Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 1:14 - ಕನ್ನಡ ಸಮಕಾಲಿಕ ಅನುವಾದ

14 ಆಗ ದಾವೀದನು ಅವನಿಗೆ, “ಯೆಹೋವ ದೇವರ ಅಭಿಷಿಕ್ತನನ್ನು ಸಂಹರಿಸಲು ನಿನ್ನ ಕೈ ಎತ್ತುವುದಕ್ಕೆ ಯಾಕೆ ಭಯಪಡಲಿಲ್ಲ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ದಾವೀದನು ಅವನಿಗೆ, “ನೀನು ಕೈಯೆತ್ತಿ ಯೆಹೋವನ ಅಭಿಷಿಕ್ತನನ್ನು ಕೊಲ್ಲುವುದಕ್ಕೆ ಏಕೆ ಭಯಪಡಲಿಲ್ಲ?” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ದಾವೀದನು, “ಕೈಯೆತ್ತಿ ಸರ್ವೇಶ್ವರನ ಅಭಿಷಿಕ್ತನನ್ನು ಕೊಲ್ಲುವುದಕ್ಕೆ ನೀನು ಹಿಂಜರಿಯಲಿಲ್ಲ ಏಕೆ?” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ದಾವೀದನು ಅವನಿಗೆ - ನೀನು ಕೈಯೆತ್ತಿ ಯೆಹೋವನ ಅಭಿಷಿಕ್ತನನ್ನು ಕೊಲ್ಲುವದಕ್ಕೆ ಏಕೆ ಭಯಪಡಲಿಲ್ಲ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದಾವೀದನು ಆ ಯುವಕನಿಗೆ, “ಯೆಹೋವನಿಂದ ಆರಿಸಲ್ಪಟ್ಟ ರಾಜನನ್ನು ಕೊಲ್ಲಲು ನೀನು ಹೆದರಲಿಲ್ಲವೇಕೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 1:14
12 ತಿಳಿವುಗಳ ಹೋಲಿಕೆ  

ಆದರೆ ದಾವೀದನು ಅಬೀಷೈಯನಿಗೆ, “ಅವನನ್ನು ಸಂಹರಿಸಬೇಡ. ಏಕೆಂದರೆ ಅಪರಾಧವಿಲ್ಲದೆ ಯೆಹೋವ ದೇವರ ಅಭಿಷಿಕ್ತನ ವಿರೋಧವಾಗಿ ಕೈ ಹಾಕುವವನು ಯಾರು?” ಎಂದನು.


ಆದರೆ ಮುಖ್ಯವಾಗಿ ತುಚ್ಛವಾದ ದೈಹಿಕ ವ್ಯಾಮೋಹಗಳಿಗೆ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವರು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ. ದುರಹಂಕಾರದಿಂದ ಸ್ವರ್ಗೀಯ ಜೀವಿಗಳನ್ನು ದೂಷಿಸುತ್ತಾರೆ.


“ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ, ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ.”


ಆದಕಾರಣ ಅವನು ತನ್ನ ಆಯುಧಗಳನ್ನು ಹೊರುವವನಿಗೆ, “ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ಅವಮಾನ ಮಾಡದ ಹಾಗೆ ನೀನು ನಿನ್ನ ಖಡ್ಗವನ್ನು ಹಿರಿದು, ನನ್ನನ್ನು ತಿವಿ,” ಎಂದನು. ಆದರೆ ಅವನ ಆಯುಧ ಹೊರುವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡದೆ ಹೋದನು. ಆಗ ಸೌಲನು ತನ್ನ ಖಡ್ಗವನ್ನು ತೆಗೆದುಕೊಂಡು ಅದರ ಮೇಲೆ ಬಿದ್ದನು.


ದಾವೀದನು ತನ್ನ ಜನರಿಗೆ, “ಅವನು ಯೆಹೋವ ದೇವರ ಅಭಿಷಿಕ್ತನಾದದರಿಂದ ನನ್ನ ಕೈ ಅವನಿಗೆ ವಿರೋಧವಾಗಿ ಚಾಚಿ, ನನ್ನ ಒಡೆಯನಿಗೆ ಈ ಕಾರ್ಯ ಮಾಡುವುದನ್ನು ಯೆಹೋವ ದೇವರು ತಡೆಯಲಿ,” ಎಂದನು.


ನಾನು ಗೂಢವಾಗಿ ಅಲ್ಲ ಸ್ಪಷ್ಟವಾಗಿ, ಮುಖಾಮುಖಿಯಾಗಿ ಅಂದರೆ, ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ. ಅವನು ಯೆಹೋವ ದೇವರ ರೂಪವನ್ನು ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?”


ಆಗ ಸಮುಯೇಲನು ಎಣ್ಣೆಕುಪ್ಪಿಯಿಂದ ಅವನ ತಲೆಯ ಮೇಲೆ ಸುರಿದು, ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವ ದೇವರು ನಿನ್ನನ್ನು ತಮ್ಮ ಆಸ್ತಿಯಾಗಿರುವ ಜನರ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾರೆ.


ನಾನು ಇಲ್ಲಿದ್ದೇನೆ. ಯೆಹೋವ ದೇವರ ಮುಂದೆಯೂ, ಅವರ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿ ಕೊಡಿರಿ. ನಾನು ಯಾರ ಎತ್ತನ್ನಾದರೂ, ಕತ್ತೆಯನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ, ತಿರುಗಿಕೊಡುತ್ತೇನೆ,” ಎಂದನು.


ನಾನು ನನ್ನ ಕೈಯನ್ನು ಯೆಹೋವ ದೇವರ ಅಭಿಷಿಕ್ತನ ಮೇಲೆ ಹಾಕದ ಹಾಗೆ ಯೆಹೋವ ದೇವರು ನನಗೆ ತಡೆಯಲಿ. ಈಗ ಅವನ ತಲೆದಿಂಬಿನ ಬಳಿಯಲ್ಲಿರುವ ಈಟಿಯನ್ನೂ, ನೀರಿನ ತಂಬಿಗೆಯನ್ನೂ ತೆಗೆದುಕೋ ನಾವು ಹೋಗೋಣ,” ಎಂದನು.


ಯಾರ ವಿಷಯವಾಗಿ ನಾವು ಅವನ ನೆರಳಿನ ಕೆಳಗೆ ಬೇರೆ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿಕೊಂಡೆವೋ, ನಮ್ಮ ಮೂಗಿನ ಉಸಿರಾದ ಆ ಯೆಹೋವ ದೇವರ ಅಭಿಷಿಕ್ತನು ಅವರ ಬಲೆಗಳಲ್ಲಿ ಸಿಕ್ಕಿಕೊಂಡನು.


ಹೀಗೆಯೇ ದಾವೀದನು ತನ್ನ ಜನರನ್ನು ಸೌಲನ ಮೇಲೆ ಬೀಳಗೊಡದೆ, ಈ ಮಾತುಗಳಿಂದ ಅವರನ್ನು ನಿಲ್ಲಿಸಿದನು. ಸೌಲನು ಎದ್ದು ಗವಿಯನ್ನು ಬಿಟ್ಟು, ಹೊರಗೆ ನಡೆದು ಹೋದನು.


ಇದಲ್ಲದೆ ನನ್ನ ತಂದೆಯೇ, ಇಲ್ಲಿ ನೋಡು! ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ತುಂಡನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ, ನಿನ್ನ ನಿಲುವಂಗಿಯ ಅಂಚನ್ನು ಮಾತ್ರ ಕತ್ತರಿಸಿಕೊಂಡದ್ದರಿಂದ, ನನ್ನಲ್ಲಿ ಕೆಟ್ಟತನವೂ, ದ್ರೋಹವೂ ಇಲ್ಲವೆಂದು ಇದು ಸೂಚಿಸುತ್ತಿದೆ; ನಾನು ನಿನಗೆ ವಿರೋಧವಾಗಿ ತಪ್ಪುಮಾಡಲಿಲ್ಲವೆಂದು ತಿಳಿದುಕೋ. ಹೀಗಿದ್ದರೂ, ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು