Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಯೋಹಾನನು 1:4 - ಕನ್ನಡ ಸಮಕಾಲಿಕ ಅನುವಾದ

4 ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ ಸತ್ಯದಲ್ಲಿ ನಡೆಯುವುದನ್ನು ಕಂಡು ನಾನು ಬಹಳ ಸಂತೋಷವುಳ್ಳವನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ, ನಿಮ್ಮ ಮಕ್ಕಳಲ್ಲಿ ಕೆಲವರು, ಸತ್ಯವಂತರಾಗಿ ನಡೆಯುವುದನ್ನು ಕಂಡು ನಾನು ಬಹಳ ಸಂತೋಷಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿನ್ನ ಮಕ್ಕಳಲ್ಲಿ ಕೆಲವರು ಪಿತನು ವಿಧಿಸಿದಂತೆ ಸತ್ಯಸಂಧರಾಗಿ ನಡೆಯುವುದನ್ನು ಕಂಡು ನನಗಾದ ಆನಂದ ಅಷ್ಟಿಷ್ಟಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಮಗುಂಟಾದ ಆಜ್ಞಾನುಸಾರ ಸತ್ಯವಂತರಾಗಿ ನಡೆಯುವದನ್ನು ಕಂಡು ಬಹಳ ಸಂತೋಷವುಳ್ಳವನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿಮ್ಮ ಮಕ್ಕಳಲ್ಲಿ ಕೆಲವರ ಬಗ್ಗೆ ನಾನು ಕೇಳಿದಾಗ ತುಂಬಾ ಸಂತೋಷವಾಯಿತು. ತಂದೆಯಾದ ದೇವರು ನಮಗೆ ಆಜ್ಞಾಪಿಸಿದ ಸತ್ಯಮಾರ್ಗವನ್ನು ಅವರು ಅನುಸರಿಸುತ್ತಿರುವುದರಿಂದ ನನಗೆ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತುಮ್ಚ್ಯಾ ಪೊರಾತ್ನಿ ಥೊಡೆ ಜನಾ ದೆವಾ ಬಾಬಾನ್ ದಾಕ್ವಲ್ಲ್ಯಾ ಖರೆಪಾನಾಚ್ಯಾ ವಾಟೆನ್, ಅನಿ ದೆವಾಚ್ಯಾ ಹುಕುಮಾ ಸಾರ್ಕೆ ಚಲುನ್ಗೆತ್ ಹೊತ್ತೆ ಬಗುನ್ ಮಾಕಾ ಲೈ ಖುಶಿ ಹೊಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಯೋಹಾನನು 1:4
12 ತಿಳಿವುಗಳ ಹೋಲಿಕೆ  

ನೀವು ಹಿಂದೊಮ್ಮೆ ಕತ್ತಲೆಯಾಗಿದ್ದಿರಿ. ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿದ್ದೀರಿ. ಬೆಳಕಿನ ಮಕ್ಕಳಾಗಿ ಬಾಳಿರಿ.


ಕ್ರಿಸ್ತ ಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ದೇವರಿಗೆ ಸುಗಂಧ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಸಹ ಪ್ರೀತಿಯಿಂದ ಬಾಳಿರಿ.


ದೇವರಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಯೇಸು ಜೀವಿಸಿದಂತೆಯೇ ತಾನೂ ಜೀವಿಸಬೇಕು.


ಯಾರು ಬುದ್ಧಿವಂತರು? ಅವರು ಈ ಸತ್ಯಗಳನ್ನು ಅರ್ಥಮಾಡಿಕೊಳ್ಳಲಿ. ಯಾರು ವಿವೇಚನೆಯುಳ್ಳವರು? ಅವರು ಇವುಗಳನ್ನು ತಿಳಿದುಕೊಳ್ಳಲಿ. ಏಕೆಂದರೆ, ಯೆಹೋವ ದೇವರ ಮಾರ್ಗಗಳು ನ್ಯಾಯವಾಗಿವೆ. ನೀತಿವಂತರು ಅದರಲ್ಲಿ ನಡೆಯುವರು. ಆದರೆ ಅಕ್ರಮಗಾರರು ಅವುಗಳಿಂದ ಎಡವಿಬೀಳುವರು.


ಸತ್ಯ ಬೋಧನೆಯು ಅವನ ಬಾಯಲ್ಲಿ ಇತ್ತು. ಸುಳ್ಳು ಅವನ ತುಟಿಗಳಲ್ಲಿ ಸಿಕ್ಕಲಿಲ್ಲ. ಅವನು ಸಮಾಧಾನದಿಂದಲೂ, ನ್ಯಾಯದಿಂದಲೂ ನನ್ನ ಸಂಗಡ ನಡೆದುಕೊಂಡು, ಅನೇಕರನ್ನು ಪಾಪದ ಕಡೆಯಿಂದ ತಿರುಗಿಸಿದನು.


ಅಂತೂ ಕೊನೆಯದಾಗಿ ನನ್ನ ಬಗ್ಗೆ ನಿಮಗಿರುವ ಆಸಕ್ತಿಯು ಪುನಃ ಚಿಗುರಿದ್ದಕ್ಕಾಗಿ ಕರ್ತ ದೇವರಲ್ಲಿ ಬಹಳವಾಗಿ ಆನಂದಿಸುತ್ತೇನೆ. ನೀವು ನನ್ನ ಬಗ್ಗೆ ಆಸಕ್ತಿ ಮೊದಲಿನಿಂದ ಹೊಂದಿದ್ದರೂ ಅದನ್ನು ತೋರಿಸಲು ನಿಮಗೆ ಸೂಕ್ತ ಅವಕಾಶ ಸಿಕ್ಕಿರಲಿಲ್ಲ.


ಆದರೆ ಅವರು ಸುವಾರ್ತೆಯ ಸತ್ಯದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ, “ನೀನು ಯೆಹೂದ್ಯನಾಗಿದ್ದು, ಯೆಹೂದ್ಯರಂತೆ ಜೀವಿಸದೆ ಯೆಹೂದ್ಯರಲ್ಲದವರಂತೆ ಜೀವಿಸಿ, ಯೆಹೂದ್ಯರಲ್ಲದವರು ಯೆಹೂದ್ಯರಂತೆ ಜೀವಿಸಬೇಕೆಂದು ನೀನು ಒತ್ತಾಯ ಮಾಡುವುದು ಹೇಗೆ?” ಎಂದು ಕೇಳಿದೆ.


ಪ್ರೀತಿ ಕೆಟ್ಟದ್ದರಲ್ಲಿ ಸಂತೋಷಪಡುವುದಿಲ್ಲ, ಸತ್ಯದೊಂದಿಗೆ ಸಂತೋಷ ಪಡುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು