2 ಸಮುಯೇಲ 1:13 - ಕನ್ನಡ ಸಮಕಾಲಿಕ ಅನುವಾದ13 ದಾವೀದನು ತನಗೆ ವರ್ತಮಾನ ತಿಳಿಸಿದ ಯುವಕನನ್ನು, “ನೀನು ಎಲ್ಲಿಯವನು?” ಎಂದು ಕೇಳಿದನು. ಅವನು, “ನಾನು ವಿದೇಶಿಯ ಮಗನಾದ ಅಮಾಲೇಕ್ಯನು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ದಾವೀದನು ವರ್ತಮಾನ ತಂದ ಯುವಕನನ್ನು, “ನೀನು ಎಲ್ಲಿಯವನು?” ಎಂದು ಕೇಳಿದನು. ಅವನು, “ನಾನು ಇಸ್ರಾಯೇಲರಲ್ಲಿ ಪ್ರವಾಸಿಯಾಗಿರುವ ಅಮಾಲೇಕ್ಯನು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ದಾವೀದನು ವರ್ತಮಾನ ತಂದ ಆ ಯುವಕನನ್ನು, “ನೀನೆಲ್ಲಿಯವನು?” ಎಂದು ಕೇಳಿದ್ದಕ್ಕೆ ಅವನು, “ನಾನು ಇಸ್ರಯೇಲರಲ್ಲಿ ಪ್ರವಾಸಿಯಾಗಿರುವ ಒಬ್ಬ ಅಮಾಲೇಕ್ಯನು,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ದಾವೀದನು ವರ್ತಮಾನ ತಂದ ಪ್ರಾಯಸ್ಥನನ್ನು - ನೀನೆಲ್ಲಿಯವನು ಎಂದು ಕೇಳಿದ್ದಕ್ಕೆ ಅವನು - ನಾನು ಇಸ್ರಾಯೇಲ್ಯರಲ್ಲಿ ಪ್ರವಾಸಿಯಾಗಿರುವ ಅಮಾಲೇಕ್ಯನ ಮಗನು ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಸೌಲನ ಮರಣದ ಬಗ್ಗೆ ತಿಳಿಸಿದ ಯುವಕನಿಗೆ ದಾವೀದನು, “ನೀನು ಎಲ್ಲಿಂದ ಬಂದಿರುವೆ?” ಎಂದು ಕೇಳಿದನು. ಆ ಯುವಕನು, “ನಾನು ಇಸ್ರೇಲ್ ಜನರಲ್ಲಿ ವಾಸಿಸುತ್ತಿರುವ ವಿದೇಶೀಯನ ಮಗ. ನಾನೊಬ್ಬ ಅಮಾಲೇಕ್ಯನು” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿ |