Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:18 - ಕನ್ನಡ ಸಮಕಾಲಿಕ ಅನುವಾದ

18 ಮಗುವು ಏಳನೆಯ ದಿವಸ ಸತ್ತು ಹೋಯಿತು. ಆಗ ಮಗುವು ಸತ್ತು ಹೋಯಿತೆಂದು ದಾವೀದನ ಸೇವಕರು ಅವನಿಗೆ ತಿಳಿಸುವುದಕ್ಕೆ ಭಯಪಟ್ಟರು. ಏಕೆಂದರೆ, “ಮಗುವು ಇನ್ನೂ ಬದುಕಿರುವಾಗ, ನಾವು ಅವನ ಸಂಗಡ ಮಾತನಾಡಿದಾಗ, ಅವನು ನಮ್ಮ ಮಾತನ್ನು ಕೇಳದೆ ಹೋದನು. ಈಗ ಮಗುವು ಸತ್ತು ಹೋಯಿತೆಂದು ನಾವು ಅವನಿಗೆ ಹೇಳಿದರೆ, ಅವನು ತನಗೆ ಏನಾದರೂ ಕೇಡುಮಾಡಿಕೊಳ್ಳುವನೋ?” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಏಳನೆಯ ದಿನ ಮಗು ಸತ್ತುಹೋಯಿತು. ಅವನ ಸೇವಕರು ಭಯಪಟ್ಟು ಈ ವರ್ತಮಾನವನ್ನು ದಾವೀದನಿಗೆ ತಿಳಿಸಲಿಲ್ಲ. ಅವರು, “ಹುಡುಗನು ಜೀವದಿಂದಿದ್ದಾಗಲೇ ಅವನು ನಮ್ಮ ಸಂತೈಸುವಿಕೆಯನ್ನು ಲಕ್ಷಿಸಲಿಲ್ಲ. ಹೀಗಿರುವಲ್ಲಿ ಮಗುವಿನ ಮರಣದ ವಾರ್ತೆಯನ್ನು ಅವನಿಗೆ ತಿಳಿಸಿದರೆ ಅವನು ತನಗೆ ಏನಾದರೂ ಕೇಡುಮಾಡಿಕೊಂಡಾನಲ್ಲವೇ” ಎಂದು ಮಾತನಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಏಳನೆಯ ದಿನದಲ್ಲಿ ಮಗು ಸತ್ತಿತು. ಅವನ ಸೇವಕರು ಭಯಪಟ್ಟು ಈ ವರ್ತಮಾನವನ್ನು ದಾವೀದನಿಗೆ ತಿಳಿಸಲಿಲ್ಲ. ಅವರು, “ಹುಡುಗನು ಜೀವದಿಂದಿದ್ದಾಗಲೇ ಅವರು ನಮ್ಮ ಸಂತಾಪವನ್ನು ಲಕ್ಷಿಸಲಿಲ್ಲ. ಹೀಗಿರುವಲ್ಲಿ ಮಗುವಿನ ಮರಣವಾರ್ತೆಯನ್ನು ಅವರಿಗೆ ತಿಳಿಸಿದರೆ ಅವರು ತನಗೆ ಏನಾದರೂ ಕೇಡುಮಾಡಿಕೊಂಡಾರಲ್ಲವೇ?”, ಎಂದು ಮಾತಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಏಳನೆಯ ದಿನದಲ್ಲಿ ಮಗುವು ಸತ್ತಿತು; ಅವನ ಸೇವಕರು ಭಯಪಟ್ಟು ಈ ವರ್ತಮಾನವನ್ನು ದಾವೀದನಿಗೆ ತಿಳಿಸಲಿಲ್ಲ. ಅವರು - ಹುಡುಗನು ಜೀವದಿಂದಿದ್ದಾಗಲೇ ಅವನು ನಮ್ಮ ಸಂತೈಸುವಿಕೆಯನ್ನು ಲಕ್ಷಿಸಲಿಲ್ಲ. ಹೀಗಿರುವಲ್ಲಿ ಮಗುವಿನ ಮರಣವಾರ್ತೆಯನ್ನು ಅವನಿಗೆ ತಿಳಿಸಿದರೆ ಅವನು ತನಗೆ ಏನಾದರೂ ಕೇಡುಮಾಡಿಕೊಂಡಾನಲ್ಲವೇ ಎಂದು ಮಾತಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಏಳನೆಯ ದಿನ ಆ ಮಗು ಸತ್ತಿತು. ಮಗು ಸತ್ತದ್ದನ್ನು ದಾವೀದನಿಗೆ ತಿಳಿಸಲು ಅವನ ಸೇವಕರು ಅಂಜಿದರು. ಅವರು, “ನೋಡಿ, ಮಗು ಜೀವಂತವಾಗಿರುವಾಗ ನಾವು ದಾವೀದನೊಂದಿಗೆ ಮಾತನಾಡಲು ಪ್ರಯತ್ನಿಸಿದೆವು. ಆದರೆ ಅವನು ನಮ್ಮ ಮಾತನ್ನು ಕೇಳಲಿಲ್ಲ. ಮಗುವು ಸತ್ತಿತೆಂದು ನಾವು ದಾವೀದನಿಗೆ ತಿಳಿಸಿದರೆ, ಬಹುಶಃ ಅವನು ತನಗೆ ಏನಾದರೂ ಕೇಡುಮಾಡಿಕೊಳ್ಳುತ್ತಾನೆ” ಎಂಬುದಾಗಿ ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:18
3 ತಿಳಿವುಗಳ ಹೋಲಿಕೆ  

ನಮ್ಮ ಪಿತೃಗಳು ಈಜಿಪ್ಟಿಗೆ ಇಳಿದು ಹೋದರು. ಈಜಿಪ್ಟಿನಲ್ಲಿ ಬಹಳ ದಿವಸ ವಾಸವಾಗಿದ್ದೆವು ಮತ್ತು ಈಜಿಪ್ಟಿನವರು ನಮಗೂ, ನಮ್ಮ ಪಿತೃಗಳಿಗೆ ಕೇಡನ್ನು ಮಾಡಿದರು.


ಅವನನ್ನು ಎಬ್ಬಿಸುವುದಕ್ಕೆ ಅವನ ಮನೆಯ ಹಿರಿಯರು ಅವನ ಬಳಿಗೆ ಬಂದರು. ಆದರೆ ಅವನಿಗೆ ಮನಸ್ಸಿಲ್ಲದೆ ಇತ್ತು. ಅವರ ಸಂಗಡ ಭೋಜನ ಮಾಡದೆ ಇದ್ದನು.


ಆದರೆ ದಾವೀದನು ತನ್ನ ಸೇವಕರು ಪಿಸುಗುಟ್ಟುವುದನ್ನು ಕಂಡು, ಮಗು ಸತ್ತು ಹೋಯಿತೆಂದು ಗ್ರಹಿಸಿಕೊಂಡನು. ದಾವೀದನು ತನ್ನ ಸೇವಕರಿಗೆ, “ಮಗುವು ಸತ್ತು ಹೋಯಿತೋ?” ಎಂದನು. ಅವರು, “ಸತ್ತು ಹೋಯಿತು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು