2 ಸಮುಯೇಲ 11:27 - ಕನ್ನಡ ಸಮಕಾಲಿಕ ಅನುವಾದ27 ದುಃಖದ ದಿವಸಗಳು ತೀರಿದ ತರುವಾಯ, ದಾವೀದನು ಅವಳನ್ನು ತನ್ನ ಮನೆಗೆ ಕರೆಯಕಳುಹಿಸಿದನು. ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕಾರ್ಯವು ಯೆಹೋವ ದೇವರ ದೃಷ್ಟಿಗೆ ಕೆಟ್ಟದ್ದಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ದುಃಖಕಾಲವು ತೀರಿದ ನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರತರಿಸಿ, ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು. ಆಕೆಯು ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕೃತ್ಯಗಳು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದೂ, ಅನೀತಿಯೂ ಆಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ದುಃಖಕಾಲ ತೀರಿದನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರೆಯಿಸಿ ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು. ಆಕೆ ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನ ಈ ಕೃತ್ಯ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ದುಃಖಕಾಲ ತೀರಿದನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರತರಿಸಿ ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು; ಆಕೆಯು ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನ ಈ ಕೃತ್ಯವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಅವಳು ತನ್ನ ಶೋಕಕಾಲವನ್ನು ಮುಗಿಸಿದ ನಂತರ, ಅವಳನ್ನು ತನ್ನ ಮನೆಗೆ ಕರೆತರಲು ದಾವೀದನು ಸೇವಕರನ್ನು ಕಳುಹಿಸಿದನು. ಅವಳು ದಾವೀದನ ಪತ್ನಿಯಾದಳು. ಅವಳು ದಾವೀದನಿಂದ ಒಂದು ಗಂಡುಮಗುವಿಗೆ ಜನ್ಮನೀಡಿದಳು. ದಾವೀದನು ಮಾಡಿದ ಈ ಕೆಟ್ಟಕಾರ್ಯವು ಯೆಹೋವನಿಗೆ ದುಃಖವನ್ನುಂಟುಮಾಡಿತು. ಅಧ್ಯಾಯವನ್ನು ನೋಡಿ |