸುತ್ತೇನೆ.


“ಈಗ ನಾನು ನಿಮ್ಮ ಬಳಿಗೆ ಬರುತ್ತೇನೆ. ನನ್ನ ಆನಂದವು ಅವರಲ್ಲಿ ಪರಿಪೂರ್ಣವಾಗುವಂತೆ ನಾನು ಲೋಕದಲ್ಲಿ ಇದ್ದು ಇವೆಲ್ಲವನ್ನು ಮಾತನಾಡುತ್ತೇನೆ.


ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಕೇಳಿಕೊಳ್ಳಲಿಲ್ಲ. ಕೇಳಿರಿ, ನೀವು ಪಡೆದುಕೊಳ್ಳುವಿರಿ. ಆಗ ನಿಮ್ಮ ಆನಂದವು ಪರಿಪೂರ್ಣವಾಗಿರುವುದು.


ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬುದು ನಿಮಗೆ ತಿಳಿದಿರಲಿ. ಅವನು ಬೇಗ ಬಂದರೆ ನಾನು ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು.


ಇದಲ್ಲದೆ: ನಿಮ್ಮ ಪ್ರಾರ್ಥನೆಯ ದೆಸೆಯಿಂದ ನಾನು ಪುನಃ ನಿಮ್ಮ ಬಳಿಗೆ ಬರುತ್ತೇನೆಂದು ನನಗೆ ನಿರೀಕ್ಷೆ ಇರುವುದು. ಆದಕಾರಣ ನನಗಾಗಿ ಒಂದು ಅತಿಥಿ ಕೊಠಡಿಯನ್ನು ಸಿದ್ಧಮಾಡು.


ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು, ನಿನ್ನನ್ನು ನೋಡಿ ಆನಂದಭರಿತನಾಗಬೇಕೆಂದು ಬಹಳವಾಗಿ ಹಂಬಲಿಸುತ್ತೇನೆ.


ಮದುಮಗಳು ಮದುಮಗನಿಗೆ ಸೇರಿದವಳು. ಆದರೂ ಮದುಮಗನ ಸ್ನೇಹಿತನು ನಿಂತುಕೊಂಡು ಆತನ ಮಾತಿಗೆ ಕಿವಿಗೊಟ್ಟು, ಮದುಮಗನ ಸ್ವರ ಕೇಳಿ ಸಂತೋಷಪಡುತ್ತಾನೆ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು.


ಆದಕಾರಣ ನಾನು ಬಂದಾಗ ನಮ್ಮನ್ನು ದೂಷಿಸಿ ನಮ್ಮ ವಿಷಯದಲ್ಲಿ ಕೆಟ್ಟ ಕೆಟ್ಟ ಮಾತುಗಳನ್ನಾಡುವ ಅವನ ಕೃತ್ಯಗಳನ್ನು ಜ್ಞಾಪಕ ಮಾಡುವೆನು. ಅವನು ಇದರಲ್ಲಿ ತೃಪ್ತನಾಗದೆ, ಸಹೋದರರನ್ನು ತಾನೂ ಸೇರಿಸಿಕೊಳ್ಳದೆ, ಸೇರಿಸಿಕೊಳ್ಳಬೇಕೆಂದಿರುವವರಿಗೆ ಅಡ್ಡಿ ಮಾಡುತ್ತಾ, ಅವರನ್ನು ಸಭೆಯೊಳಗಿಂದ ಬಹಿಷ್ಕರಿಸುತ್ತಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು