Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 11:11 - ಕನ್ನಡ ಸಮಕಾಲಿಕ ಅನುವಾದ

11 ಊರೀಯನು ದಾವೀದನಿಗೆ, “ಮಂಜೂಷವೂ, ಇಸ್ರಾಯೇಲಿನವರೂ, ಯೆಹೂದದವರೂ ಡೇರೆಗಳಲ್ಲಿ ವಾಸಿಸಿರುವಾಗಲೂ; ನನ್ನ ಒಡೆಯನಾದ ಯೋವಾಬನೂ, ನನ್ನ ಒಡೆಯನ ಸೇವಕರೂ ಬೈಲಿನಲ್ಲಿ ದಂಡಿಳಿದಿರುವಾಗ ನಾನು ಉಣ್ಣುವುದಕ್ಕೂ, ಕುಡಿಯುವುದಕ್ಕೂ, ನನ್ನ ಹೆಂಡತಿಯ ಸಂಗಡ ಮಲಗುವುದಕ್ಕೂ ನನ್ನ ಮನೆಗೆ ಹೋಗಲೋ? ನಿನ್ನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ಈ ಕಾರ್ಯ ಮಾಡುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದಕ್ಕೆ ಊರೀಯನು, “ಒಡಂಬಡಿಕೆಯ ಮಂಜೂಷವೂ, ಇಸ್ರಾಯೇಲ್ಯರೂ, ಯೆಹೂದ್ಯರೂ ಗುಡಾರಗಳಲ್ಲಿ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ, ಅವನ ಸೇವಕರೂ ಬಯಲಿನಲ್ಲಿ ಪಾಳೆಯಮಾಡಿಕೊಂಡಿದ್ದಾರೆ. ಹೀಗಿರುವಾಗ ನಾನು ಮಾತ್ರ ನನ್ನ ಮನೆಗೆ ಹೋಗಿ ಊಟಮಾಡಿ, ಕುಡಿದು, ಹೆಂಡತಿಯೊಡನೆ ಮಲಗಿಕೊಳ್ಳುವುದು ಹೇಗೆ? ನಿನ್ನಾಣೆ, ನಿನ್ನ ಜೀವದ ಆಣೆ, ನಾನು ಇಂಥದ್ದನ್ನು ಮಾಡುವುದೇ ಇಲ್ಲ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದಕ್ಕೆ ಊರೀಯನು, “ಒಡಂಬಡಿಕೆಯ ಮಂಜೂಷ, ಇಸ್ರಯೇಲರು ಹಾಗು ಯೆಹೂದ್ಯರು ಗುಡಾರಗಳಲ್ಲೇ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ ಅವನ ಸೇವಕರೂ ಬಯಲಿನಲ್ಲೇ ಪಾಳೆಯಮಾಡಿಕೊಂಡಿದ್ದಾರೆ. ಹೀಗಿರುವಲ್ಲಿ, ನಾನು ನನ್ನ ಮನೆಗೆ ಹೋಗಿ ಉಂಡು, ಕುಡಿದು, ಹೆಂಡತಿಯೊಡನೆ ಮಲಗಿಕೊಳ್ಳುವುದು ಹೇಗೆ? ನಿಮ್ಮಾಣೆ, ನಿಮ್ಮ ಜೀವದ ಆಣೆ, ನಾನು ಇಂಥದನ್ನು ಎಂದಿಗೂ ಮಾಡಲಾರೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅದಕ್ಕೆ ಊರೀಯನು - ಒಡಂಬಡಿಕೆಯ ಮಂಜೂಷವೂ ಇಸ್ರಾಯೇಲ್ಯರೂ ಯೆಹೂದ್ಯರೂ ಗುಡಾರಗಳಲ್ಲಿ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ ಅವನ ಸೇವಕರೂ ಬೈಲಿನಲ್ಲಿ ಪಾಳೆಯ ಮಾಡಿಕೊಂಡಿದ್ದಾರೆ. ಹೀಗಿರುವಲ್ಲಿ ನಾನು ನನ್ನ ಮನೆಗೆ ಹೋಗಿ ಉಂಡು ಕುಡಿದು ಹೆಂಡತಿಯೊಡನೆ ಮಲಗಿಕೊಳ್ಳುವದು ಹೇಗೆ? ನಿನ್ನಾಣೆ, ನಿನ್ನ ಜೀವದ ಆಣೆ, ನಾನು ಇಂಥದನ್ನು ಮಾಡುವದೇ ಇಲ್ಲ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಊರೀಯನು ದಾವೀದನಿಗೆ, “ಪವಿತ್ರ ಪೆಟ್ಟಿಗೆಯೂ ಇಸ್ರೇಲಿನ ಮತ್ತು ಯೆಹೂದದ ಸೈನಿಕರೂ ಗುಡಾರಗಳಲ್ಲಿ ನೆಲೆಸಿದ್ದಾರೆ. ನನ್ನ ಒಡೆಯನಾದ ಯೋವಾಬನು ಮತ್ತು ನನ್ನ ರಾಜನ ಸೇವಕರು ಹೊಲದಲ್ಲಿ ಪಾಳೆಯ ಮಾಡಿಕೊಂಡಿದ್ದಾರೆ. ಆದ್ದರಿಂದ ಅನ್ನಪಾನಗಳನ್ನು ತೆಗೆದುಕೊಳ್ಳುವುದಕ್ಕೂ ಪತ್ನಿಯ ಜೊತೆಯಲ್ಲಿ ಮಲಗುವುದಕ್ಕೂ ನಾನು ಮನೆಗೆ ಹೋಗುವುದು ಸರಿಯಲ್ಲ. ನಿನ್ನಾಣೆ, ನಿನ್ನ ಜೀವದಾಣೆ, ನಾನು ಇಂಥದನ್ನು ಮಾಡುವುದೇ ಇಲ್ಲ.” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 11:11
19 ತಿಳಿವುಗಳ ಹೋಲಿಕೆ  

ಒಂದು ದಿನ ಅರಸನು ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಆದರೆ ದೇವರ ಮಂಜೂಷವು ಗುಡಾರದಲ್ಲಿರುತ್ತದೆ,” ಎಂದನು.


ಆದ್ದರಿಂದ ದಾವೀದನು ಅಬೀಷೈಯನಿಗೆ, “ಈಗ ಅಬ್ಷಾಲೋಮನಿಗಿಂತ ಬಿಕ್ರಿಯ ಮಗ ಶೆಬನು ನಮಗೆ ಹೆಚ್ಚಿನ ಕೇಡನ್ನು ಮಾಡುವನು. ಅವನು ತನಗೆ ಗಡಿ ಪಟ್ಟಣಗಳನ್ನು ಸಂಪಾದಿಸಿಕೊಂಡು, ನಮ್ಮಿಂದ ತಪ್ಪಿಸಿಕೊಳ್ಳದೆ ಹಾಗೆ ನೀನು ನಿನ್ನ ಯಜಮಾನನ ಸೇವಕರನ್ನು ತೆಗೆದುಕೊಂಡು ಹೊರಟು ಅವನನ್ನು ಹಿಂದಟ್ಟು,” ಎಂದನು.


ನಿಶ್ಚಯವಾಗಿ ನಾನು ಈಜಿಪ್ಟಿನಿಂದ ಇಸ್ರಾಯೇಲರನ್ನು ಬರಮಾಡಿದ ದಿವಸ ಮೊದಲುಗೊಂಡು ಇಂದಿನವರೆಗೂ ಆಲಯದಲ್ಲಿ ವಾಸಮಾಡದೆ ಗುಡಾರದಲ್ಲೇ ವಾಸಿಸುತ್ತಾ ಅವರೊಡನೆ ಸಂಚರಿಸಿದೆನು.


“ನನ್ನ ಒಡೆಯನೇ, ನಿನ್ನ ಪ್ರಾಣದ ಸಾಕ್ಷಿ, ಇಲ್ಲಿ ಯೆಹೋವ ದೇವರಿಗೆ ಪ್ರಾರ್ಥನೆಮಾಡಿ, ಇಲ್ಲಿ ನಿನ್ನ ಬಳಿಯಲ್ಲಿ ನಿಂತಿದ್ದ ಸ್ತ್ರೀಯು ನಾನೇ. ಈ ಮಗುವಿಗೋಸ್ಕರ ಪ್ರಾರ್ಥನೆ ಮಾಡಿದೆನು.


ನಾವು ಸಹಿಸಿಕೊಳ್ಳುವವರಾಗಿದ್ದರೆ ಕ್ರಿಸ್ತ ಯೇಸುವಿನ ಜೊತೆಯಲ್ಲಿ ನಾವು ಸಹ ಆಳುವೆವು. ಅವರನ್ನು ನಿರಾಕರಿಸಿದರೆ ಅವರು ಸಹ ನಮ್ಮನ್ನು ನಿರಾಕರಿಸುವರು.


ಹಾಗಾದರೆ ನಿಮ್ಮ ಕರ್ತನೂ ಬೋಧಕನೂ ಆಗಿರುವ ನಾನೇ ನಿಮ್ಮ ಪಾದಗಳನ್ನು ತೊಳೆದಿರುವಾಗ ನೀವು ಸಹ ಒಬ್ಬರ ಪಾದಗಳನ್ನೊಬ್ಬರು ತೊಳೆಯಬೇಕು.


ಅದಕ್ಕೆ ಅರಸನು, “ಇದೆಲ್ಲಾದರಲ್ಲಿ ಯೋವಾಬನ ಕೈ ನಿನ್ನ ಸಂಗಡ ಉಂಟಲ್ಲವೋ?” ಎಂದು ಕೇಳಿದನು. ಆ ಸ್ತ್ರೀಯು ಉತ್ತರವಾಗಿ, “ನಿನ್ನ ಜೀವದಾಣೆ, ಅರಸನಾದ ನನ್ನ ಒಡೆಯನೇ, ನೀನು ಒಂದು ಮಾತು ಹೇಳಿದರೆ, ನಾವು ಅದನ್ನು ಬಿಟ್ಟು ಎಡಕ್ಕಾದರೂ, ಬಲಕ್ಕಾದರೂ ಜಾರಿಕೊಳ್ಳುವುದಕ್ಕೆ ಆಗುವುದಿಲ್ಲ; ಏಕೆಂದರೆ ನಿನ್ನ ಸೇವಕನಾದ ಯೋವಾಬನು ನನಗೆ ಆಜ್ಞಾಪಿಸಿ, ಈ ಎಲ್ಲಾ ಮಾತುಗಳನ್ನು ನಿನ್ನ ಸೇವಕಳಿಗೆ ಹೇಳಿಕೊಟ್ಟನು.


ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವುದಕ್ಕೂ, ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವುದಕ್ಕೂ ಹೋಗುವುದನ್ನು ದೇವರು ತಡೆದದ್ದರಿಂದ, ಯೆಹೋವ ದೇವರ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ ನಿನ್ನ ಶತ್ರುಗಳೂ, ನನ್ನ ಒಡೆಯನಿಗೆ ಕೇಡನ್ನು ಹುಡುಕುವವರೂ ನಾಬಾಲನ ಹಾಗೆಯೇ ಆಗಲಿ.


ದಾವೀದನು ಪ್ರಮಾಣಮಾಡಿ, “ನಿನ್ನ ಕಣ್ಣು ಮುಂದೆ ನನಗೆ ದಯೆ ದೊರಕಿತೆಂದು ನಿನ್ನ ತಂದೆಯು ನಿಶ್ಚಲವಾಗಿ ಬಲ್ಲನು. ಆದಕಾರಣ ಅವನು ಯೋನಾತಾನನು ವ್ಯಥೆಪಡದ ಹಾಗೆ, ‘ಅವನು ಇದನ್ನು ತಿಳಿಯಬಾರದು,’ ಎಂದು ಹೇಳುತ್ತಾನೆ. ನಿಶ್ಚಯವಾಗಿ ಯೆಹೋವ ದೇವರಾಣೆ, ನನ್ನ ಪ್ರಾಣದಾಣೆ, ನನಗೂ ಮರಣಕ್ಕೂ ಒಂದು ಹೆಜ್ಜೆ ಮಾತ್ರ ದೂರ ಇದೆ,” ಎಂದನು.


ದಾವೀದನು ಫಿಲಿಷ್ಟಿಯನಿಗೆ ಎದುರಾಗಿ ಹೊರಟು ಹೋಗುವುದನ್ನು ಸೌಲನು ಕಂಡಾಗ, ತನ್ನ ಸೈನ್ಯಾಧಿಪತಿಯಾದ ಅಬ್ನೇರನಿಗೆ, “ಅಬ್ನೇರನೇ, ಈ ಯುವಕನು ಯಾರ ಮಗನು?” ಎಂದನು. ಅದಕ್ಕೆ ಅಬ್ನೇರನು, “ಅರಸನೇ, ನಿನ್ನ ಪ್ರಾಣದಾಣೆ ನಾನರಿಯೆ,” ಎಂದನು.


ಆಗ ಸೌಲನು ಅಹೀಯನಿಗೆ, “ನೀನು ದೇವರ ಮಂಜೂಷವನ್ನು ತೆಗೆದುಕೊಂಡು ಬಾ,” ಎಂದನು. ಏಕೆಂದರೆ ದೇವರ ಮಂಜೂಷವು ಆ ಕಾಲದಲ್ಲಿ ಇಸ್ರಾಯೇಲರ ಬಳಿಯಲ್ಲಿತ್ತು.


ಕೆರೂಬಿಗಳ ಮಧ್ಯದಲ್ಲಿರುವ ಸೇನಾಧೀಶ್ವರ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬರಲು ಶೀಲೋವಿಗೆ ಜನರನ್ನು ಕಳುಹಿಸಿದರು. ಅಲ್ಲಿ ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ, ಫೀನೆಹಾಸನೂ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿದ್ದರು.


ಊರೀಯನು ತನ್ನ ಮನೆಗೆ ಹೋಗಲಿಲ್ಲವೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ದಾವೀದನು ಊರೀಯನಿಗೆ, “ನೀನು ಪ್ರಯಾಣದಿಂದ ಬರಲಿಲ್ಲವೋ? ಏಕೆ ನಿನ್ನ ಮನೆಗೆ ಹೋಗಲಿಲ್ಲ?” ಎಂದನು.


ಆಗ ಮೋಶೆಯು ಗಾದನ ಮಕ್ಕಳಿಗೂ, ರೂಬೇನನ ಮಕ್ಕಳಿಗೂ, “ನಿಮ್ಮ ಸಹೋದರರು ಯುದ್ಧಕ್ಕೆ ಹೋಗುವಾಗ ನೀವು ಇಲ್ಲಿ ಕುಳಿತಿರಬೇಕೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು