Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:19 - ಕನ್ನಡ ಸಮಕಾಲಿಕ ಅನುವಾದ

19 ಆಗ ತಾಮಾರಳು ತನ್ನ ತಲೆಯ ಮೇಲೆ ಬೂದಿಯನ್ನು ಹಾಕಿಕೊಂಡು, ತಾನು ಧರಿಸಿಕೊಂಡಿದ್ದ ವಿವಿಧ ಬಣ್ಣದ ವಸ್ತ್ರವನ್ನು ಹರಿದು, ತನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಗಟ್ಟಿಯಾಗಿ ಅಳುತ್ತಾ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ತಾಮಾರಳು ತಲೆಯ ಮೇಲೆ ಬೂದಿ ಹಾಕಿಕೊಂಡು ನಿಲುವಂಗಿಯನ್ನು ಹರಿದುಕೊಂಡು ಕೈಗಳನ್ನು ತಲೆಯ ಮೇಲಿಟ್ಟು ಗೋಳಾಡುತ್ತಾ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ತಾಮಾರಳು ತಲೆಯ ಮೇಲೆ ಬೂದಿ ಹಾಕಿಕೊಂಡು, ನಿಲುವಂಗಿಯನ್ನು ಹರಿದುಕೊಂಡು, ಕೈಗಳನ್ನು ತಲೆಯ ಮೇಲಿಟ್ಟು ಗೋಳಾಡುತ್ತಾ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ತಾಮಾರಳು ತಲೆಯ ಮೇಲೆ ಬೂದಿ ಹಾಕಿಕೊಂಡು ನಿಲುವಂಗಿಯನ್ನು ಹರಿದುಕೊಂಡು ಕೈಗಳನ್ನು ತಲೆಯ ಮೇಲಿಟ್ಟು ಗೋಳಾಡುತ್ತಾ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ತಾಮಾರಳು ಬೂದಿಯನ್ನು ತೆಗೆದುಕೊಂಡು ತನ್ನ ತಲೆಯ ಮೇಲೆ ಸುರಿದುಕೊಂಡು ತನ್ನ ನಿಲುವಂಗಿಯನ್ನು ಹರಿದುಕೊಂಡಳು; ತನ್ನ ತಲೆಯ ಮೇಲೆ ಕೈಗಳನ್ನಿಟ್ಟುಕೊಂಡು ಗಟ್ಟಿಯಾಗಿ ಗೋಳಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:19
10 ತಿಳಿವುಗಳ ಹೋಲಿಕೆ  

ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟು ಹೋಗುವೆ. ಏಕೆಂದರೆ ಯೆಹೋವ ದೇವರು ನೀನು ಭರವಸೆ ಇಟ್ಟವುಗಳನ್ನು ತಿರಸ್ಕರಿಸಿದ್ದಾರೆ, ಅವುಗಳ ಮುಖಾಂತರ ನಿನ್ನ ಕಾರ್ಯ ಸಫಲವಾಗುವುದಿಲ್ಲ.”


ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡನು. ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಂಜೆಯವರೆಗೆ ಯೆಹೋವ ದೇವರ ಮಂಜೂಷದ ಮುಂದೆ ನೆಲದ ಮೇಲೆ ಬೋರಲು ಬಿದ್ದರು.


ಆಗ ದಾವೀದನೂ, ಅವನ ಸಂಗಡ ಇದ್ದ ಸಮಸ್ತ ಜನರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು,


ಮೂರನೆಯ ದಿನದಲ್ಲಿ ಒಬ್ಬನು ತನ್ನ ವಸ್ತ್ರಗಳನ್ನು ಹರಿದುಕೊಂಡು, ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡು, ಸೌಲನ ಪಾಳೆಯದಿಂದ ಹೊರಟು ದಾವೀದನ ಬಳಿಗೆ ಬಂದು, ನೆಲದ ಮಟ್ಟಿಗೂ ಬಾಗಿ ನಮಸ್ಕರಿಸಿದನು.


ಆದ್ದರಿಂದ ನಾನು ಹೇಳಿದ್ದನ್ನೆಲ್ಲಾ ಹಿಂತೆಗೆದುಕೊಂಡು, ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ,” ಎಂದನು.


ಅವರು ಯೋಬನನ್ನು ದೂರದಿಂದ ನೋಡಿದಾಗ, ಅವನನ್ನು ಗುರುತಿಸಲು ಸಾಧ್ಯವಾಗಲಿಲ್ಲ. ಅವರು ಗಟ್ಟಿಯಾಗಿ ಅಳಲು ಪ್ರಾರಂಭಿಸಿದರು. ತಮ್ಮ ತಮ್ಮ ಮೇಲಂಗಿಗಳನ್ನು ಹರಿದುಕೊಂಡು, ಧೂಳನ್ನು ತಮ್ಮ ತಲೆಯ ಮೇಲೆ ಸುರಿಸಿಕೊಂಡರು.


ಆದದ್ದೆಲ್ಲಾ ಮೊರ್ದೆಕೈಗೆ ತಿಳಿದಾಗ ಮೊರ್ದೆಕೈ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಉಟ್ಟುಕೊಂಡು ಬೂದಿಯನ್ನು ಹಚ್ಚಿಕೊಂಡು ಪಟ್ಟಣದ ಮಧ್ಯದಲ್ಲಿ ಹೋಗಿ ಬಹು ದುಃಖದಿಂದ ಗೋಳಾಡಿದನು.


ಅದೇ ದಿವಸದಲ್ಲಿ ಬೆನ್ಯಾಮೀನನಾದ ಒಬ್ಬನು ತನ್ನ ವಸ್ತ್ರಗಳನ್ನು ಹರಿದುಕೊಂಡು, ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡು, ಯುದ್ಧರಂಗದಿಂದ ಶೀಲೋವಿಗೆ ಓಡಿಬಂದನು.


ರೂಬೇನನು ಗುಂಡಿಯ ಬಳಿಗೆ ತಿರುಗಿ ಬಂದಾಗ, ಯೋಸೇಫನು ಗುಂಡಿಯಲ್ಲಿ ಇಲ್ಲದ್ದರಿಂದ, ತನ್ನ ವಸ್ತ್ರಗಳನ್ನು ಹರಿದುಕೊಂಡನು.


ಆಗ ಅವಳ ಸಹೋದರ ಅಬ್ಷಾಲೋಮನು ಅವಳಿಗೆ, “ನಿನ್ನ ಸಹೋದರ ಅಮ್ನೋನನು ನಿನ್ನ ಮಾನಭಂಗ ಮಾಡಿದನೋ? ನನ್ನ ಸಹೋದರಿ, ಈಗ ಸುಮ್ಮನಿರು. ಅವನು ನಿನ್ನ ಸಹೋದರನು. ಈ ಕಾರ್ಯವನ್ನು ನಿನ್ನ ಮನಸ್ಸಿಗೆ ತೆಗೆದುಕೊಳ್ಳಬೇಡ,” ಎಂದನು. ಹಾಗೆಯೇ ತಾಮಾರಳು ತನ್ನ ಸಹೋದರ ಅಬ್ಷಾಲೋಮನ ಮನೆಯಲ್ಲಿ ಒಂಟಿಗಳಾಗಿ ವಾಸಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು