Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 1:5 - ಕನ್ನಡ ಸಮಕಾಲಿಕ ಅನುವಾದ

5 ದಾವೀದನು ತನಗೆ ವರ್ತಮಾನ ಹೇಳಿದ ಯುವಕನಿಗೆ, “ಸೌಲನೂ, ಅವನ ಮಗ ಯೋನಾತಾನನೂ ಸತ್ತರೆಂದು ನಿನಗೆ ಹೇಗೆ ತಿಳಿಯಿತು?” ಎಂದು ಪ್ರಶ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದಾವೀದನು ಈ ವರ್ತಮಾನ ತಂದ ಆ ಪ್ರಾಯಸ್ಥನಿಗೆ “ಸೌಲನೂ ಅವನ ಮಗನಾದ ಯೋನಾತಾನನೂ ಸತ್ತಿರುವುದು ನಿನಗೆ ಹೇಗೆ ಗೊತ್ತಾಯಿತು” ಎಂದು ಪ್ರಶ್ನಿಸಲು ಅವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದಾವೀದನು ಈ ವರ್ತಮಾನ ತಂದ ಯುವಕನಿಗೆ, “ಸೌಲನೂ ಅವನ ಮಗ ಯೋನಾತಾನನೂ ಸತ್ತಿರುವುದು ನಿನಗೆ ಹೇಗೆ ಗೊತ್ತಾಯಿತು?” ಎಂದು ಪ್ರಶ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದಾವೀದನು ವರ್ತಮಾನತಂದ ಆ ಪ್ರಾಯಸ್ಥನಿಗೆ - ಸೌಲನೂ ಅವನ ಮಗನಾದ ಯೋನಾತಾನನೂ ಸತ್ತಿರುವದು ನಿನಗೆ ಹೇಗೆ ಗೊತ್ತಾಯಿತು ಎಂದು ಪ್ರಶ್ನಿಸಲು ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದಾವೀದನು ಆ ಯುವಕನಿಗೆ, “ಸೌಲನು ಮತ್ತು ಅವನ ಮಗನಾದ ಯೋನಾತಾನನು ಸತ್ತರೆಂದು ನಿನಗೆ ಹೇಗೆ ತಿಳಿಯಿತು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 1:5
4 ತಿಳಿವುಗಳ ಹೋಲಿಕೆ  

ವಿಷಯವನ್ನು ರಹಸ್ಯ ಮಾಡುವುದು ದೇವರ ಮಹಿಮೆ. ಒಂದು ವಿಷಯವನ್ನು ಹುಡುಕುವುದು ರಾಜರ ಮಹಿಮೆ.


ಅರಿವಿಲ್ಲದವರು ಯಾವ ಮಾತನ್ನಾದರೂ ನಂಬುತ್ತಾರೆ, ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.


ದಾವೀದನು ಅವನಿಗೆ, “ನಡೆದ ವರ್ತಮಾನವೇನು? ನೀನು ನನಗೆ ತಿಳಿಸು,” ಎಂದನು. ಅವನು, “ಜನರು ಯುದ್ಧದಿಂದ ಓಡಿಹೋದರು. ಜನರಲ್ಲಿ ಅನೇಕರು ಸತ್ತರು. ಸೌಲನೂ, ಅವನ ಮಗ ಯೋನಾತಾನನೂ ಸತ್ತರು,” ಎಂದನು.


ಆಗ ಅವನು, “ನಾನು ಅಕಸ್ಮಾತ್ತಾಗಿ ಗಿಲ್ಬೋವ ಬೆಟ್ಟಕ್ಕೆ ಹೋಗಿದ್ದೆನು. ಅಲ್ಲಿ ಸೌಲನು ತನ್ನ ಈಟಿಯನ್ನು ಊರಿಕೊಂಡು ನಿಂತಿದ್ದನು. ಆಗ ರಥಗಳೂ ರಾಹುತರೂ ಅವನನ್ನು ಹಿಂದಟ್ಟಿಕೊಂಡೇ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು