Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಯೋಹಾನನು 1:2 - ಕನ್ನಡ ಸಮಕಾಲಿಕ ಅನುವಾದ

2 ಸತ್ಯದಲ್ಲಿ ಪ್ರೀತಿಸುವ ದೇವರಿಂದ ಆಯ್ಕೆಯಾದ ಅಮ್ಮನವರಿಗೂ ಆಕೆಯ ಮಕ್ಕಳಿಗೂ ಬರೆಯುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ಸದಾಕಾಲ ನಮ್ಮೊಂದಿಗಿರುವಂಥ ಸತ್ಯದ ನಿಮಿತ್ತ, ನಾನು ನಿಮ್ಮನ್ನು ಸತ್ಯವಾಗಿ ಪ್ರೀತಿಸುತ್ತೇನೆ. ನಾನು ಮಾತ್ರವಲ್ಲದೆ, ಸತ್ಯವನ್ನು ಪ್ರೀತಿಸುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಮ್ಮಲ್ಲಿ ನೆಲೆಗೊಂಡಿರುವ ಹಾಗೂ ನಮ್ಮಲ್ಲಿ ಶಾಶ್ವತವಾಗಿರುವ ಸತ್ಯದ ಪ್ರಯುಕ್ತ ನಾನು ಮತ್ತು ಸತ್ಯವನ್ನು ಅರಿತಿರುವ ಎಲ್ಲರು ನಿಮ್ಮಲ್ಲಿ ಪ್ರೀತಿಯನ್ನಿಟ್ಟಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಮ್ಮಲ್ಲಿ ನೆಲೆಗೊಂಡಿರುವ ಸತ್ಯದ ನಿಮಿತ್ತ ನಾವು ನಿಮ್ಮನ್ನು ಪ್ರೀತಿಸುತ್ತೇವೆ. ಈ ಸತ್ಯವು ನಮ್ಮಲ್ಲಿ ಸದಾಕಾಲ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಕಶ್ಯಾಕ್ ಮಟ್ಲ್ಯಾರ್ ಖರೆ ಅಮ್ಚ್ಯಾ ಮದ್ದಿ ರ್‍ಹಾತಾ, ಅನಿ ಕನ್ನಾಬಿ ಅಮ್ಚ್ಯಾ ವಾಂಗ್ಡಾಚ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಯೋಹಾನನು 1:2
11 ತಿಳಿವುಗಳ ಹೋಲಿಕೆ  

ಲೋಕವೂ ಲೋಕದ ಆಶೆಗಳೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಜೀವಿಸುವನು.


ಮಕ್ಕಳೇ, ನೀವು ತಂದೆಯನ್ನು ತಿಳಿದುಕೊಂಡಿರುವುದರಿಂದ ನಿಮಗೆ ಬರೆಯುತ್ತೇನೆ. ತಂದೆಗಳೇ, ಆದಿಯಿಂದ ಇರುವ ದೇವರನ್ನು ನೀವು ಬಲ್ಲವರಾಗಿರುವುದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಬಲ ಹೊಂದಿರುವುದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದಲೂ ನೀವು ಕೆಡುಕನನ್ನು ಜಯಿಸಿರುವುದರಿಂದಲೂ ನಿಮಗೆ ಬರೆದಿದ್ದೇನೆ.


ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.


ಆದ್ದರಿಂದ ನೀವು ಈ ಸಂಗತಿಗಳನ್ನು ತಿಳಿದವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮ್ಮ ನೆನಪಿಗೆ ತರಲು ನಾನು ಬಯಸುತ್ತೇನೆ.


ನಿನ್ನಲ್ಲಿರುವ ನಿಷ್ಕಪಟವಾದ ನಂಬಿಕೆಯು ನನ್ನ ನೆನಪಿನಲ್ಲಿದೆ. ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನಿಕೆಯಲ್ಲಿಯೂ ಮೊದಲು ಇದ್ದ ನಂಬಿಕೆಯು ಈಗ ನಿನ್ನಲ್ಲಿಯೂ ಇದೆಯೆಂದು ನಾನು ದೃಢವಾಗಿ ನಂಬಿದ್ದೇನೆ.


ಕ್ರಿಸ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಆ ವಾಕ್ಯದಿಂದಲೇ, ನೀವು ಸಕಲ ಜ್ಞಾನದಲ್ಲಿ ಕೃತಜ್ಞತೆಯೊಂದಿಗೆ ನಿಮ್ಮ ಹೃದಯಗಳಲ್ಲಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಕರ್ತ ಯೇಸುವನ್ನು ಕೊಂಡಾಡುತ್ತಾ ಒಬ್ಬರಿಗೊಬ್ಬರು ಉಪದೇಶಿಸುತ್ತಾ, ಬುದ್ಧಿ ಹೇಳುತ್ತಾ ಇರಿ.


ನಾವು ನಮ್ಮ ಬಗ್ಗೆಯೇ ಪ್ರಚಾರ ಮಾಡುವುದಿಲ್ಲ. ಆದರೆ ಕ್ರಿಸ್ತ ಯೇಸು ಕರ್ತ ದೇವರೆಂದೂ ನಾವು ಯೇಸುವಿಗಾಗಿ ನಿಮ್ಮ ಸೇವಕರಾಗಿದ್ದೇವೆ ಎಂದೂ ಪ್ರಚುರಪಡಿಸುತ್ತೇವೆ.


ನಾನು ಸುವಾರ್ತೆಯ ಆಶೀರ್ವಾದಗಳಲ್ಲಿ ಪಾಲುಗಾರನಾಗಬೇಕೆಂದು ಇದೆಲ್ಲವನ್ನು ಸುವಾರ್ತೆಗೋಸ್ಕರವೇ ಮಾಡುತ್ತೇನೆ.


ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಬಯಸುವ ಯಾವುದನ್ನಾದರೂ ಬೇಡಿಕೊಳ್ಳಿರಿ. ಅದು ನಿಮ್ಮದಾಗುವುದು.


ನಾನು ತಂದೆಯನ್ನು ಕೇಳಿಕೊಳ್ಳುವೆನು. ಆಗ ತಂದೆ ನಿಮಗೆ ಬೇರೊಬ್ಬ ಸಹಾಯಕರನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕೊಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು