2 ಸಮುಯೇಲ 12:9 - ಕನ್ನಡ ಸಮಕಾಲಿಕ ಅನುವಾದ9 ನೀನು ಯೆಹೋವ ದೇವರ ದೃಷ್ಟಿಗೆ ಈ ಕೆಟ್ಟ ಕಾರ್ಯವನ್ನು ಮಾಡುವಂತೆ ಅವರ ವಾಕ್ಯವನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಖಡ್ಗದಿಂದ ಹೊಡೆದು ಹಾಕಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯಾಗಿ ತೆಗೆದುಕೊಂಡೆ. ಇದಲ್ಲದೆ ಅವನನ್ನು ಅಮ್ಮೋನಿಯರ ಖಡ್ಗದಿಂದ ಕೊಂದು ಹಾಕಿಸಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಹೀಗಿರಲು ನೀನು ಯೆಹೋವನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ, ನನ್ನ ದೃಷ್ಟಿಯಲ್ಲಿ ಅನೀತಿಯನ್ನು ಕೆಟ್ಟದ್ದಾಗಿರುವುದನ್ನು ಮಾಡಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಹೀಗಿರಲು, ನೀನು ಸರ್ವೇಶ್ವರನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದೇಕೆ? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಹೀಗಿರಲು ನೀನು ಯೆಹೋವನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ ನನ್ನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವದನ್ನು ಮಾಡಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನೀನು ಯೆಹೋವನ ಆಜ್ಞೆಯನ್ನು ಏಕೆ ಕಡೆಗಣಿಸಿದೆ? ಆತನು ತಪ್ಪೆಂದು ಹೇಳಿದ ಕಾರ್ಯವನ್ನು ಏಕೆ ಮಾಡಿದೆ? ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ನೀನು ಕೊಲ್ಲಿಸಿದೆ. ಅವನ ಪತ್ನಿಯನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಿದೆ. ಹೌದು, ನೀನು ಅಮ್ಮೋನಿಯರ ಕತ್ತಿಯಿಂದ ಊರೀಯನನ್ನು ಕೊಲ್ಲಿಸಿದೆ. ಅಧ್ಯಾಯವನ್ನು ನೋಡಿ |