2 ಸಮುಯೇಲ 10:8 - ಕನ್ನಡ ಸಮಕಾಲಿಕ ಅನುವಾದ8 ಆಗ ಅಮ್ಮೋನಿಯರು ಹೊರಟು ಪಟ್ಟಣದ ದ್ವಾರದ ಹತ್ತಿರ ವ್ಯೂಹ ಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬಿನಿಂದಲೂ ಟೋಬಿನಿಂದಲೂ ಮಾಕಾನಿಂದಲೂ ಬಂದ ಅರಾಮ್ಯರು ಪ್ರತ್ಯೇಕವಾಗಿ ಬೈಲಿನಲ್ಲಿ ಇಳಿದುಕೊಂಡಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರ ಬಾಗಿಲಿನ ಬಳಿಯಲ್ಲಿ ವ್ಯೂಹರಚಿಸಿದರು. ಚೋಬ, ರೆಹೋಬ್ ಎಂಬ ಸ್ಥಳಗಳ ಅರಾಮ್ಯರೂ ಟೋಬ್ ಮತ್ತು ಮಾಕಾ ದೇಶಗಳವರೂ ಪ್ರತ್ಯೇಕವಾಗಿ ಮೈದಾನದಲ್ಲಿ ಇಳಿದುಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರಬಾಗಿಲಿನ ಬಳಿಯಲ್ಲೆ ವ್ಯೂಹಕಟ್ಟಿದರು. ಚೋಬಾ ಮತ್ತು ರೆಹೋಬ್ ಎಂಬ ಸ್ಥಳಗಳ ಸಿರಿಯಾದವರೂ ಟೋಬ್, ಮಾಕಾ ದೇಶಗಳವರೂ ಪ್ರತ್ಯೇಕವಾಗಿ ಮೈದಾನದಲ್ಲಿ ಇಳಿದುಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರುಬಾಗಲಿನ ಬಳಿಯಲ್ಲಿ ವ್ಯೂಹಕಟ್ಟಿದರು. ಚೋಬಾ, ರೆಹೋಬ್ ಎಂಬ ಸ್ಥಳಗಳ ಅರಾಮ್ಯರೂ ಟೋಬ್ ಮಾಕಾ ದೇಶಗಳವರೂ ಪ್ರತ್ಯೇಕವಾಗಿ ಮೈದಾನದಲ್ಲಿ ಇಳುಕೊಂಡಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅಮ್ಮೋನಿಯರು ಹೊರಗೆ ಬಂದು ಯುದ್ಧಕ್ಕೆ ಸಿದ್ಧರಾದರು. ಅವರು ನಗರದ ಬಾಗಿಲಿನಲ್ಲಿ ನಿಂತರು. ಚೋಬಾ ಮತ್ತು ರೆಹೋಬ್‌ಗಳ ಅರಾಮ್ಯರು, ಟೋಬ್ ಮತ್ತು ಮಾಕಾದ ಜನರು ಯುದ್ಧರಂಗದಲ್ಲಿ ಅಮ್ಮೋನಿಯರ ಜೊತೆಯಲ್ಲಿ ಒಟ್ಟಾಗಿ ನಿಲ್ಲಲಿಲ್ಲ. ಅಧ್ಯಾಯವನ್ನು ನೋಡಿ |