Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಯೋಹಾನನು 1:3 - ಕನ್ನಡ ಸಮಕಾಲಿಕ ಅನುವಾದ

3 ತಂದೆಯಾದ ದೇವರಿಂದಲೂ ಆ ತಂದೆಯ ಪುತ್ರ ಆಗಿರುವ ಕರ್ತ ಕ್ರಿಸ್ತ ಯೇಸುವಿನಿಂದಲೂ ಕೃಪೆಯು, ಕರುಣೆಯು ಮತ್ತು ಶಾಂತಿಯು ಸತ್ಯಪೂರ್ವಕವಾಗಿ ಪ್ರೀತಿಪೂರ್ವಕವಾಗಿ ನಿಮ್ಮೊಂದಿಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ತಂದೆಯಾದ ದೇವರಿಂದಲೂ, ದೇವರ ಮಗನಾಗಿರುವ ಯೇಸು ಕ್ರಿಸ್ತನಿಂದಲೂ, ಕೃಪೆಯೂ, ಕರುಣೆಯೂ, ಶಾಂತಿಯೂ, ಸತ್ಯವೂ, ಪ್ರೀತಿಯೂ ಸದಾಕಾಲ ನಮ್ಮೊಂದಿಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಪಿತನಾದ ದೇವರಿಂದಲೂ ಅವರ ಪುತ್ರ ಯೇಸುಕ್ರಿಸ್ತರಿಂದಲೂ ಕೃಪೆ, ಕರುಣೆ, ಶಾಂತಿ, ಸಮಾಧಾನಗಳು ಸತ್ಯಪೂರ್ವಕವಾಗಿಯೂ ಪ್ರೀತಿಪೂರ್ವಕವಾಗಿಯೂ ನಮ್ಮಲ್ಲಿ ನೆಲೆಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ತಂದೆಯಾದ ದೇವರಿಂದಲೂ ಆ ತಂದೆಯ ಮಗನಾದ ಯೇಸು ಕ್ರಿಸ್ತನಿಂದಲೂ ಕೃಪೆಯೂ ಕರುಣೆಯೂ ಶಾಂತಿಯೂ ಸತ್ಯಪೂರ್ವಕವಾಗಿಯೂ ಪ್ರೀತಿಪೂರ್ವಕವಾಗಿಯೂ ನಮ್ಮೊಂದಿಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ತಂದೆಯಾದ ದೇವರಿಂದಲೂ ಆತನ ಮಗನಾದ ಯೇಸು ಕ್ರಿಸ್ತನಿಂದಲೂ ಕೃಪೆ, ಕರುಣೆ ಮತ್ತು ಶಾಂತಿ ನಮ್ಮೊಂದಿಗಿರುತ್ತವೆ. ನಾವು ಈ ಆಶೀರ್ವಾದಗಳನ್ನು ಸತ್ಯದ ಮತ್ತು ಪ್ರೀತಿಯ ಮೂಲಕ ಪಡೆಯುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ದೆವ್ ಬಾಬಾ ಅನಿ ತೆಚ್ಯಾ ಲೆಕಾ ಜೆಜು ಕ್ರಿಸ್ತಾನ್ ಅಮ್ಕಾ ದಿತಲಿ ಕುರ್ಪಾ, ದಯಾ, ಅನಿ ಶಾಂತಿ ಖರ್ಯಾನ್ ಅನಿ ಪ್ರೆಮಾನ್ ಕನ್ನಾಬಿ ಅಮ್ಚ್ಯಾಚ್ ವಾಂಗ್ಡಾ ರಾಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಯೋಹಾನನು 1:3
9 ತಿಳಿವುಗಳ ಹೋಲಿಕೆ  

ಪ್ರೀತಿಯು ಇದಾಗಿರುತ್ತದೆ: ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ದೇವರೇ ನಮ್ಮನ್ನು ಪ್ರೀತಿಸಿ, ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕಳುಹಿಸಿ ಕೊಟ್ಟಿದ್ದರಲ್ಲಿಯೇ ಅವರ ಸತ್ಯ ಪ್ರೀತಿಯು ತೋರಿಬರುತ್ತದೆ.


ರೋಮ್ ನಗರದಲ್ಲಿ ದೇವರಿಗೆ ಪ್ರಿಯರೂ ದೇವರ ಪವಿತ್ರ ಜನರಾಗುವುದಕ್ಕೆ ಕರೆಯಲಾದವರೂ ಆಗಿರುವವರೆಲ್ಲರಿಗೂ: ನಮ್ಮ ತಂದೆಯಾದ ದೇವರಿಂದಲೂ ಕರ್ತ ಯೇಸು ಕ್ರಿಸ್ತರಿಂದಲೂ ಕೃಪೆಯೂ ಶಾಂತಿಯೂ ಆಗಲಿ.


ಆದರೆ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಕೃಪೆಯು ನನಗೆ ಧಾರಾಳವಾಗಿ ಸುರಿಯಲಾಯಿತು. ಮಾತ್ರವಲ್ಲದೆ ವಿಶ್ವಾಸ ಪ್ರೀತಿಯೊಂದಿಗೆ ಅತ್ಯಧಿಕವಾಯಿತು.


ನಂಬಿಕೆಯಲ್ಲಿ ನನ್ನ ನಿಜ ಪುತ್ರನಾಗಿರುವ ತಿಮೊಥೆಯನಿಗೆ ಬರೆಯುವುದು: ನಮ್ಮ ತಂದೆ ದೇವರಿಂದಲೂ, ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ದೊರೆಯಲಿ.


ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಸುನ್ನತಿ ಆಗದಿದ್ದರೂ ಯಾವ ವ್ಯತ್ಯಾಸವಿರುವುದಿಲ್ಲ. ಆದರೆ ಪ್ರೀತಿಯಿಂದ ಕಾರ್ಯ ನಡೆಸುವ ನಂಬಿಕೆಯು ಮಾತ್ರ ಪ್ರಯೋಜನವಾಗಿರುತ್ತದೆ.


ಸಭಾಹಿರಿಯನಾದ ನಾನು, ನಮ್ಮಲ್ಲಿ ವಾಸಿಸುವ ಮತ್ತು ನಮ್ಮೊಂದಿಗೆ ಸದಾಕಾಲವೂ ಇರುವಂಥ ಸತ್ಯದ ನಿಮಿತ್ತವಾಗಿ ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ


ನೀನು ನನ್ನಿಂದ ಕೇಳಿದ ಸ್ವಸ್ಥವಾಕ್ಯಗಳನ್ನು ಕ್ರಿಸ್ತ ಯೇಸುವಿನಲ್ಲಿರುವ ವಿಶ್ವಾಸ ಹಾಗೂ ಪ್ರೀತಿಯೊಂದಿಗೆ ಒಂದು ಮಾದರಿಯಾಗಿ ಹಿಡಿದುಕೋ.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾಲ್ಕನೆಯ, ಐದನೆಯ, ಏಳನೆಯ, ಹತ್ತನೆಯ ತಿಂಗಳಿನ ಉಪವಾಸವು ಯೆಹೂದದ ಮನೆತನದವರಿಗೆ ಸಂತೋಷಕರ, ಸಂಭ್ರಮ ಕಾಲವೂ, ಆನಂದಕರವಾದ ಹಬ್ಬಗಳೂ ಆಗುವುವು. ಆದರೆ ಸತ್ಯವನ್ನೂ, ಸಮಾಧಾನವನ್ನೂ ಪ್ರೀತಿಸಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು