Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 10:9 - ಕನ್ನಡ ಸಮಕಾಲಿಕ ಅನುವಾದ

9 ಯೋವಾಬನು, ಯುದ್ಧವು ತನ್ನ ವಿರೋಧವಾಗಿ ಹಿಂದೆಯೂ, ಮುಂದೆಯೂ ಇರುವುದನ್ನು ಕಂಡಾಗ, ಅವನು ಇಸ್ರಾಯೇಲಿನ ಎಲ್ಲಾ ಶ್ರೇಷ್ಠ ಸೈನಿಕರನ್ನು ಆಯ್ದುಕೊಂಡು, ಅರಾಮ್ಯರಿಗೆ ಎದುರಾಗಿ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೋವಾಬನು ತನ್ನ ಮುಂದೆಯೂ, ಹಿಂದೆಯೂ ಯುದ್ಧ ಪ್ರಾರಂಭವಾದದ್ದನ್ನು ಕಂಡು ಇಸ್ರಾಯೇಲ್ಯರಲ್ಲಿ ಶ್ರೇಷ್ಠರಾದ ಸೈನಿಕರನ್ನು ಆರಿಸಿಕೊಂಡು, ಅವರನ್ನು ಅರಾಮ್ಯರಿಗೆ ವಿರೋಧವಾಗಿ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಯೋವಾಬನು ತನ್ನ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾದದ್ದನ್ನು ಕಂಡು ಇಸ್ರಯೇಲರಲ್ಲಿ ಶ್ರೇಷ್ಠರಾದ ಸೈನಿಕರನ್ನು ಆರಿಸಿಕೊಂಡು ಅವರನ್ನು ಸಿರಿಯಾದವರಿಗೆ ವಿರುದ್ಧ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೋವಾಬನು ತನ್ನ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾದದ್ದನ್ನು ಕಂಡು ಇಸ್ರಾಯೇಲ್ಯರಲ್ಲಿ ಶ್ರೇಷ್ಠರಾದ ಸೈನಿಕರನ್ನು ಆರಿಸಿಕೊಂಡು ಅವರನ್ನು ಅರಾಮ್ಯರಿಗೆ ವಿರೋಧವಾಗಿ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅಮ್ಮೋನಿಯರು ತಮ್ಮ ವಿರುದ್ಧವಾಗಿ ಹಿಂದೆ ಮತ್ತು ಮುಂದೆ ನಿಂತಿರುವುದನ್ನು ನೋಡಿದ ಯೋವಾಬನು ಇಸ್ರೇಲರಲ್ಲಿ ಶ್ರೇಷ್ಠರಾದವರನ್ನು ಆರಿಸಿಕೊಂಡು ಅರಾಮ್ಯರ ವಿರುದ್ಧ ಯುದ್ಧಮಾಡಲು ಅವರನ್ನು ಸಾಲಾಗಿ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 10:9
6 ತಿಳಿವುಗಳ ಹೋಲಿಕೆ  

ಆಗ ಅಮ್ಮೋನಿಯರು ಹೊರಟು ಪಟ್ಟಣದ ದ್ವಾರದ ಹತ್ತಿರ ವ್ಯೂಹ ಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬಿನಿಂದಲೂ ಟೋಬಿನಿಂದಲೂ ಮಾಕಾನಿಂದಲೂ ಬಂದ ಅರಾಮ್ಯರು ಪ್ರತ್ಯೇಕವಾಗಿ ಬೈಲಿನಲ್ಲಿ ಇಳಿದುಕೊಂಡಿದ್ದರು.


ಉಳಿದ ಜನರನ್ನು ಅಮ್ಮೋನಿಯರಿಗೆದುರಾಗಿ ವ್ಯೂಹ ಕಟ್ಟುವ ಹಾಗೆ, ಅವರನ್ನು ತನ್ನ ತಮ್ಮನಾದ ಅಬೀಷೈಯನ ಕೈಯಲ್ಲಿ ಒಪ್ಪಿಸಿಕೊಟ್ಟು,


ದಾವೀದನು ಜನರಲ್ಲಿ ಮೂರನೆಯ ಪಾಲನ್ನು ಯೋವಾಬನಿಗೂ, ಎರಡನೆಯ ಪಾಲನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆಗಿರುವ ಅಬೀಷೈಗೂ, ಮೂರನೆಯ ಪಾಲನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿದನು. ತರುವಾಯ ಅರಸನು ಸೈನಿಕರಿಗೆ, “ನಾನೂ ನಿಮ್ಮ ಸಂಗಡ ಹೊರಟು ಬರುತ್ತೇನೆ,” ಎಂದನು.


ಯೆಹೂದದವರು ಹಿಂದಕ್ಕೆ ನೋಡಿದಾಗ, ಯುದ್ಧವು ಅವರ ಮುಂದೆಯೂ ಹಿಂದೆಯೂ ಇತ್ತು. ಆಗ ಯೆಹೋವ ದೇವರಿಗೆ ಅವರು ಮೊರೆಯಿಟ್ಟರು. ಯಾಜಕರು ತುತೂರಿಗಳನ್ನು ಊದಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು