Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:17 - ಕನ್ನಡ ಸಮಕಾಲಿಕ ಅನುವಾದ

17 ಅವನನ್ನು ಎಬ್ಬಿಸುವುದಕ್ಕೆ ಅವನ ಮನೆಯ ಹಿರಿಯರು ಅವನ ಬಳಿಗೆ ಬಂದರು. ಆದರೆ ಅವನಿಗೆ ಮನಸ್ಸಿಲ್ಲದೆ ಇತ್ತು. ಅವರ ಸಂಗಡ ಭೋಜನ ಮಾಡದೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವನ ಮನೆಯ ಹಿರಿಯ ಸೇವಕರು ಅವನನ್ನು ಎಬ್ಬಿಸುವುದಕ್ಕೆ ಹೋದರು. ಆದರೆ ಅವನು ಏಳಲೇ ಇಲ್ಲ. ಅವರೊಡನೆ ಆಹಾರ ತೆಗೆದುಕೊಳ್ಳಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆಸ್ಥಾನದ ಅಧಿಕಾರಿಗಳು ಅವನನ್ನು ಎಬ್ಬಿಸುವುದಕ್ಕೆ ಹೋದರು. ಆದರೆ ಅವನು ಏಳಲೂ ಇಲ್ಲ, ಅವರೊಡನೆ ಆಹಾರ ತೆಗೆದುಕೊಳ್ಳಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವನ ಮನೆಯ ಹಿರೀಸೇವಕರು ಅವನನ್ನು ಎಬ್ಬಿಸುವದಕ್ಕೆ ಹೋದರು. ಆದರೆ ಅವನು ಏಳಲೂ ಇಲ್ಲ. ಅವರೊಡನೆ ಆಹಾರ ತೆಗೆದುಕೊಳ್ಳಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ದಾವೀದನ ಕುಟುಂಬದ ನಾಯಕರು ಬಂದು ಅವನನ್ನು ನೆಲದಿಂದ ಮೇಲಕ್ಕೆತ್ತಲು ಪ್ರಯತ್ನಿಸಿದರು. ಆದರೆ ದಾವೀದನು ಮೇಲೇಳಲಿಲ್ಲ. ಅವನು ಈ ನಾಯಕರೊಂದಿಗೆ ಊಟ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:17
7 ತಿಳಿವುಗಳ ಹೋಲಿಕೆ  

ಇನ್ನೂ ಹೊತ್ತಿರುವಾಗಲೇ ಜನರೆಲ್ಲರು ಬಂದು ಊಟಮಾಡು ಎಂದು ದಾವೀದನಿಗೆ ಹೇಳಿದರು. ಅದಕ್ಕೆ ದಾವೀದನು, “ಸೂರ್ಯನು ಅಸ್ತಮಿಸುವುದಕ್ಕಿಂತ ಮುಂಚೆ ನಾನು ರೊಟ್ಟಿಯನ್ನಾಗಲಿ, ಬೇರೆ ಯಾವ ಆಹಾರವನ್ನಾಗಲಿ ರುಚಿ ನೋಡಿದರೆ, ದೇವರು ನನಗೆ ಬೇಕಾದದ್ದನ್ನು ಮಾಡಲಿ, ಅಧಿಕವಾಗಿಯೂ ಮಾಡಲಿ,” ಎಂದು ಆಣೆ ಇಟ್ಟುಕೊಂಡನು.


ಅದಕ್ಕವನು, “ನಾನು ತಿನ್ನುವುದಿಲ್ಲ,” ಎಂದನು. ಆದರೆ ಅವನ ದಾಸರೂ, ಆ ಸ್ತ್ರೀಯೂ ಅವನನ್ನು ಬಲವಂತ ಮಾಡಿದ್ದರಿಂದ, ಅವನು ಅವರ ಮಾತನ್ನು ಕೇಳಿ, ನೆಲವನ್ನು ಬಿಟ್ಟು ಎದ್ದು, ಮಂಚದ ಮೇಲೆ ಕುಳಿತುಕೊಂಡನು.


ಅಬ್ರಹಾಮನು ತನಗೆ ಇದ್ದವುಗಳ ಮೇಲೆಲ್ಲಾ ಆಡಳಿತ ಮಾಡುವ ತನ್ನ ಮನೆಯ ಹಿರಿಯ ಸೇವಕನಿಗೆ, “ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಡು,


ಮಗುವು ಏಳನೆಯ ದಿವಸ ಸತ್ತು ಹೋಯಿತು. ಆಗ ಮಗುವು ಸತ್ತು ಹೋಯಿತೆಂದು ದಾವೀದನ ಸೇವಕರು ಅವನಿಗೆ ತಿಳಿಸುವುದಕ್ಕೆ ಭಯಪಟ್ಟರು. ಏಕೆಂದರೆ, “ಮಗುವು ಇನ್ನೂ ಬದುಕಿರುವಾಗ, ನಾವು ಅವನ ಸಂಗಡ ಮಾತನಾಡಿದಾಗ, ಅವನು ನಮ್ಮ ಮಾತನ್ನು ಕೇಳದೆ ಹೋದನು. ಈಗ ಮಗುವು ಸತ್ತು ಹೋಯಿತೆಂದು ನಾವು ಅವನಿಗೆ ಹೇಳಿದರೆ, ಅವನು ತನಗೆ ಏನಾದರೂ ಕೇಡುಮಾಡಿಕೊಳ್ಳುವನೋ?” ಎಂದುಕೊಂಡರು.


ನನ್ನ ಹೃದಯವು ಬಾಡಿಹೋಗಿ ಹುಲ್ಲಿನ ಹಾಗೆ ಒಣಗಿಹೋಗಿದೆ; ನಾನು ಊಟಮಾಡುವುದಕ್ಕೆ ಸಹ ಮರೆತುಬಿಡುತ್ತೇನೆ.


ಆಮೇಲೆ ಅರಸನು ತನ್ನ ಅರಮನೆಗೆ ಹಿಂದಿರುಗಿ, ಉಪವಾಸದಿಂದಲೇ ರಾತ್ರಿಯನ್ನು ಕಳೆದನು. ಗಾನ, ವಾದ್ಯಗಳನ್ನು ಅವನ ಮುಂದೆ ತರಲಿಲ್ಲ. ಅರಸನಿಗೆ ನಿದ್ರೆ ಬರಲಿಲ್ಲ.


ಅವನ ಪುತ್ರಪುತ್ರಿಯರೆಲ್ಲಾ ಅವನನ್ನು ಆದರಿಸಿದರೂ ಅವನು ಆದರಣೆ ಹೊಂದಲೊಲ್ಲದೆ, “ನನ್ನ ಮಗನಿರುವ ಸಮಾಧಿಗೆ ದುಃಖದಿಂದಲೇ ಇಳಿದು ಹೋಗುವೆನು,” ಎಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು