Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:23 - ಕನ್ನಡ ಸಮಕಾಲಿಕ ಅನುವಾದ

23 ಆದರೆ ಈಗ ಸತ್ತಿದೆಯಲ್ಲಾ. ನಾನು ಉಪವಾಸ ಮಾಡುವುದು ಏಕೆ? ನಾನು ಅದನ್ನು ತಿರುಗಿ ಬರಮಾಡಬಲ್ಲೆನೋ? ನಾನು ಅದರ ಬಳಿಗೆ ಹೋಗುವೆನು. ಆದರೆ ಅದು ನನ್ನ ಬಳಿಗೆ ತಿರುಗಿ ಬರುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಈಗ ಸತ್ತುಹೋದನಲ್ಲಾ. ನಾನೇಕೆ ಉಪವಾಸಮಾಡಬೇಕು? ಅವನನ್ನು ಹಿಂದಕ್ಕೆ ತರುವುದು ನನ್ನಿಂದಾದೀತೆ? ನಾನಾಗಿ ಅವನ ಬಳಿಗೆ ಹೋಗಬೇಕೇ ಹೊರತು ಅವನು ನನ್ನ ಬಳಿಗೆ ಬರುವುದಿಲ್ಲ” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಈಗ ಸತ್ತಿದ್ದಾನೆ ಅಲ್ಲವೆ? ನಾನೇಕೆ ಉಪವಾಸ ಮಾಡಬೇಕು? ಅವನನ್ನು ಹಿಂದಕ್ಕೆ ತರಲು ನನ್ನಿಂದಾದೀತೇ? ನಾನಾಗಿ ಅವನ ಬಳಿಗೆ ಹೋಗಬೇಕೇ ಹೊರತು ಅವನು ನನ್ನ ಬಳಿಗೆ ಬರುವುದಿಲ್ಲ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಈಗ ಸತ್ತಿದ್ದಾನಲ್ಲಾ, ನಾನೇಕೆ ಉಪವಾಸಮಾಡಬೇಕು? ಅವನನ್ನು ಹಿಂದಕ್ಕೆ ತರುವದು ನನ್ನಿಂದಾದೀತೇ? ನಾನಾಗಿ ಅವನ ಬಳಿಗೆ ಹೋಗಬೇಕೇ ಹೊರತು ಅವನು ನನ್ನ ಬಳಿಗೆ ಬರುವದಿಲ್ಲ ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೆ ಈಗ ಮಗು ಸತ್ತುಹೋಗಿದೆ. ಆದ್ದರಿಂದ ಈಗ ನಾನೇಕೆ ಉಪವಾಸಮಾಡಬೇಕು? ಆ ಮಗುವಿಗೆ ಮತ್ತೆ ನಾನು ಜೀವವನ್ನು ಕೊಡಲು ಸಾಧ್ಯವೇ? ಇಲ್ಲ! ಎಂದಾದರೂ ಒಂದು ದಿನ ನಾನು ಅವನ ಬಳಿಗೆ ಹೋಗುತ್ತೇನೆ. ಆದರೆ ಅವನು ನನ್ನ ಬಳಿಗೆ ಹಿಂದಿರುಗುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:23
6 ತಿಳಿವುಗಳ ಹೋಲಿಕೆ  

ಅವನ ಪುತ್ರಪುತ್ರಿಯರೆಲ್ಲಾ ಅವನನ್ನು ಆದರಿಸಿದರೂ ಅವನು ಆದರಣೆ ಹೊಂದಲೊಲ್ಲದೆ, “ನನ್ನ ಮಗನಿರುವ ಸಮಾಧಿಗೆ ದುಃಖದಿಂದಲೇ ಇಳಿದು ಹೋಗುವೆನು,” ಎಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.


ಆಗ ಯೇಸು ಅವನಿಗೆ, “ಈ ದಿನವೇ ನೀನು ನನ್ನ ಸಂಗಡ ಪರದೈಸಿನಲ್ಲಿರುವೆ ಎಂದು ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.


ದೇವರೇ, ನೀವು ನನ್ನನ್ನು ಎಲ್ಲಾ ಜೀವಿಗಳಿಗೆ ನೇಮಕವಾದ ಮನೆಯೆಂಬ ಮರಣಕ್ಕೆ, ಸೇರಿಸುವಿರಿ ಎಂದು ನನಗೆ ಗೊತ್ತಿದೆ.


ನಾನು ಹಿಂದಿರುಗಲಾಗದ ಮಬ್ಬಾಗಿರುವ ಕತ್ತಲೆಯ ದೇಶಕ್ಕೆ ಸೇರಲಿರುವೆನು.


“ಭೂಮಿಯಲ್ಲಿರುವವರೆಲ್ಲರು ಹೋಗುವ ಮಾರ್ಗವಾಗಿ ನಾನು ಹೋಗುತ್ತೇನೆ. ನೀನು ಬಲಗೊಂಡು ಶೂರನಾಗಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು