Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 1:10 - ಕನ್ನಡ ಸಮಕಾಲಿಕ ಅನುವಾದ

10 “ಆದ್ದರಿಂದ ಅವನು ಬಿದ್ದ ತರುವಾಯ ಬದುಕಲಾರನೆಂದು ನಾನು ತಿಳಿದು, ಅವನ ಮೇಲೆ ನಿಂತು ಅವನನ್ನು ಕೊಂದುಹಾಕಿದೆನು. ಅವನ ತಲೆಯ ಮೇಲಿದ್ದ ಕಿರೀಟವನ್ನೂ ಅವನ ತೋಳಿನಲ್ಲಿದ್ದ ಬಳೆಯನ್ನೂ ತೆಗೆದುಕೊಂಡು, ಅವುಗಳನ್ನು ನನ್ನ ಒಡೆಯನಿಗೆ ಇಲ್ಲಿ ತಂದಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನು ಹತ್ತಿರ ಹೋಗಿ ಅವನು ಬಿದ್ದನಂತರ ಬದುಕಲಾರನೆಂದು ನೆನಸಿ, ಅವನನ್ನು ಕೊಂದು ಹಾಕಿ, ಅವನ ತಲೆಯ ಮೇಲಣ ಕಿರೀಟವನ್ನೂ ತೋಳಿನಲ್ಲಿದ್ದ ಬಳೆಯನ್ನೂ ತೆಗೆದುಕೊಂಡು ಅವುಗಳನ್ನು ನನ್ನ ಒಡೆಯನಾದ ನಿನಗೆ ತಂದಿದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವರು ಕೆಳಕ್ಕೆ ಬಿದ್ದುಬಿಟ್ಟರೆ ಬದುಕಲಾರರೆಂದು ನೆನೆಸಿ ನಾನು ಅವರನ್ನು ಸಮೀಪಿಸಿ ಕೊಂದುಹಾಕಿದೆ. ಅವರ ತಲೆಯ ಮೇಲಿನ ಕಿರೀಟವನ್ನೂ ತೋಳಿನಲ್ಲಿದ್ದ ಬಳೆಯನ್ನೂ ತೆಗೆದುಕೊಂಡು ನನ್ನ ಒಡೆಯರಾದ ತಮ್ಮ ಬಳಿಗೆ ತಂದಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನು ಹತ್ತಿರ ಹೋಗಿ ಅವನು ಬಿದ್ದು ಬಿಟ್ಟರೆ ಬದುಕಲಾರನೆಂದು ನೆನಸಿ ಅವನನ್ನು ಕೊಂದುಹಾಕಿ ಅವನ ತಲೆಯ ಮೇಲಣ ಕಿರೀಟವನ್ನೂ ರಟ್ಟೆಯಲ್ಲಿದ್ದ ಬಳೆಯನ್ನೂ ತೆಗೆದುಕೊಂಡು ಅವುಗಳನ್ನು ನನ್ನ ಒಡೆಯನಾದ ನಿನಗೆ ತಂದಿದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದ್ದರಿಂದ ನಾನು ಅವನನ್ನು ಕೊಂದೆನು. ಅವನು ಮತ್ತೆ ಜೀವದಿಂದ ಉಳಿಯಲಾರದಷ್ಟು ಗಾಯಗೊಂಡಿದ್ದಾನೆಂಬುದು ನನಗೆ ತಿಳಿದಿತ್ತು. ನಂತರ ನಾನು ಅವನ ತಲೆಯಿಂದ ಕಿರೀಟವನ್ನೂ ತೋಳಿನ ಕವಚವನ್ನೂ ತೆಗೆದುಕೊಂಡೆನು. ನನ್ನ ಒಡೆಯನೇ, ನಾನು ಆ ಕಿರೀಟವನ್ನು ಮತ್ತು ತೋಳಿನ ಕವಚವನ್ನು ನಿನ್ನ ಬಳಿಗೆ ತಂದಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 1:10
10 ತಿಳಿವುಗಳ ಹೋಲಿಕೆ  

ನೀವು ಇತರರ ಬಗ್ಗೆ ಕೊಡುವ ತೀರ್ಪಿನ ಪ್ರಕಾರವೇ ನಿಮಗೂ ತೀರ್ಪಾಗುವುದು, ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು.


ಆಗ ಅವನು ಶೀಘ್ರವಾಗಿ ತನ್ನ ಆಯುಧಗಳನ್ನು ಹೊರುವ ಸೇವಕನನ್ನು ಕರೆದು ಅವನಿಗೆ, “ಒಬ್ಬ ಸ್ತ್ರೀಯು ಕೊಂದಳೆಂದು ಮನುಷ್ಯರು ನನ್ನನ್ನು ಕುರಿತು ಹೇಳದ ಹಾಗೆ ನೀನು ನಿನ್ನ ಖಡ್ಗದಿಂದ ಇರಿದು, ನನ್ನನ್ನು ಕೊಲ್ಲು,” ಎಂದು ಅವನಿಗೆ ಹೇಳಿದನು. ಹಾಗೆಯೇ ಅವನ ಸೇವಕನು ಅವನನ್ನು ತಿವಿದು ಹಾಕಿದನು. ಅವನು ಮರಣಹೊಂದಿದನು.


ಆಗ ಯೆಹೋಯಾದಾವನು ರಾಜಪುತ್ರನನ್ನು ಹೊರಗೆ ಕರೆತಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ದೇವರ ನಿಯಮ ಗ್ರಂಥವನ್ನು ಕೊಟ್ಟು, ಅರಸನನ್ನಾಗಿ ಮಾಡಿ ಅವನನ್ನು ಅಭಿಷೇಕಿಸಿದರು. ಕೂಡಲೆ ಜನರು ಚಪ್ಪಾಳೆ ಹೊಡೆದು, “ಅರಸನು ಚಿರಂಜೀವಿಯಾಗಿರಲಿ!” ಎಂದು ಹರಸಿದರು.


ಕಿರೀಟವು ನಮ್ಮ ತಲೆಯ ಮೇಲಿನಿಂದ ಬಿದ್ದುಹೋಯಿತು. ಅಯ್ಯೋ, ನಾವು ಪಾಪಮಾಡಿದ್ದೇವೆ.


ಇದಲ್ಲದೆ ದಾವೀದನು ಅಮ್ಮೋನಿಯರ ಅರಸನ ತಲೆಯ ಮೇಲೆ ಇದ್ದ ಕಿರೀಟವನ್ನು ಸಹ ತೆಗೆದುಕೊಂಡನು. ಅದು ಮೂವತ್ತೈದು ಕಿಲೋಗ್ರಾಂ ತೂಕದ್ದಾಗಿತ್ತು ಅದನ್ನು ಬಂಗಾರದಿಂದಲೂ, ಅಮೂಲ್ಯವಾದ ರತ್ನಗಳಿಂದಲೂ ಅಲಂಕರಿಸಲಾಗಿತ್ತು, ಆ ಕಿರೀಟವನ್ನು ದಾವೀದನ ಶಿರಸ್ಸಿನಲ್ಲಿ ಧರಿಸಲಾಯಿತು. ಆ ಪಟ್ಟಣದೊಳಗಿಂದ ಅತ್ಯಧಿಕವಾದ ಕೊಳ್ಳೆಯನ್ನೂ ತೆಗೆದುಕೊಂಡು ಬಂದನು.


ಆಗ ಅರಸನು ದೋಯೇಗನಿಗೆ, “ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು,” ಎಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು, ನಾರುಬಟ್ಟೆಯ ಏಫೋದನ್ನು ಧರಿಸಿಕೊಳ್ಳುವವರಾದ ಎಂಬತ್ತೈದು ಯಾಜಕರನ್ನು ಆ ದಿನದಲ್ಲಿ ಕೊಂದನು.


ಆಗ ಅದೋನೀಬೆಜೆಕನು, “ನಾನು ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು, ನನ್ನ ಮೇಜಿನ ಕೆಳಗೆ ಬೀಳುವ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ, ದೇವರು ನನಗೆ ಮಾಡಿದ್ದಾರೆ,” ಎಂದನು. ಅವರು ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಲ್ಲಿ ಅವನು ಮರಣಹೊಂದಿದನು.


“ಅವನು ನನಗೆ, ‘ನೀನು ದಯಮಾಡಿ ನನ್ನ ಮೇಲೆ ನಿಂತು ನನ್ನನ್ನು ಕೊಂದುಹಾಕು. ಏಕೆಂದರೆ ನನ್ನ ಪ್ರಾಣವು ಇನ್ನೂ ನನ್ನಲ್ಲಿ ಪೂರ್ಣವಾಗಿರುವುದರಿಂದ ಸಂಕಟವು ನನ್ನನ್ನು ಹಿಡಿದಿದೆ,’ ಎಂದನು.


ದಾವೀದನು ಅವನಿಗೆ, “ಯೆಹೋವ ದೇವರ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯಿ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿದ್ದರಿಂದ, ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರಲಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು