2 ಸಮುಯೇಲ 1:23 - ಕನ್ನಡ ಸಮಕಾಲಿಕ ಅನುವಾದ23 ಸೌಲನೂ ಯೋನಾತಾನನೂ ಜೀವದಿಂದಿದ್ದಾಗ ಪ್ರಿಯಕರವಾಗಿಯೂ, ಸಂತೋಷಕರವಾಗಿಯೂ ಇದ್ದರು. ತಮ್ಮ ಮರಣದಲ್ಲಿಯೂ ಅಗಲಿ ಹೋಗದೆ ಇದ್ದರು. ಅವರು ಹದ್ದುಗಳಿಗಿಂತ ವೇಗವುಳ್ಳವರೂ, ಸಿಂಹಗಳಿಗಿಂತ ಬಲವುಳ್ಳವರೂ ಆಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಸೌಲಯೋನಾತಾನರು ಪ್ರಿಯರೂ ಮನೋಹರರೂ ಆಗಿದ್ದರು. ಅವರು ಜೀವಿಸುವಾಗಲೂ ಸಾಯುವಾಗಲೂ ಅಗಲಿದವರಲ್ಲ. ಅವರು ಹದ್ದುಗಳಿಗಿಂತಲೂ ವೇಗವುಳ್ಳವರು, ಸಿಂಹಗಳಿಗಿಂತಲೂ ಬಲವುಳ್ಳವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಸೌಮ್ಯರು, ಅತಿಪ್ರಿಯರು, ಆ ಸೌಲ-ಯೋನಾತಾನರು ಬಾಳಿನಲು, ಸಾವಿನಲು ಬಿಟ್ಟಗಲದವರು. ಹದ್ದಿಗಿಂತ ಅಧಿಕ ವೇಗ ಅವರದು ಸಿಂಹಕ್ಕಿಂತ ಹೆಚ್ಚಿನ ಶಕ್ತಿ ಅವರದು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಸೌಲಯೋನಾತಾನರು ಪ್ರಿಯರೂ ಮನೋಹರರೂ ಆಗಿದ್ದರು; ಅವರು ಜೀವಿಸುವಾಗಲೂ ಸಾಯುವಾಗಲೂ ಅಗಲಿದವರಲ್ಲ. ಅವರು ಹದ್ದುಗಳಿಗಿಂತಲೂ ವೇಗವುಳ್ಳವರು; ಸಿಂಹಗಳಿಗಿಂತಲೂ ಬಲವುಳ್ಳವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 “ಸೌಲನು ಮತ್ತು ಯೋನಾತಾನನು ಒಬ್ಬರನ್ನೊಬ್ಬರು ಪ್ರೀತಿಸಿದರು; ತಮ್ಮ ಪರಸ್ಪರ ಜೀವಿತದಲ್ಲಿ ಆನಂದಿಸಿದರು. ಸೌಲನು ಮತ್ತು ಯೋನಾತಾನನು ಮರಣದಲ್ಲೂ ಒಂದಾದರು. ಅವರು ಹದ್ದುಗಳಿಗಿಂತ ವೇಗವಾಗಿ ಹೋದರು; ಸಿಂಹಗಳಿಗಿಂತ ಶಕ್ತಿಶಾಲಿಗಳಾಗಿದ್ದರು. ಅಧ್ಯಾಯವನ್ನು ನೋಡಿ |