Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 1:8 - ಕನ್ನಡ ಸಮಕಾಲಿಕ ಅನುವಾದ

8 “ಆಗ ಅವನು, ‘ನೀನ್ಯಾರು?’ ಎಂದು ಕೇಳಿದನು. “ ‘ನಾನು ಒಬ್ಬ ಅಮಾಲೇಕ್ಯನು,’ ಎಂದು ಉತ್ತರಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು, ‘ಇಗೋ ಬಂದೆನು’ ಎಂದು ಹೇಳಿ ಹೋದಾಗ ಅವನು ‘ನೀನಾರು?’ ಎಂದು ಕೇಳಿದ್ದಕ್ಕೆ, ‘ನಾನು ಅಮಾಲೇಕ್ಯನು’ ಎಂದು ಉತ್ತರಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಾನು, “ಇಗೋ ಬಂದೆ,” ಎಂದು ಹೇಳಿ ಹತ್ತಿರಕ್ಕೆ ಹೋದಾಗ ಅವರು, “ನೀನಾರು?” ಎಂದು ಕೇಳಿದ್ದಕ್ಕೆ, ‘ನಾನು ಒಬ್ಬ ಅಮಾಲೇಕ್ಯ’ ಎಂದು ಉತ್ತರಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು - ಇಗೋ, ಬಂದೆನು ಎಂದು ಹೇಳಿ ಹೋದಾಗ ಅವನು - ನೀನಾರು ಎಂದು ಕೇಳಿದ್ದಕ್ಕೆ - ಅಮಾಲೇಕ್ಯನೆಂದು ಉತ್ತರ ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಂತರ ಸೌಲನು, ‘ನೀನು ಯಾರು?’ ಎಂದು ಕೇಳಿದನು. ‘ನಾನೊಬ್ಬ ಅಮಾಲೇಕ್ಯನು’ ಎಂದು ನಾನು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 1:8
12 ತಿಳಿವುಗಳ ಹೋಲಿಕೆ  

ಆಗ ದಾವೀದನು ಅವರ ಮೇಲೆ ಬೆಳಗಿನಜಾವದಿಂದ ಮಾರನೆಯ ದಿವಸದ ಸಾಯಂಕಾಲದವರೆಗೂ ದಾಳಿಮಾಡುತ್ತಾ ಇದ್ದನು. ಆದರೆ ಅವರಲ್ಲಿ ಒಂಟೆಗಳ ಮೇಲೆ ಏರಿ ಓಡಿ ಹೋದ ನಾನೂರು ಮಂದಿ ಯುವಜನರ ಹೊರತು ಒಬ್ಬನಾದರೂ ತಪ್ಪಿಸಿಕೊಳ್ಳಲಿಲ್ಲ.


ದಾವೀದನು ಅವನನ್ನು, “ನೀನು ಯಾರ ಕಡೆಯವನು? ನೀನು ಎಲ್ಲಿಯವನು?” ಎಂದು ಕೇಳಿದನು. ಅವನು, “ನಾನು ಈಜಿಪ್ಟಿನವನು, ಒಬ್ಬ ಅಮಾಲೇಕ್ಯನ ಸೇವಕನು. ಮೂರು ದಿನಗಳಿಂದ ನಾನು ರೋಗದಲ್ಲಿ ಬಿದ್ದುದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು.


ದಾವೀದನೂ, ಅವನ ಜನರೂ ಮೂರನೆಯ ದಿವಸದಲ್ಲಿ ಚಿಕ್ಲಗ್ ಊರಿಗೆ ಬಂದು ಸೇರಿದರು. ಅಮಾಲೇಕ್ಯರು ದಕ್ಷಿಣ ಸೀಮೆಯ ಮೇಲೆಯೂ, ಚಿಕ್ಲಗಿನ ಮೇಲೆಯೂ ಆಕ್ರಮಿಸಿ ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟರು.


ಈಗ ನೀನು ಹೋಗಿ ಅಮಾಲೇಕ್ಯರನ್ನು ಹೊಡೆದು, ಅವರಿಗೆ ಉಂಟಾದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿಬಿಟ್ಟು, ಅವರನ್ನು ಕನಿಕರಿಸದೆ ಪುರುಷರನ್ನೂ, ಸ್ತ್ರೀಯರನ್ನೂ, ಚಿಕ್ಕವರನ್ನೂ, ಹಸುಗೂಸುಗಳನ್ನೂ, ದನಗಳನ್ನೂ, ಕುರಿಗಳನ್ನೂ, ಒಂಟೆಗಳನ್ನೂ, ಕತ್ತೆಗಳನ್ನೂ ಕೊಂದುಹಾಕು,’ ” ಎಂಬದು.


ದಾವೀದನೂ, ಅವನ ಜನರೂ ಶೂರಿಗೆ ಹೋಗುವ ಮೇರೆಯಿಂದ ಈಜಿಪ್ಟಿನವರೆಗೂ ಇರುವ ಸೀಮೆಯಲ್ಲಿ ಪೂರ್ವದಿಂದ ವಾಸಿಸಿರುವವರಾದ ಗೆಷೂರ್ಯರ ಮೇಲೆಯೂ ಗಿಜ್ರೀಯರ ಮೇಲೆಯೂ ಅಮಾಲೇಕ್ಯರ ಮೇಲೆಯೂ ದಂಡೆತ್ತಿ ಹೋದರು.


ಅನಂತರ ಬಿಳಾಮನು ಅಮಾಲೇಕ್ಯರನ್ನು ನೋಡಿ ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಜನಾಂಗಗಳಲ್ಲಿ ಮೊದಲನೆಯವನೇ ಅಮಾಲೇಕ್ಯನು, ಆದರೆ ಅವನು ಕೊನೆಗೆ ನಾಶವಾಗುವನು.”


ಅವರು ಹಿಂದಿರುಗಿ ಕಾದೇಶ್ ಎಂಬ ಎನ್ಮಿಷ್ಪಾಟಿಗೆ ಬಂದು, ಅಮಾಲೇಕ್ಯರ ಎಲ್ಲಾ ಬಯಲನ್ನು ಹಜಜೋನ್ ತಾಮಾರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಜಯಿಸಿದರು.


ಅವನು ಹಿಂದಕ್ಕೆ ತಿರುಗಿ ನೋಡಿ, ನನ್ನನ್ನು ಕಂಡು ಕರೆದನು. ಆಗ ನಾನು, ‘ಇದ್ದೇನೆ,’ ಎಂದೆನು.


“ಅವನು ನನಗೆ, ‘ನೀನು ದಯಮಾಡಿ ನನ್ನ ಮೇಲೆ ನಿಂತು ನನ್ನನ್ನು ಕೊಂದುಹಾಕು. ಏಕೆಂದರೆ ನನ್ನ ಪ್ರಾಣವು ಇನ್ನೂ ನನ್ನಲ್ಲಿ ಪೂರ್ಣವಾಗಿರುವುದರಿಂದ ಸಂಕಟವು ನನ್ನನ್ನು ಹಿಡಿದಿದೆ,’ ಎಂದನು.


ದಾವೀದನು ತನಗೆ ವರ್ತಮಾನ ತಿಳಿಸಿದ ಯುವಕನನ್ನು, “ನೀನು ಎಲ್ಲಿಯವನು?” ಎಂದು ಕೇಳಿದನು. ಅವನು, “ನಾನು ವಿದೇಶಿಯ ಮಗನಾದ ಅಮಾಲೇಕ್ಯನು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು