2 ಸಮುಯೇಲ 11:16 - ಕನ್ನಡ ಸಮಕಾಲಿಕ ಅನುವಾದ16 ಹಾಗೆಯೇ ಯೋವಾಬನು ಆ ಪಟ್ಟಣವನ್ನು ಮುತ್ತಿಗೆ ಹಾಕುವಾಗ, ಯಾವ ಸ್ಥಳದಲ್ಲಿ ಪರಾಕ್ರಮಶಾಲಿಗಳು ಇರುವರೆಂದು ತಿಳಿದುಕೊಂಡು, ಅಲ್ಲಿ ಊರೀಯನನ್ನು ನಿಲ್ಲಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯೋವಾಬನು ಪಟ್ಟಣಕ್ಕೆ ಮುತ್ತಿಗೆ ಹಾಕುವಾಗ ಶೂರರಾದ ಶತ್ರುಸೈನಿಕರು ಎಲ್ಲಿರುತ್ತಾರೆಂದು ಗೊತ್ತುಮಾಡಿಕೊಂಡು ಊರೀಯನನ್ನು ಅಲ್ಲಿ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಯೋವಾಬನು ಪಟ್ಟಣಕ್ಕೆ ಮುತ್ತಿಗೆ ಹಾಕುವಾಗ ಶತ್ರುಸೈನಿಕರು ಎಲ್ಲಿ ಪ್ರಬಲರಾಗಿರುತ್ತಾರೆಂದು ಗೊತ್ತುಮಾಡಿಕೊಂಡು ಊರೀಯನನ್ನು ಅಲ್ಲಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯೋವಾಬನು ಪಟ್ಟಣಕ್ಕೆ ಮುತ್ತಿಗೆಹಾಕುವಾಗ ಶೂರರಾದ ಶತ್ರುಸೈನಿಕರೆಲ್ಲಿರುತ್ತಾರೆಂದು ಗೊತ್ತುಮಾಡಿಕೊಂಡು ಊರೀಯನನ್ನು ಅಲ್ಲಿ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅಮ್ಮೋನಿಯರಲ್ಲಿ ಅತ್ಯಂತ ಧೈರ್ಯಶಾಲಿಗಳು ಆ ನಗರದಲ್ಲಿ ಎಲ್ಲಿರುವರೆಂಬುದನ್ನು ಯೋವಾಬನು ಗುರುತಿಸಿದನು. ಆ ಸ್ಥಳಕ್ಕೆ ಕಳುಹಿಸಲು ಊರೀಯನನ್ನು ಆರಿಸಿಕೊಂಡನು. ಅಧ್ಯಾಯವನ್ನು ನೋಡಿ |
ಆಗ ಯೇಹುವು ಅವರಿಗೆ ಎರಡನೆಯ ಸಾರಿ ಪತ್ರವನ್ನು ಬರೆದು, “ನೀವು ನನ್ನವರಾಗಿದ್ದು ನನ್ನ ಮಾತು ಕೇಳುವವರಾಗಿದ್ದರೆ, ನಾಳೆ ಇಷ್ಟು ಹೊತ್ತಿಗೆ ಇಜ್ರೆಯೇಲ್ ಪಟ್ಟಣಕ್ಕೆ ನಿಮ್ಮ ಯಜಮಾನನ ಪುತ್ರರ ತಲೆಗಳನ್ನು ತೆಗೆದುಕೊಂಡು ನನ್ನ ಬಳಿಗೆ ಬನ್ನಿರಿ,” ಎಂದು ಹೇಳಿದನು. ಆದರೆ ಅರಸನ ಮಕ್ಕಳಾದ ಎಪ್ಪತ್ತು ಮಂದಿ ಮನುಷ್ಯರು ಪಟ್ಟಣದ ಪ್ರಮುಖರ ಬಳಿಯಲ್ಲಿ ಇದ್ದರು. ಅವರು ಅವರನ್ನು ಪೋಷಿಸುತ್ತಿದ್ದರು.
ಅವರು ಗೋಡೆಯಿಂದ ಬಾಣಗಳನ್ನು ಎಸೆಯುವರೆಂದು ನಿಮಗೆ ತಿಳಿದಿರಲಿಲ್ಲವೋ? ಯೆರುಬ್ಬೆಷೆತನ ಮಗ ಅಬೀಮೆಲೆಕನನ್ನು ಕೊಂದವರ‍್ಯಾರು? ತೆಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲಿನ ತುಂಡನ್ನು ಅವನ ಮೇಲೆ ಹಾಕಿದಾಗ, ಅವನು ಸತ್ತನಲ್ಲವೋ? ನೀವು ಗೋಡೆಗೆ ಅಷ್ಟು ಸಮೀಪ ಏಕೆ ಹೋದಿರಿ?’ ಎಂದು ಕೇಳಿದರೆ; ಆಗ ನೀನು ಅವನಿಗೆ, ನಿಮ್ಮ ಸೇವಕನಾದ ಊರೀಯನೆಂಬ ಹಿತ್ತಿಯನು ಸತ್ತನೆಂದು ಹೇಳು,” ಎಂದನು.