2 ಸಮುಯೇಲ 10:19 - ಕನ್ನಡ ಸಮಕಾಲಿಕ ಅನುವಾದ19 ಹದದೆಜೆರನ ಸೇವಕರಾದ ಸಮಸ್ತ ಅರಸರು ತಾವು ಇಸ್ರಾಯೇಲರ ಮುಂದೆ ಸೋತುಹೋದದ್ದನ್ನು ಕಂಡಾಗ, ಅವರು ಇಸ್ರಾಯೇಲರ ಸಂಗಡ ಸಂಧಾನ ಮಾಡಿಕೊಂಡು ಅವರಿಗೆ ಅಧೀನರಾದರು. ತರುವಾಯ ಅರಾಮ್ಯರು ಅಮ್ಮೋನಿಯರಿಗೆ ಮತ್ತೆ ಸಹಾಯ ಮಾಡುವುದಕ್ಕೆ ಭಯಪಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಹದದೆಜೆರನಿಗೆ ದಾಸರಾಗಿದ್ದ ಅರಸರೆಲ್ಲರೂ ಇಸ್ರಾಯೇಲ್ಯರಿಂದ ತಾವು ಸೋತುಹೋದೆವೆಂದು ತಿಳಿದು, ಅವರೊಡನೆ ಒಪ್ಪಂದ ಮಾಡಿಕೊಂಡು, ಅವರಿಗೆ ದಾಸರಾದರು. ಅಂದಿನಿಂದ ಅರಾಮ್ಯರು ಅಮ್ಮೋನಿಯರಿಗೆ ಸಹಾಯಮಾಡುವುದಕ್ಕೆ ಧೈರ್ಯದಿಂದ ಮುಂದೆ ಬರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಹದದೆಜೆರನಿಗೆ ದಾಸರಾಗಿದ್ದ ರಾಜರೆಲ್ಲರೂ ಇಸ್ರಯೇಲರ ಮುಂದೆ ತಮ್ಮ ಕೈಸಾಗದೆಂದು ತಿಳಿದು ಅವರೊಡನೆ ಸಂಧಾನ ಮಾಡಿಕೊಂಡು ಅವರ ಅಧೀನರಾದರು. ಅಂದಿನಿಂದ ಸಿರಿಯಾದವರು ಅಮ್ಮೋನಿಯರಿಗೆ ಸಹಾಯ ಮಾಡುವುದಕ್ಕೆ ಧೈರ್ಯಗೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಹದದೆಜೆರನಿಗೆ ದಾಸರಾಗಿದ್ದ ಅರಸರೆಲ್ಲರೂ ಇಸ್ರಾಯೇಲ್ಯರ ಮುಂದೆ ತಮ್ಮ ಕೈಸಾಗದೆಂದು ತಿಳಿದು ಅವರೊಡನೆ ಒಪ್ಪಂದಮಾಡಿಕೊಂಡು ಅವರ ದಾಸರಾದರು. ಅಂದಿನಿಂದ ಅರಾಮ್ಯರು ಅಮ್ಮೋನಿಯರಿಗೆ ಸಹಾಯ ಮಾಡುವದಕ್ಕೆ ಧೈರ್ಯಗೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಹದದೆಜೆರನ ಸೇವೆಯಲ್ಲಿದ್ದ ರಾಜರಿಗೆ ಇಸ್ರೇಲರು ತಮ್ಮನ್ನು ಸೋಲಿಸಿದುದು ತಿಳಿದುಬಂತು. ಆದುದರಿಂದ ಅವರು ಇಸ್ರೇಲರೊಂದಿಗೆ ಶಾಂತಿಸಂಧಾನ ಮಾಡಿಕೊಂಡು ಅವರ ಸೇವಕರಾದರು. ಅಂದಿನಿಂದ ಅಮ್ಮೋನಿಯರಿಗೆ ಮತ್ತೆ ಸಹಾಯಮಾಡಲು ಅರಾಮ್ಯರು ಭಯಗೊಂಡರು. ಅಧ್ಯಾಯವನ್ನು ನೋಡಿ |