Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 1:1 - ಕನ್ನಡ ಸಮಕಾಲಿಕ ಅನುವಾದ

1 ಸೌಲನ ಮರಣದ ತರುವಾಯ ದಾವೀದನು ಅಮಾಲೇಕ್ಯರನ್ನು ಸಂಹರಿಸಿ, ಚಿಕ್ಲಗಿಗೆ ತಿರುಗಿಬಂದು, ಎರಡು ದಿವಸ ಅಲ್ಲಿ ಇದ್ದ ತರುವಾಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸೌಲನು ಸತ್ತನಂತರ, ದಾವೀದನು ಅಮಾಲೇಕ್ಯರನ್ನು ಸಂಹರಿಸಿ ಚಿಕ್ಲಗ್ ಪಟ್ಟಣದಲ್ಲಿ ಎರಡು ದಿನ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸೌಲನು ಸತ್ತನಂತರ ಸಂಭವಿಸಿದ ಘಟನೆಗಳು: ದಾವೀದನು ಅಮಾಲೇಕ್ಯರನ್ನು ಸದೆಬಡಿದು ಬಂದು ಚಿಕ್ಲಗಿನಲ್ಲಿ ಎರಡು ದಿವಸ ತಂಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸೌಲನು ಸತ್ತನಂತರ ಸಂಭವಿಸಿದ್ದು. ದಾವೀದನು ಅಮಾಲೇಕ್ಯರನ್ನು ಹೊಡೆದು ಬಂದು ಚಿಕ್ಲಗಿನಲ್ಲಿ ಎರಡು ದಿವಸ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದಾವೀದನು ಅಮಾಲೇಕ್ಯರನ್ನು ಸೋಲಿಸಿದ ಬಳಿಕ, ಚಿಕ್ಲಗಿಗೆ ಹಿಂದಿರುಗಿಬಂದು, ಅಲ್ಲಿ ಎರಡು ದಿವಸ ಇದ್ದನು. ಸೌಲನ ಮರಣಾನಂತರ ಇದು ಸಂಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 1:1
6 ತಿಳಿವುಗಳ ಹೋಲಿಕೆ  

ಆಗ ಆಕೀಷನು ಆ ದಿವಸದಲ್ಲಿ ಚಿಕ್ಲಗ್ ಊರನ್ನು ಅವನಿಗೆ ಕೊಟ್ಟನು. ಆದ್ದರಿಂದ ಚಿಕ್ಲಗ್ ಇಂದಿನವರೆಗೂ ಯೆಹೂದದ ಅರಸರಿಗೆ ಸೇರಿದೆ.


ಹೀಗೆ ಸೌಲನೂ, ಅವನ ಮೂರು ಮಂದಿ ಪುತ್ರರೂ, ಅವನ ಆಯುಧ ಹೊರುವವನೂ, ಅವನ ಸಮಸ್ತ ಜನರೂ ಅದೇ ದಿನ ಸತ್ತರು.


ಅವರು ಹಿಂದಿರುಗಿ ಕಾದೇಶ್ ಎಂಬ ಎನ್ಮಿಷ್ಪಾಟಿಗೆ ಬಂದು, ಅಮಾಲೇಕ್ಯರ ಎಲ್ಲಾ ಬಯಲನ್ನು ಹಜಜೋನ್ ತಾಮಾರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಜಯಿಸಿದರು.


ದಾವೀದನೂ, ಅವನ ಜನರೂ ಮೂರನೆಯ ದಿವಸದಲ್ಲಿ ಚಿಕ್ಲಗ್ ಊರಿಗೆ ಬಂದು ಸೇರಿದರು. ಅಮಾಲೇಕ್ಯರು ದಕ್ಷಿಣ ಸೀಮೆಯ ಮೇಲೆಯೂ, ಚಿಕ್ಲಗಿನ ಮೇಲೆಯೂ ಆಕ್ರಮಿಸಿ ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟರು.


ಆದಕಾರಣ ಅವನು ತನ್ನ ಆಯುಧಗಳನ್ನು ಹೊರುವವನಿಗೆ, “ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ಅವಮಾನ ಮಾಡದ ಹಾಗೆ ನೀನು ನಿನ್ನ ಖಡ್ಗವನ್ನು ಹಿರಿದು, ನನ್ನನ್ನು ತಿವಿ,” ಎಂದನು. ಆದರೆ ಅವನ ಆಯುಧ ಹೊರುವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡದೆ ಹೋದನು. ಆಗ ಸೌಲನು ತನ್ನ ಖಡ್ಗವನ್ನು ತೆಗೆದುಕೊಂಡು ಅದರ ಮೇಲೆ ಬಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು