Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 11:21 - ಕನ್ನಡ ಸಮಕಾಲಿಕ ಅನುವಾದ

21 ಅವರು ಗೋಡೆಯಿಂದ ಬಾಣಗಳನ್ನು ಎಸೆಯುವರೆಂದು ನಿಮಗೆ ತಿಳಿದಿರಲಿಲ್ಲವೋ? ಯೆರುಬ್ಬೆಷೆತನ ಮಗ ಅಬೀಮೆಲೆಕನನ್ನು ಕೊಂದವರ‍್ಯಾರು? ತೆಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲಿನ ತುಂಡನ್ನು ಅವನ ಮೇಲೆ ಹಾಕಿದಾಗ, ಅವನು ಸತ್ತನಲ್ಲವೋ? ನೀವು ಗೋಡೆಗೆ ಅಷ್ಟು ಸಮೀಪ ಏಕೆ ಹೋದಿರಿ?’ ಎಂದು ಕೇಳಿದರೆ; ಆಗ ನೀನು ಅವನಿಗೆ, ನಿಮ್ಮ ಸೇವಕನಾದ ಊರೀಯನೆಂಬ ಹಿತ್ತಿಯನು ಸತ್ತನೆಂದು ಹೇಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆರುಬ್ಬೇಷೆತನ ಮಗನಾದ ಅಬೀಮೆಲೇಕನನ್ನು ಕೊಂದವರು ಯಾರು ಎಂದು ನಿಮಗೆ ಗೊತ್ತಿಲ್ಲವೋ? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲನ್ನು ಅವನ ಮೇಲೆ ಎತ್ತಿ ಹಾಕಿ ಅವನನ್ನು ಕೊಂದಳಲ್ಲವೇ. ಹೀಗಿರುವುದರಿಂದ ನೀವು ಗೋಡೆಯ ಸಮೀಪಕ್ಕೆ ಹೋದದ್ದೇಕೆ?’ ಎಂದು ಕೇಳಿದರೆ ನೀನು, ಹಿತ್ತಿಯನಾದ ನಿನ್ನ ಸೇವಕ ಊರೀಯನು ಮೃತನಾದನೆಂದು ಹೇಳು” ಎಂಬುದಾಗಿ ಆಜ್ಞಾಪಿಸಿ ಅವನನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಯೆರುಬ್ಬೆಷೆತನ ಮಗನಾದ ಅಬೀಮೆಲೆಕನನ್ನು ಕೊಂದವರಾರೆಂದು ನಿಮಗೆ ಗೊತ್ತಿಲ್ಲವೇ? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲನ್ನು ಅವನ ಮೇಲೆ ಎತ್ತಿಹಾಕಿ ಅವನನ್ನು ಕೊಂದಳಲ್ಲವೇ? ಹೀಗಿರುವುದರಿಂದ ನೀವು ಗೋಡೆಯ ಸಮೀಪಕ್ಕೆ ಹೋದದ್ದೇಕೆ?’ ಎಂದು ಕೇಳಿದರೆ ನೀನು, ‘ಹಿತ್ತಿಯನಾದ ನಿಮ್ಮ ಸೇವಕ ಊರೀಯನೂ ಮೃತನಾದನೆಂದು ಹೇಳು,’ ಎಂಬುದಾಗಿ ಆಜ್ಞಾಪಿಸಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೆರುಬ್ಬೆಷೆತನ ಮಗನಾದ ಅಬೀಮೆಲೆಕನನ್ನು ಕೊಂದವರಾರೆಂದು ನಿಮಗೆ ಗೊತ್ತಿಲ್ಲವೋ? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಣಿಂದ ಒಂದು ಬೀಸುವ ಕಲ್ಲನ್ನು ಅವನ ಮೇಲೆ ಎತ್ತಿಹಾಕಿ ಅವನನ್ನು ಕೊಂದಳಲ್ಲವೇ. ಹೀಗಿರುವದರಿಂದ ನೀವು ಗೋಡೆಯ ಸಮೀಪಕ್ಕೆ ಹೋದದ್ದೇನು ಎಂದು ಕೇಳಿದರೆ ನೀನು - ಹಿತ್ತಿಯನಾದ ನಿನ್ನ ಸೇವಕ ಊರೀಯನೂ ಮೃತಿಹೊಂದಿದನೆಂದು ಹೇಳು ಎಂಬದಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆರುಬ್ಬೆಷೆತನ ಮಗನಾದ ಅಬೀಮೆಲೆಕನನ್ನು ಯಾರು ಕೊಂದರೆಂಬುದು ನಿಮಗೆ ಗೊತ್ತಿಲ್ಲವೇ? ಅಬೀಮೆಲೆಕನ ಮೇಲೆ ಬೀಸುವ ಕಲ್ಲನ್ನು ನಗರದ ಗೋಡೆಯ ಮೇಲಿನಿಂದ ಎಸೆದವಳು ತೇಬೇಚಿನ ಒಬ್ಬ ಹೆಂಗಸಲ್ಲವೇ? ನೀವು ಗೋಡೆಯ ಹತ್ತಿರಕ್ಕೆ ಏಕೆ ಹೋದಿರಿ?’ ಎಂದು ಹೇಳಬಹುದು. ಆಗ ನೀನು, ‘ಹಿತ್ತಿಯನಾದ ನಿನ್ನ ಸೇವಕ ಊರೀಯನು ಸಹ ಸತ್ತುಹೋದನು’ ಎಂದು ಉತ್ತರಿಸಬೇಕು” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 11:21
11 ತಿಳಿವುಗಳ ಹೋಲಿಕೆ  

ಗಿದ್ಯೋನನೆಂಬ ಯೆರುಬ್ಬಾಳನೂ, ಅವನ ಸಂಗಡ ಇದ್ದ ಜನರೆಲ್ಲರೂ ಉದಯದಲ್ಲಿ ಎದ್ದು, ಹೆರೋದಿನ ಬಾವಿಯ ಬಳಿಯಲ್ಲಿ ದಂಡಿಳಿಸಿದರು. ಮಿದ್ಯಾನ್ಯರ ದಂಡು ಅವರಿಗೆ ಉತ್ತರಕ್ಕೆ ಮೋರೆ ಬೆಟ್ಟದ ತಗ್ಗಿನಲ್ಲಿ ಇಳಿದಿತ್ತು.


ನಿನ್ನ ಕೈಗಳು ಕಟ್ಟಿರಲಿಲ್ಲ. ನಿನ್ನ ಕಾಲಿಗೆ ಬೇಡಿ ಹಾಕಿರಲಿಲ್ಲ. ಒಬ್ಬನು ದುಷ್ಟರ ಮುಂದೆ ಬೀಳುವ ಹಾಗೆಯೇ ನೀನು ಬಿದ್ದು ಹೋದೆ.” ಆಗ ಜನರೆಲ್ಲರು ತಿರುಗಿ ಅವನಿಗೋಸ್ಕರ ಅತ್ತರು.


ಅಬ್ನೇರನು ಹೆಬ್ರೋನಿಗೆ ತಿರುಗಿ ಬಂದ ತರುವಾಯ ಯೋವಾಬನ ಬಾಗಿಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತನಾಡಿ, ಅವನನ್ನು ಒಂದು ಕಡೆ ಕರೆದುಕೊಂಡು ಹೋಗಿ, ತನ್ನ ತಮ್ಮ ಅಸಾಯೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಹೊಟ್ಟೆಯಲ್ಲಿ ಇರಿದು ಕೊಂದುಹಾಕಿದನು.


ಗಿದ್ಯೋನನು ಬಾಳನ ಬಲಿಪೀಠವನ್ನು ಕೆಡವಿದ ಕಾರಣ ಅವರು ಆ ದಿವಸದಲ್ಲಿ, “ಬಾಳನೇ ವ್ಯಾಜ್ಯವಾಡಲಿ” ಎಂದು ಹೇಳಿದ್ದರಿಂದ ಗಿದ್ಯೋನನಿಗೆ ಯೆರುಬ್ಬಾಳ ಎಂಬ ಹೆಸರಾಯಿತು.


ಅವರೆಲ್ಲರು, “ನಮ್ಮ ಹಾಗೆ ನೀನು ಸಹ ಬಲಹೀನನಾಗಿದ್ದೀ. ನೀನು ನಮ್ಮ ಸಮಾನನಾಗಿದ್ದೀ,” ಎಂದು ಮಾತನಾಡಿ ಹೇಳುವರು.


ನನ್ನ ಎಲ್ಲಾ ಉಲ್ಲಂಘನೆಗಳಿಂದ ನನ್ನನ್ನು ಬಿಡಿಸಿರಿ; ಬುದ್ಧಿಹೀನನ ನಿಂದೆಗೆ ನನ್ನನ್ನು ಪರಿಹಾಸ್ಯ ಮಾಡಬೇಡಿರಿ.


ಪಟ್ಟಣದ ಮನುಷ್ಯರು ಹೊರಟು ಯೋವಾಬನ ಸಂಗಡ ಯುದ್ಧಮಾಡುವಾಗ, ದಾವೀದನ ಸೇವಕರಾದವರಲ್ಲಿ ಕೆಲವರು ಸತ್ತರು. ಇದಲ್ಲದೆ ಹಿತ್ತಿಯನಾದ ಊರೀಯನೂ ಸತ್ತನು.


ಅರಸನಿಗೆ ಕೋಪ ಉರಿದು, ‘ನೀವು ಯುದ್ಧಮಾಡುವುದಕ್ಕೆ ಪಟ್ಟಣಕ್ಕೆ ಇಷ್ಟು ಸಮೀಪವಾಗಿ ಸೇರಿದ್ದೇನು?


ಹಾಗೆಯೇ ಆ ದೂತನು ಹೋಗಿ ದಾವೀದನಿಗೆ ಯೋವಾಬನು ತನ್ನೊಂದಿಗೆ ಕಳುಹಿಸಿದ ವರ್ತಮಾನಗಳನ್ನೆಲ್ಲಾ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು