Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:26 - ಕನ್ನಡ ಸಮಕಾಲಿಕ ಅನುವಾದ

26 ಯೋವಾಬನು ಅಮ್ಮೋನಿಯರ ರಬ್ಬತಿನ ಮೇಲೆ ಯುದ್ಧಮಾಡಿ, ಅರಮನೆ ಇದ್ದ ಪಟ್ಟಣವನ್ನು ವಶಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೋವಾಬನು ಅಮ್ಮೋನಿಯರ ಪಟ್ಟಣವಾದ ರಬ್ಬಕ್ಕೆ ಮುತ್ತಿಗೆ ಹಾಕಿ ಅರಮನೆಯಿದ್ದ ಭಾಗವನ್ನು ಸ್ವಾಧೀನಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಯೋವಾಬನು ಅಮ್ಮೋನಿಯರ ಪಟ್ಟಣವಾದ ರಬ್ಬಕ್ಕೆ ಮುತ್ತಿಗೆ ಹಾಕಿದನು. ಅರಮನೆ ಇದ್ದ ಭಾಗವನ್ನು ಸ್ವಾಧೀನಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯೋವಾಬನು ಅಮ್ಮೋನಿಯರ ಪಟ್ಟಣವಾದ ರಬ್ಬಕ್ಕೆ ಮುತ್ತಿಗೆಹಾಕಿ ಅರಮನೆಯಿದ್ದ ಭಾಗವನ್ನು ಸ್ವಾಧೀನಮಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯೋವಾಬನು ಅಮ್ಮೋನಿಯರ ರಾಜಧಾನಿಯಾದ ರಬ್ಬಕ್ಕೆ ವಿರುದ್ಧವಾಗಿ ಹೋರಾಡಿ ಆ ನಗರವನ್ನು ವಶಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:26
9 ತಿಳಿವುಗಳ ಹೋಲಿಕೆ  

ರೆಫಾಯರಲ್ಲಿ ಬಾಷಾನಿನ ಅರಸನಾದ ಓಗನು ಮಾತ್ರ ಉಳಿದಿದ್ದನು. ಅವನ ಮಂಚವು ಕಬ್ಬಿಣದ ಮಂಚ. ಅದು ಅಮ್ಮೋನಿಯರ ರಬ್ಬಾದಲ್ಲಿ ಈಗಲೂ ಉಂಟಲ್ಲವೋ? ಅದರ ಉದ್ದ ಪುರುಷನ ಕೈ ಅಳತೆಯ ಪ್ರಕಾರ ಒಂಬತ್ತು ಮೊಳ, ಅಗಲ ನಾಲ್ಕು ಮೊಳ ಇತ್ತು.


ಆಗ ದಾವೀದನು ಆ ದೂತನಿಗೆ, “ನೀನು ಯೋವಾಬನಿಗೆ, ‘ಇದು ನಿನ್ನನ್ನು ಕದಲಿಸದಿರಲಿ. ಖಡ್ಗವು ಇವನನ್ನಾದರೂ ಸರಿ, ಅವನನ್ನಾದರೂ ಸರಿ ತಿಂದುಬಿಡುವುದು. ನೀನು ಪಟ್ಟಣವನ್ನು ನಿರ್ಮೂಲ ಮಾಡುವ ಹಾಗೆ, ಅದರ ಮೇಲೆ ನಿನ್ನ ಯುದ್ಧವು ಹೆಚ್ಚು ಬಲವಾಗಿರಲಿ,’ ಎಂದು ಹೇಳಿ, ಅವನನ್ನು ಬಲಪಡಿಸು,” ಎಂದನು.


ಮರು ವರ್ಷ ವಸಂತ ಕಾಲದಲ್ಲಿ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ದಾವೀದನು ಯೋವಾಬನನ್ನೂ, ಅವನ ಸಂಗಡದಲ್ಲಿದ್ದ ಅವನ ಸೇವಕರನ್ನೂ, ಸಮಸ್ತ ಇಸ್ರಾಯೇಲರನ್ನೂ ಕಳುಹಿಸಿದನು. ಅವರು ಅಮ್ಮೋನಿಯರ ಪ್ರಾಂತಗಳನ್ನು ಹಾಳು ಮಾಡಿ ರಬ್ಬ ನಗರಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು.


ಪ್ರವಾದಿಯಾದ ನಾತಾನನ ಮುಖಾಂತರ ಯೆಹೋವ ದೇವರ ನಿಮಿತ್ತ ಅವನಿಗೆ ಯೆದೀದ್ಯ ಎಂದು ಹೆಸರಿಟ್ಟನು.


ಯೋವಾಬನು ದಾವೀದನಿಗೆ, “ನಾನು ರಬ್ಬಕ್ಕೆ ವಿರೋಧವಾಗಿ ಯುದ್ಧಮಾಡಿ, ನೀರು ಪೂರೈಕೆಯ ಭಾಗವನ್ನು ಸ್ವಾಧೀನ ಮಾಡಿಕೊಂಡಿದ್ದೇನೆ.


ದಾವೀದನು ಮಹನಯಿಮಿಗೆ ಬಂದಾಗ, ಅಮ್ಮೋನಿಯರ ರಬ್ಬಾ ಪಟ್ಟಣದ ನಾಹಾಷನ ಮಗ ಶೋಬಿಯೂ, ಲೋದೆಬಾರು ಊರಿನವನಾಗಿರುವ ಅಮ್ಮಿಯೇಲನ ಮಗ ಮಾಕೀರನೂ, ರೋಗೆಲೀಮ್ ಊರಿನ ಗಿಲ್ಯಾದ್ಯನಾದ ಬರ್ಜಿಲ್ಲೈಯೂ


ನಾನು ರಬ್ಬಾ ಪಟ್ಟಣವನ್ನು ಒಂಟೆಗಳ ನಿವಾಸ ಸ್ಥಳವಾಗಿ ಮತ್ತು ಅಮ್ಮೋನ್ ದೇಶವನ್ನು ಮಂದೆಗಳು ಮಲಗುವ ಸ್ಥಳವನ್ನಾಗಿ ಮಾಡುವೆನು. ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ.


ಕೋಟೆಯ ಪಟ್ಟಣಕ್ಕೆ ನನ್ನನ್ನು ಕರೆತರುವವರು ಯಾರು? ಎದೋಮಿಗೆ ನನ್ನನ್ನು ನಡೆಸುವವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು