Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 10:16 - ಕನ್ನಡ ಸಮಕಾಲಿಕ ಅನುವಾದ

16 ಹದದೆಜೆರನು ನದಿಯ ಆಚೆಯಲ್ಲಿರುವ ಇತರ ಅರಾಮ್ಯರನ್ನು ಕರೆಯಿಸಿಕೊಂಡದ್ದರಿಂದ ಅವರು ಹೆಲಾಮಿಗೆ ಬಂದರು. ಹದದೆಜೆರನ ಸೇನಾಧಿಪತಿಯಾದ ಶೋಬಕನು ಅವರ ನಾಯಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹದದೆಜೆರನು ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅರಾಮ್ಯರನ್ನು ಬರಲು ಹೇಳಿ ಕಳುಹಿಸಿದನು. ಅವರು ಹೇಲಾಮಿಗೆ ಬಂದರು. ಹದದೆಜೆರನ ಸೇನಾಧಿಪತಿಯಾದ ಶೋಬಕನು ಅವರ ನಾಯಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಹದದೆಜೆರನು ಯೂಫ್ರಟಿಸ್ ನದಿಯ ಆಚೆಯಲ್ಲಿದ್ದ ಸಿರಿಯಾದವರನ್ನು ಬರಮಾಡಿದನು; ಅವರು ಹೇಲಾಮಿಗೆ ಬಂದರು. ಹದದೆಜೆರನ ಸೇನಾಪತಿಯಾದ ಶೋಬಕನು ಅವರ ನಾಯಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಹದದೆಜೆರನು ಯೂಫ್ರೇಟೀಸ್ ನದಿಯ ಆಚೆಯಲ್ಲಿದ್ದ ಅರಾಮ್ಯರನ್ನು ಕರೇಕಳುಹಿಸಿದನು; ಅವರು ಹೇಲಾವಿುಗೆ ಬಂದರು. ಹದದೆಜೆರನ ಸೇನಾಪತಿಯಾದ ಶೋಬಕನು ಅವರ ನಾಯಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೂಫ್ರೇಟೀಸ್ ನದಿಯ ಮತ್ತೊಂದು ತೀರದಲ್ಲಿ ವಾಸಿಸುತ್ತಿದ್ದ ಅರಾಮ್ಯರನ್ನು ಕರೆತರಲು ಹದದೆಜೆರನು ಸಂದೇಶಕರನ್ನು ಕಳುಹಿಸಿದನು. ಈ ಅರಾಮ್ಯರು ಹೇಲಾಮಿಗೆ ಬಂದರು. ಹದದೆಜೆರನ ಸೇನಾಪತಿಯಾದ ಶೋಬಕನು ಅವರ ನಾಯಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 10:16
7 ತಿಳಿವುಗಳ ಹೋಲಿಕೆ  

ಅರಾಮ್ಯರಿಗೆ ತಾವು ಇಸ್ರಾಯೇಲರಿಂದ ಸೋತುಹೋದೆವೆಂದು ತಿಳಿದಾಗ, ಅವರು ದೂತರನ್ನು ಕಳುಹಿಸಿ, ಯೂಫ್ರೇಟೀಸ್ ನದಿಯ ಆಚೆಯಲ್ಲಿರುವ ಇತರ ಅರಾಮ್ಯರನ್ನು ಕರೆಯಿಸಿಕೊಂಡರು. ಹದದೆಜೆರನ ಸೇನಾಧಿಪತಿಯಾದ ಶೋಫಕನು ಅವರ ನಾಯಕನಾದನು.


ದಮಸ್ಕದ ಅರಾಮ್ಯರು ಚೋಬದ ಅರಸ ಹದದೆಜೆರನಿಗೆ ಸಹಾಯಮಾಡಲು ಬಂದಾಗ, ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಸಂಹರಿಸಿಬಿಟ್ಟನು.


ಇದಲ್ಲದೆ ದಾವೀದನು ಯೂಫ್ರೇಟೀಸ್ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಾಪಿಸುವದಕ್ಕೆ ಹೋಗುತ್ತಿರುವಾಗ, ಹಮಾತಿನ ಬಳಿಯಲ್ಲಿ ಚೋಬದ ಅರಸನಾದ ಹದದೆಜೆರನನ್ನು ಸೋಲಿಸಿದನು.


ಅರಾಮ್ಯರಿಗೆ ತಾವು ಇಸ್ರಾಯೇಲರಿಂದ ಸೋತುಹೋದೆವೆಂದು ತಿಳಿದಾಗ, ಅವರೆಲ್ಲರು ಒಟ್ಟಾಗಿ ಕೂಡಿಬಂದರು.


ಅದನ್ನು ದಾವೀದನಿಗೆ ತಿಳಿಸಿದಾಗ, ಅವನು ಸಮಸ್ತ ಇಸ್ರಾಯೇಲರನ್ನು ಕೂಡಿಸಿಕೊಂಡು, ಯೊರ್ದನನ್ನು ದಾಟಿ ಹೆಲಾಮಿಗೆ ಬಂದನು. ಅರಾಮ್ಯರು ದಾವೀದನಿಗೆದುರಾಗಿ ವ್ಯೂಹ ಕಟ್ಟಿ ಯುದ್ಧಮಾಡಿದರು.


ಇದಲ್ಲದೆ ದೇವರು ಮತ್ತೊಬ್ಬ ಶತ್ರುವನ್ನು ಸೊಲೊಮೋನನ ಮೇಲೆ ಎಬ್ಬಿಸಿದರು. ಅವನು ಚೋಬದ ಅರಸನಾದ ತನ್ನ ಯಜಮಾನನಾಗಿರುವ ಹದದೆಜೆರನನ್ನು ಬಿಟ್ಟು ಓಡಿ ಹೋದ ಎಲ್ಯಾದಾವನ ಮಗನಾದ ರೆಜೋನನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು