Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 10:3 - ಕನ್ನಡ ಸಮಕಾಲಿಕ ಅನುವಾದ

3 ಆಗ ಅಮ್ಮೋನಿಯರ ಪ್ರಧಾನರು ತಮ್ಮ ಯಜಮಾನನಾದ ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತಾಪ ಸೂಚಿಸುವವರನ್ನು ಕಳುಹಿಸಿದ್ದರಿಂದ, ನಿನ್ನ ತಂದೆಯನ್ನು ಘನಪಡಿಸುತ್ತಾನೆಂದು ಯೋಚಿಸುತ್ತೀಯೋ? ದಾವೀದನು ತನ್ನ ಸೇವಕರನ್ನು ಈ ಪಟ್ಟಣವನ್ನು ಸಂಚರಿಸಿ ನೋಡುವುದಕ್ಕೂ ಶೋಧಿಸುವುದಕ್ಕೂ ಅದನ್ನು ಕೆಡವಿ ಹಾಕುವುದಕ್ಕೂ ನಿನ್ನ ಬಳಿಗೆ ಕಳುಹಿಸಿದ್ದಾನಲ್ಲವೇ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅಮ್ಮೋನಿಯರ ರಾಜ ಪ್ರತಿನಿಧಿಗಳು ತಮ್ಮ ಒಡೆಯನಾದ ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದರಿಂದ ಅವನು ನಿನ್ನ ತಂದೆಯನ್ನು ಸನ್ಮಾನಿಸುವವನು ಎಂದು ನೀನು ತಿಳಿದುಕೊಂಡಿರಬಹುದೋ? ಅವರು ಪಟ್ಟಣವನ್ನು ಸಂಚರಿಸಿ ನೋಡಿ, ಸ್ವಾಧಿನಮಾಡಿಕೊಳ್ಳಬೇಕೆಂದು ತನ್ನ ಪ್ರತಿನಿಧಿಗಳನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅಲ್ಲಿನ ನಾಯಕರು ತಮ್ಮ ಒಡೆಯ ಹಾನೂನನಿಗೆ, “ದಾವೀದನು ನಿಮ್ಮ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದಾನೆ. ಇದರಿಂದ ಅವನು ನಿಮ್ಮ ತಂದೆಯನ್ನು ಸನ್ಮಾನಿಸುತ್ತಾನೆಂದು ತಿಳಿಯುತ್ತೀರೋ? ಇಲ್ಲವೇ ಇಲ್ಲ. ಪಟ್ಟಣವನ್ನು ಸಂಚರಿಸಿ ನೋಡಿ ಅದನ್ನು ಸ್ವಾಧೀನಮಾಡಿಕೊಳ್ಳಬೇಕೆಂದು ತನ್ನ ಆಳುಗಳನ್ನು ಕಳುಹಿಸಿದ್ದಾನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅಲ್ಲಿನ ಪ್ರಭುಗಳು ತಮ್ಮ ಒಡೆಯನಾದ ಹಾನೂನನಿಗೆ - ದಾವೀದನು ನಿನ್ನ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದರಿಂದ ಅವನು ನಿನ್ನ ತಂದೆಯನ್ನು ಸನ್ಮಾನಿಸುವವನಾಗಿದ್ದಾನೆಂದು ತಿಳಿಯುತ್ತೀಯೋ? ಪಟ್ಟಣವನ್ನು ಸಂಚರಿಸಿ ನೋಡಿ ಅದನ್ನು ಸ್ವಾಧೀನ ಮಾಡಿಕೊಳ್ಳಬೇಕೆಂದು ತನ್ನ ಆಳುಗಳನ್ನು ಕಳುಹಿಸಿದ್ದಾನೆ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ಅಮ್ಮೋನಿಯರ ನಾಯಕರು ತಮ್ಮ ಪ್ರಭುವಾದ ಹಾನೂನನಿಗೆ, “ನಿನ್ನನ್ನು ಸಂತೈಸಲು ಕೆಲವು ಜನರನ್ನು ಕಳುಹಿಸುವುದರ ಮೂಲಕ ದಾವೀದನು ನಿನ್ನ ತಂದೆಯನ್ನು ಗೌರವಿಸಲು ಪ್ರಯತ್ನಿಸುತ್ತಿರುವನೆಂದು ನೀನು ಭಾವಿಸಿರುತ್ತಿಯಲ್ಲವೇ? ಇಲ್ಲ! ನಿನ್ನ ನಗರದ ಸಂಗತಿಗಳನ್ನು ರಹಸ್ಯವಾಗಿ ಕಂಡುಕೊಳ್ಳಲು ಮತ್ತು ತಿಳಿದುಕೊಳ್ಳಲು ದಾವೀದನು ಈ ಜನರನ್ನು ಕಳುಹಿಸಿದ್ದಾನೆ. ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡಲು ಯೋಜನೆ ಮಾಡುತ್ತಿದ್ದಾರೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 10:3
6 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿಂದ ಒಬ್ಬನನ್ನು ಕಳುಹಿಸಿರಿ, ಅವನು ನಿಮ್ಮ ಸಹೋದರನನ್ನು ಕರೆದುಕೊಂಡು ಬರಲಿ. ಆದರೆ ನೀವು ಸೆರೆಮನೆಯಲ್ಲಿರಬೇಕು. ಹೀಗೆ ನಿಮ್ಮಲ್ಲಿ ಸತ್ಯವು ಉಂಟೋ, ಇಲ್ಲವೋ ಎಂದು ನಿಮ್ಮ ಮಾತುಗಳನ್ನು ಪರೀಕ್ಷಿಸುತ್ತೇನೆ. ಇಲ್ಲದಿದ್ದರೆ, ಫರೋಹನ ಜೀವದಾಣೆ ನಿಶ್ಚಯವಾಗಿ ನೀವು ಗೂಢಚಾರರು,” ಎಂದು ಹೇಳಿದನು.


ಆಗ ಯೋಸೇಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದರೂ ಆಗ ಯೋಸೇಫನು ತಾನು ಅವರ ವಿಷಯದಲ್ಲಿ ಕಂಡ ಕನಸುಗಳನ್ನು ಜ್ಞಾಪಕಮಾಡಿಕೊಂಡು ಅವರಿಗೆ, “ನೀವು ಗೂಢಚಾರರು, ದೇಶದ ಒಳಗುಟ್ಟನ್ನು ನೋಡುವುದಕ್ಕೆ ಬಂದಿದ್ದೀರಿ,” ಎಂದನು.


ಯಾವಾಗಲೂ ಸಂರಕ್ಷಿಸುತ್ತದೆ, ಯಾವಾಗಲೂ ನಂಬುತ್ತದೆ, ಯಾವಾಗಲೂ ನಿರೀಕ್ಷಿಸುತ್ತದೆ, ಯಾವಾಗಲೂ ಸಹಿಸಿಕೊಳ್ಳುತ್ತದೆ.


ಪ್ರೀತಿಯು ಇತರರನ್ನು ಅವಮಾನಪಡಿಸುವುದಿಲ್ಲ, ಸ್ವಹಿತವನ್ನೇ ಹುಡುಕುವುದಿಲ್ಲ, ಸುಲಭವಾಗಿ ಸಿಟ್ಟುಗೊಳ್ಳುವುದಿಲ್ಲ, ಅಪಕಾರವನ್ನು ಎಣಿಸುವುದಿಲ್ಲ,


ಆಗ ಅಮ್ಮೋನಿಯರ ಪ್ರಧಾನರು ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತಾಪ ಸೂಚಿಸುವವರನ್ನು ಕಳುಹಿಸಿದ್ದರಿಂದ, ನಿನ್ನ ತಂದೆಯನ್ನು ಘನಪಡಿಸುತ್ತಾನೆಂದು ಯೋಚಿಸುತ್ತೀಯೋ? ಅವನ ದೂತರು ಈ ದೇಶವನ್ನು ಸಂಚರಿಸಿ ನೋಡುವುದಕ್ಕೂ ಶೋಧಿಸುವುದಕ್ಕೂ ಅದನ್ನು ಕೆಡವಿ ಹಾಕುವುದಕ್ಕೂ ನಿನ್ನ ಬಳಿಗೆ ಬರಲಿಲ್ಲವೋ?” ಎಂದರು.


ನೇರನ ಮಗ ಅಬ್ನೇರನನ್ನು ನೀನು ಅರಿತಿದ್ದಿಯಲ್ಲಾ. ನಿಶ್ಚಯವಾಗಿ ಅವನು ನಿನ್ನನ್ನು ಮೋಸಗೊಳಿಸಲು ನಿನ್ನ ಆಗಮನ, ನಿರ್ಗಮನಗಳನ್ನು ತಿಳಿದುಕೊಳ್ಳುವುದಕ್ಕೂ, ನೀನು ಮಾಡುವುದನ್ನೆಲ್ಲಾ ಕಂಡುಹಿಡಿಯುವುದಕ್ಕೂ ಬಂದಿದ್ದನು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು