Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಯೋಹಾನನು 1:7 - ಕನ್ನಡ ಸಮಕಾಲಿಕ ಅನುವಾದ

7 ಏಕೆಂದರೆ ನರಮಾಂಸದಲ್ಲಿ ಬಂದಿರುವ ಕ್ರಿಸ್ತ ಯೇಸುವನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವರೇ ಮೋಸಗಾರರೂ ಕ್ರಿಸ್ತವಿರೋಧಿಗಳೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಏಕೆಂದರೆ, ಯೇಸುಕ್ರಿಸ್ತನು ಮನುಷ್ಯನಾಗಿ ಬಂದನು ಎಂಬುದನ್ನು ಒಪ್ಪದೆ ಇರುವ ಅನೇಕ ಮೋಸಗಾರರು ಲೋಕದೊಳಗೆ ಹೊರಟು ಬಂದಿದ್ದಾರೆ. ಇಂಥವರೇ, ಯೇಸುವನ್ನು ಒಪ್ಪದ ಮೋಸಗಾರರೂ, ಕ್ರಿಸ್ತವಿರೋಧಿಗಳು ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅನೇಕ ಮಂದಿ ವಂಚಕರು ಲೋಕದಲ್ಲಿ ತಲೆದೋರಿದ್ದಾರೆ. ಯೇಸುಕ್ರಿಸ್ತರು ಮನುಷ್ಯ ಆಗಿಬಂದರೆಂಬುದನ್ನು ಇವರು ಒಪ್ಪಿಕೊಳ್ಳುವುದಿಲ್ಲ. ಇಂಥವನು ವಂಚಕನೂ ಕ್ರಿಸ್ತವಿರೋಧಿಯೂ ಹೌದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮನುಷ್ಯನಾಗಿ ಬಂದಿರುವ ಯೇಸು ಕ್ರಿಸ್ತನನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಯೇಸುವನ್ನು ಒಪ್ಪದವನು ಮೋಸಗಾರನೂ ಕ್ರಿಸ್ತವಿರೋಧಿಯೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈಗ ಲೋಕದಲ್ಲಿ ಅನೇಕ ಸುಳ್ಳುಬೋಧಕರಿದ್ದಾರೆ. ಯೇಸು ಕ್ರಿಸ್ತನು ಈ ಲೋಕಕ್ಕೆ ಮನುಷ್ಯನಾಗಿ ಬಂದನೆಂಬುದನ್ನು ಈ ಸುಳ್ಳುಬೋಧಕರು ಒಪ್ಪಿಕೊಳ್ಳುವುದಿಲ್ಲ. ಈ ಸತ್ಯವನ್ನು ಒಪ್ಪಿಕೊಳ್ಳದವನು ಸುಳ್ಳುಬೋಧಕನಾಗಿದ್ದಾನೆ ಮತ್ತು ಯೇಸು ಕ್ರಿಸ್ತನ ವೈರಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಕಶ್ಯಾಕ್ ಮಟ್ಲ್ಯಾರ್, ಜೆಜು ಕ್ರಿಸ್ತ್ ಮಾನುಸ್ ಹೊವ್ನ್ ಯೆಲೊ ಮನ್ತಲೆ ಮಾನಿನಸ್ತಾನಾ, ಲೊಕಾಕ್ನಿ ಪಸ್ವುತಲಿ ಅನಿ ಕ್ರಿಸ್ತಾಕ್ ವಿರೊಧ್ ಹೊವ್ನ್ ಹೊತ್ತಿ ಲೊಕಾ ಹ್ಯಾ ಜಗಾತ್ ಪಗಳ್ಳ್ಯಾತ್. ಹೆನಿಚ್ ಪಸ್ವುತಲೆ ಅನಿ ಕ್ರಿಸ್ತಾಕ್ ವಿರೊಧಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಯೋಹಾನನು 1:7
8 ತಿಳಿವುಗಳ ಹೋಲಿಕೆ  

ನಿಮ್ಮನ್ನು ವಂಚಿಸುವವರ ವಿಷಯವಾಗಿ ಇವುಗಳನ್ನು ನಾನು ನಿಮಗೆ ಬರೆದಿದ್ದೇನೆ.


ಎಲ್ಲಾ ಪ್ರಶ್ನೆಗಳಿಂದ ಹೆಚ್ಚಾಗಿ ದೈವ ಭಕ್ತಿಯ ರಹಸ್ಯವು ದೊಡ್ಡದಾದದ್ದು ಅದು ಯಾವುದೆಂದರೆ: “ದೇವರು ಮನುಷ್ಯ ರೂಪದಲ್ಲಿ ಪ್ರತ್ಯಕ್ಷರಾದರು. ಆತ್ಮದಲ್ಲಿ ರುಜುಪಡಿಸಲಾದರು. ದೂತರಿಗೆ ಕಾಣಿಸಿಕೊಂಡರು, ಯೆಹೂದ್ಯರಲ್ಲದವರಿಗೆ ಸಾರಲಾದರು, ಲೋಕದಲ್ಲಿ ನಂಬಲಾದರು, ಮಹಿಮೆಗೆ ಒಯ್ಯಲಾದರು!”


ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.


ಆ ಮೊದಲನೆಯ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವನ್ನು ಕೊಡಲಾಗಿದ್ದರಿಂದ ಭೂನಿವಾಸಿಗಳನ್ನು ಮೋಸಗೊಳಿಸುತ್ತದೆ. ಭೂಮಿಯ ಮೇಲೆ ವಾಸಿಸುವವರು, ಕತ್ತಿಯಿಂದ ಗಾಯಹೊಂದಿ, ಸಾಯದೆ ಬದುಕಿದ ಮೃಗದ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಹೇಳುತ್ತದೆ.


ಭೂಲೋಕದವರನ್ನೆಲ್ಲಾ ವಂಚಿಸುತ್ತಿದ್ದ ಆ ಮಹಾ ಘಟಸರ್ಪನು ಎಂದರೆ ಪಿಶಾಚನೆಂತಲೂ ಸೈತಾನನೆಂತಲೂ ಕರೆಯಲಾದ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರನ್ನೂ ಅವನೊಂದಿಗೆ ತಳ್ಳಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು