Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 10:18 - ಕನ್ನಡ ಸಮಕಾಲಿಕ ಅನುವಾದ

18 ಆಗ ಅರಾಮ್ಯರು ಇಸ್ರಾಯೇಲರ ಎದುರಿನಿಂದ ಓಡಿದರು. ದಾವೀದನು ಅರಾಮ್ಯರಲ್ಲಿ ಏಳು ನೂರು ರಥಗಳನ್ನೂ ಹಾಳು ಮಾಡಿ, ನಲವತ್ತು ಸಾವಿರ ಕಾಲಾಳುಗಳನ್ನೂ ಕೊಂದು, ಅವರ ಸೇನಾಧಿಪತಿಯಾದ ಶೋಬಕನನ್ನು ಹೊಡೆದನು; ಅವನು ಅಲ್ಲಿಯೇ ಮರಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅರಾಮ್ಯರು ಇಸ್ರಾಯೇಲ್ಯರ ಮುಂದೆ ಸೋತು ಓಡಿಹೋದರು. ದಾವೀದನು ಅರಾಮ್ಯರ ಏಳುನೂರು ರಥ ಸಾರಥಿಗಳನ್ನು ನಾಶ ಮಾಡಿ, ನಲ್ವತ್ತು ಸಾವಿರ ಮಂದಿ ರಾಹುತರನ್ನು ಹತ್ಯೆಮಾಡಿದನು. ಸೇನಾಧಿಪತಿಯಾದ ಶೋಬಕನು ಗಾಯಗೊಂಡು ಅಲ್ಲೇ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆದರೆ ಇಸ್ರಯೇಲರ ಮುಂದೆ ಸೋತು ಓಡಿಹೋದರು; ದಾವೀದನು ಸಿರಿಯಾದವರ ಏಳುನೂರು ರಥಗಳನ್ನು ಹಾಳುಮಾಡಿದನು. ನಾಲ್ವತ್ತು ಸಾವಿರ ಮಂದಿ ರಾಹುತರನ್ನು ಕೊಂದನು. ಸೇನಾಪತಿಯಾದ ಶೋಬಕನು ಗಾಯಗೊಂಡು ಅಲ್ಲೇ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇಸ್ರಾಯೇಲ್ಯರ ಮುಂದೆ ಸೋತು ಓಡಿಹೋದರು; ದಾವೀದನು ಅರಾಮ್ಯರ ಏಳುನೂರು ರಥಗಳನ್ನು ಹಾಳುಮಾಡಿ ನಾಲ್ವತ್ತು ಸಾವಿರ ಮಂದಿ ರಾಹುತರನ್ನು ಹತಿಸಿಬಿಟ್ಟನು; ಸೇನಾಪತಿಯಾದ ಶೋಬಕನು ಗಾಯಹೊಂದಿ ಅಲ್ಲೇ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದರೆ ದಾವೀದನು ಅರಾಮ್ಯರನ್ನು ಸೋಲಿಸಿದನು. ಅರಾಮ್ಯರು ಇಸ್ರೇಲರನ್ನು ಬಿಟ್ಟು ಓಡಿಹೋದರು. ದಾವೀದನು ಅರಾಮ್ಯರ ಏಳು ನೂರು ಮಂದಿ ರಥದ ಸಾರಥಿಯರನ್ನೂ ನಲವತ್ತು ಸಾವಿರ ಮಂದಿ ರಾಹುತರನ್ನೂ ಕೊಂದುಹಾಕಿದನು. ಅರಾಮ್ಯರ ಸೇನಾಪತಿಯಾದ ಶೋಬಕನನ್ನು ಸಹ ದಾವೀದನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 10:18
10 ತಿಳಿವುಗಳ ಹೋಲಿಕೆ  

ಆದರೆ ಅರಾಮ್ಯರು ಇಸ್ರಾಯೇಲರ ಎದುರಿನಿಂದ ಓಡಿದರು. ದಾವೀದನು ಅರಾಮ್ಯರಲ್ಲಿ ಏಳು ಸಾವಿರ ರಥಗಳನ್ನೂ ಹಾಳು ಮಾಡಿ, ನಲವತ್ತು ಸಾವಿರ ಕಾಲಾಳುಗಳನ್ನೂ, ಅವರ ಸೇನಾಧಿಪತಿಯಾದ ಶೋಫಕನನ್ನೂ ಕೊಂದುಹಾಕಿದನು.


ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ; ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ.


ಏಳಲಾರದಂತೆ ಅವರನ್ನು ತುಳಿದುಬಿಟ್ಟೆನು; ಅವರು ನನ್ನ ಪಾದಗಳ ಕೆಳಗೆ ಬಿದ್ದರು.


ದಾವೀದನು ಅವನಿಂದ ಸಾವಿರ ರಥಗಳನ್ನೂ, ಏಳು ಸಾವಿರ ರಾಹುತರನ್ನೂ, ಇಪ್ಪತ್ತು ಸಾವಿರ ಕಾಲಾಳುಗಳನ್ನೂ ವಶಪಡಿಸಿಕೊಂಡನು. ನೂರು ರಥಗಳಿಗೆ ಕುದುರೆಗಳನ್ನು ಉಳಿಸಿ, ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ಯಿಸಿಬಿಟ್ಟನು.


ತನ್ನ ಕೈಯಲ್ಲಿ ಮೊಳೆಯನ್ನೂ, ತನ್ನ ಬಲಗೈಯಲ್ಲಿ ಕೆಲಸಗಾರನ ಸುತ್ತಿಗೆಯನ್ನೂ ತೆಗೆದುಕೊಂಡಳು. ಸುತ್ತಿಗೆಯಿಂದ ಸೀಸೆರನನ್ನು ಅವಳು ಹೊಡೆದಳು. ಅವಳು ಅವನ ತಲೆಯನ್ನು ತಿವಿದು ಹೊಡೆದಳು. ಅವನ ತಲೆಯನ್ನು ಹೊಡೆದು ಬಿಟ್ಟಳು.


ಸೀಸೆರನನ್ನು ಹಿಂದಟ್ಟುವ ಬಾರಾಕನು ಬಂದನು. ಆಗ ಯಾಯೇಲಳು ಅವನನ್ನು ಎದುರುಗೊಳ್ಳುವುದಕ್ಕೆ ಹೊರಟುಹೋಗಿ ಅವನಿಗೆ, “ಬಾ, ನೀನು ಹುಡುಕುವ ಮನುಷ್ಯನನ್ನು ನಾನು ನಿನಗೆ ತೋರಿಸುವೆನು,” ಎಂದು ಹೇಳಿದಳು. ಬಾರಾಕನು ಅವಳ ಬಳಿಗೆ ಬಂದಾಗ, ಸೀಸೆರನು ಮರಣಹೊಂದಿದ್ದನು. ಮೊಳೆಯು ಅವನ ತಲೆಯಲ್ಲಿ ಹೊಡೆದಿತ್ತು.


ಆದ್ದರಿಂದ ಯೆಹೋವ ದೇವರು ಅವರನ್ನು ಹಾಚೋರಿನಲ್ಲಿ ಆಳುವ ಕಾನಾನಿನ ಅರಸನಾದ ಯಾಬೀನನ ಕೈಗೆ ಮಾರಿಬಿಟ್ಟರು. ಅವನ ಸೈನ್ಯಕ್ಕೆ ಜನಾಂಗಗಳ ಪಟ್ಟಣವಾದ ಹರೋಷೆತ್ ಹಗ್ಗೊಯಿಮ್‌ನಲ್ಲಿ ವಾಸವಾಗಿರುವ ಸೀಸೆರನು ಅಧಿಪತಿಯಾಗಿದ್ದನು.


ಅದನ್ನು ದಾವೀದನಿಗೆ ತಿಳಿಸಿದಾಗ, ಅವನು ಸಮಸ್ತ ಇಸ್ರಾಯೇಲರನ್ನು ಕೂಡಿಸಿಕೊಂಡು, ಯೊರ್ದನನ್ನು ದಾಟಿ ಹೆಲಾಮಿಗೆ ಬಂದನು. ಅರಾಮ್ಯರು ದಾವೀದನಿಗೆದುರಾಗಿ ವ್ಯೂಹ ಕಟ್ಟಿ ಯುದ್ಧಮಾಡಿದರು.


ದಾವೀದನು ಚೋಬದ ಜನರನ್ನು ಸಂಹರಿಸುವಾಗ ಇವನು ಜನರನ್ನು ತನ್ನ ಬಳಿಯಲ್ಲಿ ಕೂಡಿಸಿಕೊಂಡು ಒಂದು ಗುಂಪಿಗೆ ಅಧಿಪತಿಯಾಗಿ ಅವರ ಸಂಗಡ ದಮಸ್ಕಕ್ಕೆ ಹೋಗಿ ಅಲ್ಲಿ ವಾಸಿಸಿ, ಅರಸನಾದನು.


ಗಾಳಿಯಿಂದ ಹೊಗೆ ಹಾರಿಹೋಗುವಂತೆ ಅವರು ಹಾರಿಹೋಗಲಿ. ಮೇಣವು ಬೆಂಕಿಯ ಮುಂದೆ ಕರಗುವಂತೆ, ದುಷ್ಟರು ದೇವರ ಮುಂದೆ ನಾಶವಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು